ರೈತರು ದೇಶದ ಆರ್ಥಿಕತೆಯ ಬೆನ್ನೆಲುಬು ಮಾತ್ರವಲ್ಲ, ಅನ್ನ ನೀಡುವ ಅನ್ನದಾತರು. ಅವರ ಶ್ರಮ ಮತ್ತು ಬೆವರಿನ ಫಲದಿಂದಲೇ ಸಮಾಜದ ಬದುಕು : ಕರವೇ (ಕನ್ನಡ ಸೇನೆ)ತಾಲ್ಲೂಕು ಅಧ್ಯಕ್ಷ ಪಿ.ಮುತ್ತಯ್ಯ ಕರೆ.

ವರದಿ:- ಅರುಣ್ ಕುಮಾರ್. ಎಸ್(ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ:- ಮದ್ಯ ಕರ್ನಾಟಕದ ಪ್ರಮುಖ ಪ್ರದೇಶವಾದ ಚಿತ್ರದುರ್ಗ ಜಿಲ್ಲೆ,ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯು ಅತಿ ಕಡಿಮೆ  ಮಳೆ ಬೀಳುವ ಪ್ರದೇಶವೆಂದು ಹೆಸರಾಗಿದ್ದು,ಆದರೆ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ಕೃಪೆಯಿಂದ ಉತ್ತಮವಾದ ಮುಂಗಾರು ಮಳೆ ಪ್ರಾರಂಭವಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಪ್ರಾರಂಭವಾಗಿದೆ,ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಯಾವುದೇ ತೊಂದರೆಯಾಗದಂತೆ ಸಕಾಲದಲ್ಲಿ ಗುಣಮಟ್ಟದ ಬೀಜ ಹಾಗೂ ಗೊಬ್ಬರಗಳನ್ನು ಪೂರೈಸುವಂತೆ ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಸೇನೆ) ನಾಯಕನಹಟ್ಟಿ ಹೋಬಳಿ ಘಟಕದ ವತಿಯಿಂದ ಕೃಷಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಕರವೇ […]

ಶಾಲಾ ಪ್ರಾರಂಭೋತ್ಸವದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿಕೆಖಾಸಗಿ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆ ಉಳಿಸಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್ 01:ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಅಳಿವಿನ ಅಂಚಿಗೆ ತಲುಪುತ್ತಿರುವುದು ಕಳವಳಕಾರಿ ಸಂಗತಿ. ಇವುಗಳ ಉಳಿವು ಕೇವಲ ಸರ್ಕಾರದ ಕೈಯಿಂದ ಮಾತ್ರ ಸಾಧ್ಯವಿಲ್ಲ. ಸರ್ಕಾರದ ಜೊತೆಗೆ ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿದಾಗ ಮಾತ್ರ ಸರ್ಕಾರಿ ಶಾಲೆಗಳನ್ನು ಉಳಿಸಲು ಮತ್ತು ಬೆಳೆಸಲು ಸಾಧ್ಯ  ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.  ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು […]