ವಯೋನಿವೃತ್ತಿ: ಮುಖ್ಯ ಲೆಕ್ಕಾಧಿಕಾರಿ ಸಿ.ಜಿ.ಶ್ರೀನಿವಾಸ್‍ಗೆ ಸನ್ಮಾನ

ಚಿತ್ರದುರ್ಗ: ಸುದೀರ್ಘ 37 ವರ್ಷಗಳ ಕಾಲ ವಿವಿಧ ಇಲಾಖೆ ಹಾಗೂ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಹಾಗೂ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಸಿ.ಜಿ.ಶ್ರೀನಿವಾಸ್ ಅವರಿಗೆ ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಸಿ.ಜಿ.ಶ್ರೀನಿವಾಸ್ ಅವರು ದ್ವಿತೀಯ ದರ್ಜೆ ಸಹಾಯಕರಾಗಿ, ಪ್ರಥಮ ದರ್ಜೆ ಲೆಕ್ಕ ಸಹಾಯಕ, ಲೆಕ್ಕ ಅಧೀಕ್ಷಕರು, ಲೆಕ್ಕ ಪರಿಶೋಧನಾ ಅಧಿಕಾರಿಗಳು, ಲೆಕ್ಕಾಧಿಕಾರಿ, ಹಿರಿಯ ಉಪನಿರ್ದೇಶಕರು ಹಾಗೂ ಮುಖ್ಯ ಲೆಕ್ಕಾಧಿಕಾರಿಗಳಾಗಿ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಜಿಲ್ಲಾಧ್ಯಕ್ಷ ಡಾ.ಹೆಚ್.ಗುಡ್ಡದೇಶ್ವರಪ್ಪ, ಸುದೀರ್ಘ ಅವಧಿಗೆ ನಿಷ್ಠೆಯಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಸಿ.ಜಿ.ಶ್ರೀನಿವಾಸ್ ಅವರು ತಮ್ಮ ಸೇವಾವಧಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಅನುಪಮ ಸೇವೆ ಸಲ್ಲಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಾಬು, ಖಜಾಂಚಿ ಎಸ್.ಬಿ.ರವಿಶಂಕರ್, ಪದಾಧಿಕಾರಿಗಳಾದ ವಿಮಲಾ ನಾಗರಾಜ್, ಹರೀಶ್, ಸುಮಂತ್, ಪೊಲೀಸ್ ರವಿ, ಒ.ಬಿ.ಬಸವರಾಜ್, ರವಿಕುಮಾರ್, ಟಿ.ರಂಜಿತಾ, ಹೆಚ್.ತಿಪ್ಪಯ್ಯ, ಸತೀಶ್ ಸೇರಿದಂತೆ ಮತ್ತಿತರರು ಇದ್ದರು.

ವಯೋನಿವೃತ್ತಿ: ಮುಖ್ಯ ಲೆಕ್ಕಾಧಿಕಾರಿ ಸಿ.ಜಿ.ಶ್ರೀನಿವಾಸ್‍ಗೆ ಸನ್ಮಾನ