ಬೆಂಗಳೂರು ವಿಭಾಗ ಅಭಿವೃದ್ಧಿ ಪರಿಶೀಲನಾ ಸಭೆಗೆ ಭರದ ಸಿದ್ಧತೆ

ಚಿತ್ರದುರ್ಗದ ಶ್ರೀ ಮುರುಘಾ ಮಠದಲ್ಲಿ ಸಿದ್ಧತೆ ಪರಿಶೀಲಿಸಿದ ಶಾಸಕ ಟಿ. ರಘುಮೂರ್ತಿ

ಚಿತ್ರದುರ್ಗ, ಜು.23:

Thank you for reading this post, don't forget to subscribe!

ಜುಲೈ 25ರಂದು ಚಿತ್ರದುರ್ಗ ನಗರದ ಶ್ರೀ ಮುರುಘಾ ಮಠದ ಅನುಭವ ಮಂಟಪದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬೆಂಗಳೂರು ವಿಭಾಗಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಹಿನ್ನೆಲೆಯಲ್ಲಿ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.

ಈ ಹಿನ್ನೆಲೆಯಲ್ಲಿ ಶಾಸಕ ಟಿ. ರಘುಮೂರ್ತಿ ಅವರು ಇಂದು ಶ್ರೀ ಮುರುಘಾ ಮಠದ ಅನುಭವ ಮಂಟಪಕ್ಕೆ ಭೇಟಿ ನೀಡಿ, ಸಭೆಯ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು. ಸಭಾ ಸ್ಥಳದಲ್ಲಿ ಕೈಗೊಳ್ಳಲಾಗಿರುವ ವಿವಿಧ ವ್ಯವಸ್ಥೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸೂಚನೆ ನೀಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ. ರಘುಮೂರ್ತಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಬೆಂಗಳೂರು ವಿಭಾಗದ ಜಿಲ್ಲೆಗಳ ಅಭಿವೃದ್ಧಿ ಕಾಮಗಾರಿಗಳು, ವಿವಿಧ ಇಲಾಖೆಗಳ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿ ಕುರಿತು ಸಮಗ್ರ ಪರಿಶೀಲನೆ ನಡೆಯಲಿದ್ದು, ಎಲ್ಲ ಸಿದ್ಧತೆಗಳನ್ನು ಸುಸೂತ್ರವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ವೇಗಗೊಳಿಸುವ ನಿಟ್ಟಿನಲ್ಲಿ ಅಗತ್ಯ ನಿರ್ದೇಶನಗಳನ್ನು ನೀಡುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಬಿ.ಜಿ. ಗೋವಿಂದಪ್ಪ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ, ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷ ಆರ್. ಪ್ರಸನ್ನಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಬೆಂಗಳೂರು ವಿಭಾಗ ಅಭಿವೃದ್ಧಿ ಪರಿಶೀಲನಾ ಸಭೆಗೆ ಭರದ ಸಿದ್ಧತೆ