ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಪರಿಸರ ಮಾಲಿನ್ಯಕ್ಕೆ ಕಡಿವಾಣ ಹಾಕಿ -ಜಿಲ್ಲಾ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜೂ.05:ಆಧುನಿಕ ಜೀವನಶೈಲಿಗೆ ಒಗ್ಗಿಕೊಂಡಿರುವ ನಾವು ಸ್ವಚ್ಛಂದ ಜೀವನ ನಡೆಸಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು, ಅದರಿಂದ ಪರಿಸರದ ಮೇಲಾಗುತ್ತಿರುವ ಹಾನಿಯ ಬಗ್ಗೆ ಯೋಚಿಸುತ್ತಿಲ್ಲ. ನಮ್ಮ ಸ್ವಾರ್ಥಕ್ಕಾಗಿ ಪರಿಸರ ಹಾಳುಗೆಡವುತ್ತಿರುವುದು ಆತಂಕಕಾರಿ ಸಂಗತಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಡಿ. ಮಹಾವರ್ಕರ್ ಕಳವಳ ವ್ಯಕ್ತಪಡಿಸಿದರು.ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಪರಿಸರ ದಿನಾಚರಣೆ’ ಅಂಗವಾಗಿ ಸಸಿ ನೆಡುವ […]
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ನಿಸರ್ಗ ಚಾರಿಟೇಬಲ್ ಟ್ರಸ್ಟ್” ಹಾಗೂ” ಡಾ. ಬಿಆರ್ ಅಂಬೇಡ್ಕರ್ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಘ ಮತ್ತು ಜೆ ಸಿ ಬೋಸ್ ಇಕೋ ಕ್ಲಬ್ ಇವರ ಸಂಯುತ್ತಾ ಆಶಯದಲ್ಲಿ ಪಾಲವ್ನಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ಪರಿಸರ ಜಾಗೃತಿ ಮತ್ತು ಸಸಿ ನೆಡೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಮುಖ್ಯ ಅತಿಥಿಗಳಾಗಿ ಪಿಡಿಒ ಬಸವರಾಜ್ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಸಾಂಸ್ಕೃತಿಕ ಸಂಘ ಹಾಗೂ ನಿಸರ್ಗ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರು ನಾಗರಾಜ್ ಟಿ ಅಪಾರ ಮುಖ್ಯ ಶಿಕ್ಷಕರಾದ ರಂಗ ದೇವ್, ವೆಂಕಟೇಶ್, M R ರಾಮಚಂದ್ರಪ್ಪ ನಾಗೇಂದ್ರಪ್ಪ ಚಿದಾನಂದ್ ಹಾಗೂ ಊರಿನ ಪ್ರಮುಖ ಮುಖಂಡರು ಉಪಸ್ಥಿತಿ ಇದ್ದರು
ಪರಿಸರವು ಮಾನವನ ಜೀವ ನಾಡಿ – ನವನೀತ (ಪಿ.ಡಿ.ಒ) ಕರೆ

ವರದಿ:- ಅರುಣ್ ಕುಮಾರ್. ಎಸ್ ( ದೊಡ್ಡ ಉಳ್ಳಾರ್ತಿ) ಚಳ್ಳಕೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದೊಡ್ಡ ಉಳ್ಳಾರ್ತಿ ಗ್ರಾಮದ ಸರ್ಕಾರಿ ಕನ್ನಡ ಮತ್ತು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಹಸರೀಕರಣ ಹಾಗೂ ಗಿಡ ನೆಡುವ ಮೂಲಕ ಸಸಿಗೆ ನೀರೆರೆದು ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವನೀತ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಪಿಡಿಒ ನವನೀತ ರವರು, ಪರಿಸರ ಸಂರಕ್ಷಣೆ ಇಂದಿನ ಅತ್ಯಂತ ಪ್ರಮುಖ ಅಗತ್ಯವಾಗಿದ್ದು, ಹಸಿರೀಕರಣದ ಜೊತೆಗೆ ಪ್ಲಾಸ್ಟಿಕ್ ನಿರ್ಮೂಲನೆಗೂ ಸಾರ್ವಜನಿಕರು […]