ಆ.09ರಂದು ಆಂಜನೇಯ ಸ್ವಾಮಿಯ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ಇದೇ ಆಗಸ್ಟ್ 09ರಂದು ಶ್ರೀ ಆಂಜನೇಯ ಸ್ವಾಮಿಯ ಪುನರ್ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 8 ರಿಂದ 9 ಗಂಟೆಯವರೆಗೆ ಸಿಂಹ ಲಗ್ನದಲ್ಲಿ ಶ್ರೀ ಸ್ವಾಮಿಯ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಕೊಟ್ಟೂರು ಕಟ್ಟಿಮನೆ ಹಿರೇಮಠದ ಯೋಗಿ ರಾಜೇಂದ್ರ ಶಿವಚಾರ್ಯ ಸ್ವಾಮಿಗಳು ಸಾನಿಧ್ಯವಹಿಸುವರು.
ಬೆಳಿಗ್ಗೆ 11 ರಿಂದ 12 ರವರೆಗೆ ತುಲಾ ಲಗ್ನದಲ್ಲಿ ಕಳಸ ಪ್ರತಿಷ್ಠಾಪನೆ ನಡೆಯಲಿದ್ದು, ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದಪುರಿ ಮಹಾಸ್ವಾಮಿಗಳು, ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ  ಚನ್ನಯ್ಯ ಮಹಾಸ್ವಾಮಿಗಳು, ನಾರಾಯಣ ಗುರು ಮಹಾಸಂಸ್ಥಾನದ ರೇಣುಕಾನಂದ ಮಹಾಸ್ವಾಮಿಗಳು, ಕುರುಬರಹಳ್ಳಿ ಜಾಮೀಯ ಮಸೀದಿ ಮುಸ್ಲಿಮ್ ಧರ್ಮ ಗುರು ಮಹಮ್ಮದ್ ಘುಪ್ರಾನ್ ಭಾಗವಹಿಸುವರು. ಮಧ್ಯಾಹ್ನ 12ಕ್ಕೆ ಧರ್ಮಸಭೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಸಂಸದ ಗೋವಿಂದ ಎಂ.ಕಾರಜೋ, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಮಾಜಿ ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ್, ಉದ್ಯಮಿಗಳಾದ ಜಿ.ಎಸ್.ಮಂಜುನಾಥ್ ಬಿ.ಟಿ.ಪುಟ್ಟಪ್ಪ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ವರ್ತಕ ಹಿರಾಚಂದ್ ಪುನ್ ಮಾಜೀ ಸೋನಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಕಮಲಾಕ್ಷ ಭಾಗವಹಿಸುವರು. ಬೆಳಿಗ್ಗೆ 8 ರಿಂದ ಅನ್ನಸಂತರ್ಪಣೆ, ಸಂಜೆ 5 ರಿಂದ ರಸಮಂಜರಿ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಕುರುಬರಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಪ್ರಕಟಣೆ ತಿಳಿಸಿದೆ.

ಆ.09ರಂದು ಆಂಜನೇಯ ಸ್ವಾಮಿಯ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ