ಹಿಂದುಳಿದ ಜಿಲ್ಲೆಗೆ ಹೋರಾಟ ಮಾಡಿದ ನಾಯಕನಿಗೆ ಸಚಿವ ಸ್ಥಾನ ಸಿಗಲೇಬೇಕು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ಒತ್ತಾಯ. ಕೆ.ಟಿ ಶಿವುಕುಮಾರ್

ವರದಿ:- ಅರುಣ್ ಕುಮಾರ್.ಎಸ್( ದೊಡ್ಡಉಳ್ಳಾರ್ತಿ)

Thank you for reading this post, don't forget to subscribe!

ಚಿತ್ರದುರ್ಗ, ಮೇ. 29 : ಮೂರು ಬಾರಿ ಶಾಸಕರಾಗಿ ಚಳ್ಳಕೆರೆ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯನ್ನಾಗಿ ಅಭಿವೃದ್ದಿಪಡಿಸಿರುವ ಶಾಸಕ ಟಿ.ರಘುಮೂರ್ತಿಗೆ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು
ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್.ನಿಜಲಿಂಗಪ್ಪನವರನ್ನು ಹೊರತುಪಡಿಸಿದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಬೇರೆ ಯಾರಿಗೂ ರಾಜಕೀಯವಾಗಿ ಉನ್ನತ ಸ್ಥಾನಮಾನ ಸಿಕ್ಕಿಲ್ಲ. ಮಧ್ಯ ಕರ್ನಾಟಕದ ಬಯಲು ಸೀಮೆ ಚಿತ್ರದುರ್ಗ ಜಿಲ್ಲೆ ಹಿಂದುಳಿದ ಪ್ರದೇಶ. ಚಳ್ಳಕೆರೆಗೆ ಮಂಜೂರಾಗಿದ್ದ ಡಿಗ್ರಿ ಕಾಲೇಜು ನಿಪ್ಪಾಣಿಗೆ ವರ್ಗಾವಣೆಗೊಂಡಾಗ ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಬೀದಿಗಿಳಿದು ಹೋರಾಟ ನಡೆಸಿದ ಟಿ.ರಘುಮೂರ್ತಿ ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜು ಆಗಬೇಕೆಂದು ಮೊಟ್ಟ ಮೊದಲು ಧ್ವನಿ ಎತ್ತಿದ ಏಕೈಕ ಶಾಸಕ. ಹಾಗಾಗಿ ಅವರನ್ನು ಉಪ ಮುಖ್ಯಮಂತ್ರಿ ಇಲ್ಲವೇ ಸಚಿವರನ್ನಾಗಿ ನೇಮಕ ಮಾಡಬೇಕೆಂದು ಕಾಂಗ್ರೆಸ್ ಹೈಕಮಾಂಡನ್ನು ಕೆ.ಟಿ.ಶಿವಕುಮಾರ್ ಆಗ್ರಹಿಸಿದರು
ಚಳ್ಳಕೆರೆಗೆ ಇಂಜಿನಿಯರ್ ಕಾಲೇಜನ್ನು ತಂದಿರುವ ಟಿ.ರಘುಮೂರ್ತಿಯವರ ಜನಪರ ಕಾಳಜಿಯಿಂದ ಹಿರಿಯೂರಿನ ವಾಣಿವಿಲಾಸಸಾಗರದ ನೀರು ಚಳ್ಳಕೆರೆಗೆ ಬರುವಂತಾಯಿತು. ರಸ್ತೆ ಅಗಲೀಕರಣವಾಗಿದೆ. ಕಾಂಗ್ರೆಸ್‍ಗೆ ನಿಷ್ಟರಾಗಿರುವ ಇವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಕೆ.ಟಿ.ಶಿವಕುಮಾರ್ ಆಗ್ರಹಿಸಿದರು.ಚಿತ್ರದುರ್ಗ ಜಿಲ್ಲಾ ಉಸ್ತುವಾರಿಗಳಾದ ಸಚಿವ ದಿವಂಗತ ಡಿ.ಸುಧಾಕರ್ ರವರಿಗೆ ಮೌನಚಾರಣೆ ಮೂಲಕ ಸಂತಾಪ ಸೂಚಿಸಲಾಯಿತು. ಇನ್ನೂ ಕಾರ್ಯಕ್ರಮದಲ್ಲಿ
ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ನಗರಾಧ್ಯಕ್ಷ ಅವಿನಾಶ್, ಕಾರ್ಯದರ್ಶಿ ಸಿ.ಜಗದೀಶ್, ಉಪಾಧ್ಯಕ್ಷ ಮುಜಾಹಿದ್ದೀನ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಖಿಲೇಶ್, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಪಾಂಡು, ಹಿರಿಯೂರು ತಾಲ್ಲೂಕು ಅಧ್ಯಕ್ಷ ತಿಪ್ಪೇಸ್ವಾಮಿ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಹಿಂದುಳಿದ ಜಿಲ್ಲೆಗೆ ಹೋರಾಟ ಮಾಡಿದ ನಾಯಕನಿಗೆ ಸಚಿವ ಸ್ಥಾನ ಸಿಗಲೇಬೇಕು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ಒತ್ತಾಯ. ಕೆ.ಟಿ ಶಿವುಕುಮಾರ್