ವರದಿ:- ಅರುಣ್ ಕುಮಾರ್.ಎಸ್( ದೊಡ್ಡ ಉಳ್ಳಾರ್ತಿ)
ಚಿತ್ರದುರ್ಗ:- ಚಳ್ಳಕೆರೆ ತಾಲ್ಲೂಕಿನ, ನಾಯಕನಹಟ್ಟಿಯ ಶ್ರೀ ವಾಲ್ಮೀಕಿ ಸಮುದಾಯ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಸೇನೆ) ಪದಾಧಿಕಾರಿಗಳು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಶ್ರೀ ಯುತ ಎನ್.ವೈ. ಗೋಪಾಲಕೃಷ್ಣ ರವರಿಗೆ ರಾಜ್ಯ ಸರ್ಕಾರವು ಉನ್ನತ ಸಚಿವ ಸ್ಥಾನ ನೀಡಿ ಜಿಲ್ಲೆಯ ಉಸ್ತುವಾರಿಯ ಜವಾಬ್ದಾರಿಯನ್ನೂ ವಹಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಚಳ್ಳಕೆರೆ ತಾಲ್ಲೂಕು ಘಟಕ ಅಧ್ಯಕ್ಷ ಪಿ. ಮುತ್ತಯ್ಯ ಮಾತನಾಡಿ:- ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಿರಿಯ ರಾಜಕಾರಣಿ ಎನ್.ವೈ. ಗೋಪಾಲಕೃಷ್ಣ ಅವರು.ತಮ್ಮ ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಶಿಕ್ಷಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಜನಪರ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ವಿಶ್ವಾಸ ಗಳಿಸಿರುವ ಅವರಿಗೆ ರಾಜ್ಯ ಸರ್ಕಾರದಲ್ಲಿ ಉನ್ನತ ಸಚಿವ ಸ್ಥಾನ ನೀಡುವ ಜೊತೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಈ ಕುರಿತು ನಾಯಕನಹಟ್ಟಿ ಹೋಬಳಿ ಘಟಕ ಅಧ್ಯಕ್ಷ ಕೆ.ಜೆ ಮಂಜಣ್ಣ ಮಾತನಾಡಿ :- ಎನ್.ವೈ. ಗೋಪಾಲಕೃಷ್ಣ ಅವರು ದೀರ್ಘ ರಾಜಕೀಯ ಅನುಭವ ಹೊಂದಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ನಾಯಕರು. ಗ್ರಾಮೀಣ ರಸ್ತೆ ಅಭಿವೃದ್ಧಿ, ಸಾರ್ವಜನಿಕ ಸೌಲಭ್ಯಗಳ ವಿಸ್ತರಣೆ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜನಮನ ಗೆದ್ದಿದ್ದಾರೆ ಎಂದು ಹೇಳಿದರು.ಚಿತ್ರದುರ್ಗ ಜಿಲ್ಲೆಯು ಹಲವು ಅಭಿವೃದ್ಧಿ ಯೋಜನೆಗಳ ನಿರೀಕ್ಷೆಯಲ್ಲಿದ್ದು, ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸಮಗ್ರ ಅರಿವು ಹೊಂದಿರುವ ಎನ್.ವೈ. ಗೋಪಾಲಕೃಷ್ಣ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿದರೆ ಸರ್ಕಾರದ ಯೋಜನೆಗಳು ಇನ್ನಷ್ಟು ವೇಗವಾಗಿ ಜನರಿಗೆ ತಲುಪಲಿವೆ. ಅಲ್ಲದೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯಲಿದೆ ಎಂದು ಅವರು ತಿಳಿಸಿದರು.ರಾಜ್ಯ ಸರ್ಕಾರವು ಜಿಲ್ಲೆಯ ಜನರ ಆಶಯವನ್ನು ಗೌರವಿಸಿ, ಅನುಭವಿ ಹಾಗೂ ಜನಪ್ರಿಯ ನಾಯಕರಾದ ಎನ್.ವೈ. ಗೋಪಾಲಕೃಷ್ಣ ಅವರಿಗೆ ಉನ್ನತ ಸಚಿವ ಸ್ಥಾನ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ನೀಡಬೇಕು ಎಂದು ಒತ್ತಾಯಿಸಿದರು.
ನಗರ ಘಟಕ ಅಧ್ಯಕ್ಷ,ಓ.ತಿಪ್ಪೇಸ್ವಾಮಿ ಮಾತನಾಡಿ:- ಚಿತ್ರದುರ್ಗ ಜಿಲ್ಲೆ ಹಲವು ವರ್ಷಗಳಿಂದ ಪ್ರಬಲ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿದ್ದು, ಜಿಲ್ಲೆಯ ಜನರ ಆಶಯ ಹಾಗೂ ನಿರೀಕ್ಷೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರು ಎನ್.ವೈ. ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ಮತ್ತು ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆಯನ್ನು ನೀಡಬೇಕು ಎಂದು ಆಗ್ರಹಿಸಿದರು.ಅವರ ರಾಜಕೀಯ ಅನುಭವ, ಜನಸೇವೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಿದರೆ ಜಿಲ್ಲೆಯ ಜನರ ಬಹುಕಾಲದ ಬೇಡಿಕೆಗೆ ನ್ಯಾಯ ದೊರೆಯಲಿದೆ. ಜೊತೆಗೆ ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಅನೇಕ ಅಭಿವೃದ್ಧಿ ಯೋಜನೆಗಳಿಗೆ ವೇಗ ಸಿಗಲಿದೆ.ಸರ್ಕಾರವು ಜಿಲ್ಲೆಯ ಹಿತದೃಷ್ಟಿಯಿಂದ ಸಕಾರಾತ್ಮಕ ನಿರ್ಧಾರ ಕೈಗೊಳ್ಳಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಸೇನೆ) ಚಳ್ಳಕೆರೆ ತಾಲ್ಲೂಕು ಘಟಕ ಅಧ್ಯಕ್ಷ ಪಿ.ಮುತ್ತಯ್ಯ. ನಾಯಕನಹಟ್ಟಿ ಹೋಬಳಿ ಘಟಕ ಅಧ್ಯಕ್ಷರಾದ ಕೆ.ಜೆ. ಮಂಜಣ್ಣ(ಜೋಗಿಹಟ್ಟಿ) ಮಹಿಳಾ ಅಧ್ಯಕ್ಷರಾದ ಬಿ.ತಿಪ್ಪಕ್ಕ ಚಿನ್ನಮಲ್ಲಯ್ಯ.ನಗರಘಟಕ ಅಧ್ಯಕ್ಷ,ಓ.ತಿಪ್ಪೇಸ್ವಾಮಿ,
ಸರ್ವ ಪದಾಧಿಕಾರಿಗಳು ಇದ್ದರು,










