ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನು ಗೆದ್ದವರೇ ನಿಜವಾದ ಸಂತ:ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ

ಅಖಿಲ ಕರ್ನಾಟಕ ಬಂಜಾರ (ಲಂಬಾಣಿ) ಗುರುಪೀಠದ ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ ಮಾತನಾಡಿ. ಸಂತ ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯಕ್ಕೆ ಜ್ಞಾನ, ಅರಿವು ಮತ್ತು ಆಶ್ರಯ ನೀಡಿದ ಮಹಾನ್ ಗುರುಗಳಾಗಿದ್ದಾರೆ. ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನುಟಿ ಗೆದ್ದವರೇ ನಿಜವಾದ ಸಂತ ಎಂದು ಹೇಳಿದರು.
ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ ಜಿಲ್ಲಾಧ್ಯಕ್ಷ ಗಿರೀಶ್ ನಾಯ್ಕ್ ಆರ್ , ವಿಶೇಷ ಉಪನ್ಯಾಸ ನೀಡಿ, ಸಂತ ಸೇವಾಲಾಲ್ ಅವರು ಬುಡಕಟ್ಟು ಜನರಲ್ಲಿ ಧೈರ್ಯ ಸಾಹಸ, ಆತ್ಮಸ್ಥೈರ್ಯ ಮತ್ತು ಆತ್ಮಭಿಮಾನ ಮೂಡಿಸಿದರು. ಅವರ ಬೋಧನೆ ಮತ್ತು ಚಿಂತನೆಗಳು ಬಂಜಾರ ಜನಾಂಗದಲ್ಲಿ ಏಕತೆ ಉಂಟುಮಾಡಿರುವುದು. ಜನರಲ್ಲಿನ ಮೌಢ್ಯತೆ ತೊಲಗಿಸಿ ಅವರ ಬದುಕನ್ನು ಉದ್ಧರಿಸಿದ ಕಾಲಜ್ಞಾನಿ. ಇಂದು ಬಂಜಾರರು ಸಾಂಸ್ಕøತಿಕ ನೆಲೆಯಲ್ಲಿ ತಮ್ಮ ಅಸ್ಮಿತೆಯನ್ನು ಗುರುತಿಕೊಳ್ಳಲು ಈ ಮಹಾನುಭವರ ಸತ್ಕಾರ್ಯಗಳೇ ಕಾರಣ ಎಂದ ಹೇಳಿದರು.
 ಸಮುದಾಯದ ಜನರು ಮೂಢನಂಬಿಕೆಗಳನ್ನು ತೊರೆದು, ಅಜ್ಞಾನದಿಂದ ಹೊರಬಂದು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಬೋಧಿಸಿದರು. ಶಿಕ್ಷಣದಿಂದ ಜ್ಞಾನಸಂಪಾದಿಸಿ, ಶಿಕ್ಷಣವಿದ್ದರೆ ಮಾತ್ರ ಸಮುದಾಯ ಅಭಿವೃದ್ಧಿ ಹೊಂದಲು ಸಾಧ್ಯ.. ಸೇವಾಲಾಲರ ವಿಚಾರಗಳು ಕೇವಲ ಇತಿಹಾಸಕ್ಕೆ ಸೀಮಿತವಾಗದೆ, ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರ ಜಯಂತಿ ಅರ್ಥಪೂರ್ಣವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ತಹಶೀಲ್ದಾರ್ ಬಿ.ಎಂ.ಗೋವಿಂದರಾಜು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್,  ಬಂಜಾರ ಸಮುದಾಯದ ಮುಖಂಡರಾದ ನಾಗೇಂದ್ರ ನಾಯ್ಕ್, ಪ್ರಕಾಶ್ ರಮಾನಾಯ್ಕ್,  ಅನಂತನಾಯ್ಕ್, ಯಂಕಸಾದು, ಮಾಧವ ನಾಯ್ಕ,  ಗೀತ ಗೋವಿಂದರಾಜು, ರತ್ನಮ್ಮ, ಉಮೇಶ್, ಆನಂದ್ ಕುಮಾರ್, ಪಾಪಯ್ಯ, ಶ್ರೀನಿವಾಸ್ ನಾಯಕ ಸೇರಿದಂತೆ ಭೋವಿ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಇದ್ದರು

ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನು ಗೆದ್ದವರೇ ನಿಜವಾದ ಸಂತ:ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ