ಹಿರಿಯೂರಿನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮಕ್ಕೆ ಭಾರೀ ಸ್ಪಂದನೆ; ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ಅವ್ಯವಸ್ಥೆ ವಿರುದ್ಧ ತೀವ್ರ ವಾಗ್ದಾಳಿ
ಹಿರಿಯೂರು, ಜು. 22: ನಗರದ ನೆಹರೂ ಮೈದಾನದ ಎ. ಕೃಷ್ಣಪ್ಪ ರೋಟರಿ ಭವನದಲ್ಲಿ ಹಿರಿಯೂರು ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ “ಛಾತ್ರೋಂ ಕೀ ಗೂಂಜ್” ಕಾರ್ಯಕ್ರಮವನ್ನು ಎಐಸಿಸಿ ಕಾರ್ಯದರ್ಶಿ ಸಂದೀಪ್ ಹಾಗೂ ಮಾಜಿ ಶಾಸಕಿ ಶ್ರೀಮತಿ ಕೆ. ಪೂರ್ಣಿಮಾ ಶ್ರೀನಿವಾಸ್ ಉದ್ಘಾಟಿಸಿದರು.
Thank you for reading this post, don't forget to subscribe!ಈ ಸಂದರ್ಭದಲ್ಲಿ ಮಾತನಾಡಿದ ನಾಯಕರು, ದೇಶದ ವಿದ್ಯಾರ್ಥಿಗಳು ಕಳೆದ ಹಲವು ವರ್ಷಗಳಿಂದ ಎದುರಿಸುತ್ತಿರುವ ಅನ್ಯಾಯ, ನಿರುದ್ಯೋಗ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿನ ಅವ್ಯವಸ್ಥೆಗಳ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದರು. ಕೇಂದ್ರದ ಬಿಜೆಪಿ ಸರ್ಕಾರದ 12 ವರ್ಷಗಳ ಆಡಳಿತದಲ್ಲಿ 7.5 ಕೋಟಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ ಅವರು, ದೇಶಾದ್ಯಂತ 152 ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಶಿಕ್ಷಣ ವ್ಯವಸ್ಥೆಯ ವೈಫಲ್ಯಕ್ಕೆ ಸಾಕ್ಷಿ ಎಂದು ಟೀಕಿಸಿದರು.
ಕಾರ್ಯಕ್ರಮದಲ್ಲಿ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಎಐಸಿಸಿ ಕಾರ್ಯದರ್ಶಿಗಳಾದ ಜಯಂದರ್ ಸಿಂಗ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಣ್ಣ ಸೇರಿದಂತೆ ಹಲವರು ಮಾತನಾಡಿ, ವಿದ್ಯಾರ್ಥಿಗಳ ಹಕ್ಕುಗಳ ರಕ್ಷಣೆಗಾಗಿ ಕಾಂಗ್ರೆಸ್ ಸದಾ ಹೋರಾಟ ನಡೆಸಲಿದೆ ಎಂದು ಭರವಸೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಬೇಕು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಕೆಪಿಸಿಸಿ ಸದಸ್ಯ ಅಮೃತೇಶ್, ಕಂದಿಕೆರೆ ಸುರೇಶ್ ಬಾಬು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್, ಎನ್ಎಸ್ಯುಐ ಜಿಲ್ಲಾಧ್ಯಕ್ಷ ಕಿರಣ್ ಯಾದವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಮತ್ತು ಈರಲಿಂಗೇಗೌಡ, ನಗರಸಭೆಯ ಮಾಜಿ ಸದಸ್ಯ ಸಣ್ಣಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಂದಿಕೆರೆ ಅವಿನಾಶ್, ಗುರುಪ್ರಸಾದ್, ಶಾಹಿದ್, ಸಿದ್ದೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಲಾಶ್ ಪಟೇಲ್, ನಗರಾಧ್ಯಕ್ಷ ದರ್ಶನ್ ವಿ., ಗ್ರಾಮಾಂತರ ಅಧ್ಯಕ್ಷ ಶಿವಕುಮಾರ್ ಇ., ಎನ್ಎಸ್ಯುಐ ಅಧ್ಯಕ್ಷ ಶ್ರೀಕರುಣ್ ಕುಮಾರ್, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಪೃಥ್ವಿ ಕೂಗಾರ್, ವಿನಯ್, ನರಸಿಂಹಮೂರ್ತಿ, ಸಧಕತ್, ರಘು ಡಿಕೆ, ವಿದ್ಯಾರ್ಥಿ ಮಿತ್ರರು, ಶಿಕ್ಷಕ ವೃಂದ ಹಾಗೂ ಪಕ್ಷದ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
“ಛಾತ್ರೋಂ ಕೀ ಗೂಂಜ್” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳು, ಶಿಕ್ಷಣ ಕ್ಷೇತ್ರದಲ್ಲಿನ ಸವಾಲುಗಳು ಮತ್ತು ಉದ್ಯೋಗಾವಕಾಶಗಳ ಕುರಿತು ಮುಕ್ತ ಚರ್ಚೆ ನಡೆಯಿತು. ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಸಂಘಟಿತ ಹೋರಾಟದ ಅಗತ್ಯವನ್ನು ನಾಯಕರು ಒತ್ತಿ ಹೇಳಿದರು.











