ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ 5000 ಕೋಟಿ ರೂ. ಮೀಸಲು

ಗೋನೂರು ಅಕ್ವಾಡೆಕ್ಟ್ ವರೆಗೆ ನೀರು ಹರಿಸಲು ತುರ್ತಾಗಿ 300 ಕೋಟಿ ರೂ. ಅನುದಾನ ಬಿಡುಗಡೆಗೆ ಮನವಿ ಮಧ್ಯ ಕರ್ನಾಟಕದ ಜೀವನಾಡಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ, ಮುಂಬರುವ 2026-27ನೇ ಸಾಲಿನ ಆಯವ್ಯಯದಲ್ಲಿ ₹5,000 ಕೋಟಿ ಅನುದಾನ ಮೀಸಲಿಡುವಂತೆ ಹಾಗೂ ಚಿತ್ರದುರ್ಗ ತಾಲ್ಲೂಕು ಗೋನೂರು ಅಕ್ವಾಡೆಕ್ಟ್ ವರೆಗೆ ಭದ್ರಾ ನೀರು ಹರಿಸುವ ಸಲುವಾಗಿ ಬಾಕಿ ಕಾಮಗಾರಿಗಾಗಿ ತುರ್ತಾಗಿ 300 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವಂತೆ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ […]