“ಕ್ಷಯರೋಗ ನಿರ್ಮೂಲನೆಗೆ ಜಿಲ್ಲಾಡಳಿತ ಬದ್ಧ : ಡಾ. ಸುಧಾ”

ವರದಿ :- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ)

ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಗಳಾದ ಡಾ. ಸುಧಾ ಅವರು ದೊಡ್ಡಉಳ್ಳಾರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಕ್ಷಯರೋಗ ನಿರ್ಮೂಲನೆ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕ್ಷಯರೋಗ ಮತ್ತು ಮಾತ್ರೆ ವಿತರಕರ ಸಭೆ ನಡೆಸಿ, ರೋಗಿಗಳ ಆರೈಕೆ ಹಾಗೂ ಚಿಕಿತ್ಸೆಯ ಪ್ರಗತಿ ಕುರಿತು ಚರ್ಚಿಸಿದರು.
ಅದರ ಜೊತೆಗೆ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಆಯೋಜಿಸಿ, ಕ್ಷಯರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವ ಫಲಾನುಭವಿಗಳಿಗೆ ಪೌಷ್ಠಿಕ ಆಹಾರದ ಕಿಟ್‌ಗಳು ಹಾಗೂ ಜೀನಿ ಪೌಡರ್ ಪಾಕೆಟ್‌ಗಳನ್ನು ವಿತರಿಸಲಾಯಿತು.
ಡಾ. ಸುಧಾ ಅವರು ಮಾತನಾಡಿ, ಕ್ಷಯರೋಗವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದು ಹಾಗೂ ಪೌಷ್ಠಿಕ ಆಹಾರ ಸೇವಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು. ರೋಗಿಗಳು ವೈದ್ಯರ ಸಲಹೆಯಂತೆ ನಿಯಮಿತವಾಗಿ ಮಾತ್ರೆಗಳನ್ನು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳುವಂತೆ ಕರೆ ನೀಡಿದರು.  ಕಾರ್ಯಕ್ರಮವನ್ನು ಡಾಕ್ಟರ್ ಶ್ರೀನಿವಾಸ್ ಆಡಳಿತ ವೈದ್ಯಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಲಾಯಿತು ಕಾರ್ಯಕ್ರಮದಲ್ಲಿ  ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಎ,ಸುಧಾಕರ ರೆಡ್ಡಿ ಹಾಗೂ ತಾಲ್ಲೂಕು  ಕ್ಷಯರೋಗ ಘಟಕದ ಮೇಲ್ವಿಚಾರಕರಾದ ರಘು, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಸ್ ಅಜಯ್, ದೇವರಾಜ್ ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು,

“ಕ್ಷಯರೋಗ ನಿರ್ಮೂಲನೆಗೆ ಜಿಲ್ಲಾಡಳಿತ ಬದ್ಧ : ಡಾ. ಸುಧಾ”

ಶ್ರೀ ಸಿ.ಟಿ ಕೃಷ್ಣ ಮೂರ್ತಿ ರವರು ತಮ್ಮ ಜೀವನವನ್ನು ಸಮಾಜದ ಒಳಿತಿಗಾಗಿ ಮುಡಿಪಾಗಿಟ್ಟ ವ್ಯಕ್ತಿ. ರಾಜಕೀಯ, ಸಾಮಾಜಿಕ ಹಾಗೂ ಮಾನವೀಯ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ಸೇವೆ ಅಪಾರ“ ಶ್ರೀ ಪೂಜ್ಯ ಶಿವಲಿಂಗಾನಂದ ಸ್ವಾಮೀಜಿ