ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪನವರ ನಿಧನಕ್ಕೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಸಂತಾಪ

ಹಿರಿಯ ಸಾಹಿತಿ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪನವರ ನಿಧನಕ್ಕೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ವೀರೇಂದ್ರ ಪಪ್ಪಿರವರು ಶನಿವಾರ ನುಡಿನಮನ ಸಲ್ಲಿಸಿದರು.

ನಗರದ ಒನಕೆ ಓಬವ್ವ ವೃತ್ತದಲ್ಲಿ  ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಜಿ.ಎಸ್.ಉಜ್ಜಿನಪ್ಪನವರ ನುಡಿ ನಮನದಲ್ಲಿ ಪಾಲ್ಗೊಂಡು ಮಾತನಾಡುತ್ತ ಜಿ.ಎಸ್.ಉಜ್ಜಿನಪ್ಪನವರು ಪತ್ರಕರ್ತರಾಗಿ ಇಡಿ ಜೀವನವನ್ನು ಸಮಾಜದಲ್ಲಿನ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸಕ್ಕೆ ಮುಡುಪಾಗಿಟ್ಟಿದ್ದರು. ಅವರ ನಿಧನ ಅಪಾರ ನೋವುಂಟು ಮಾಡಿದೆ. ಅವರ ಬರವಣಿಗೆ ಪತ್ರಿಕೆಯಲ್ಲಿ ಪ್ರಕಟಗೊಂಡಾಗ ನಾವುಗಳು ಎಚ್ಚೆತ್ತುಕೊಂಡು ಸಮಸ್ಯೆಗಳ ಪರಿಹಾರದ ಕಡೆ ಗಮನ ಕೊಡುತ್ತಿದ್ದೇವೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಿ ದುಃಖತಪ್ತ ಕುಟುಂಬಕ್ಕೆ ನೋವು ಮರೆಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.



ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪನವರ ನಿಧನಕ್ಕೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಸಂತಾಪ