ಹೆಲ್ತ್ ಇನ್ಸ್ಪೆಕ್ಟರ್ ಬರ್ಬರ ಹತ್ಯೆ; ಪೆಟ್ರೋಲ್ ಸುರಿದು ಶವಕ್ಕೆ ಬೆಂಕಿ

ಚಿತ್ರದುರ್ಗ ಜಿಲ್ಲೆಯ ಹೆಲ್ತ್ ಇನ್ಸ್ಪೆಕ್ಟರ್‌ರನ್ನು ದುಷ್ಕರ್ಮಿಗಳು ಕೊಲೆ ಮಾಡಿ, ಮೃತದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚೌಳೂರು ನಿವಾಸಿ, ಪಾವಗಡದ ಲಿಂಗದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ (PHC)ದಲ್ಲಿ ಹೆಲ್ತ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಮೂರ್ತಿ (47) ಕೊಲೆಯಾದವರು.
ದುಷ್ಕರ್ಮಿಗಳು ಚನ್ನಗಿರಿ ಠಾಣೆ ವ್ಯಾಪ್ತಿಯಲ್ಲಿ ಅವರ ಕಾರನ್ನು ಅಡ್ಡಗಟ್ಟಿ ಹತ್ಯೆ ನಡೆಸಿ, ಬಳಿಕ ಮೃತದೇಹವನ್ನು ಇಂಗಳದಾಳ್ ಲಂಬಾಣಿಹಟ್ಟಿ ಸಮೀಪಕ್ಕೆ ಕೊಂಡೊಯ್ದು ಪೆಟ್ರೋಲ್ ಸುರಿದು ಸುಟ್ಟು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಕೊಲೆ ನಡೆದ ಸುಮಾರು ಒಂದು ವಾರದ ಬಳಿಕ, ಕೊಳೆತ ಸ್ಥಿತಿಯಲ್ಲಿ ಶಿವಮೂರ್ತಿಯ ಶವ ಪತ್ತೆಯಾಗಿದೆ. ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ SOCO ತಂಡ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Thank you for reading this post, don't forget to subscribe!

ಹೆಲ್ತ್ ಇನ್ಸ್ಪೆಕ್ಟರ್ ಬರ್ಬರ ಹತ್ಯೆ; ಪೆಟ್ರೋಲ್ ಸುರಿದು ಶವಕ್ಕೆ ಬೆಂಕಿ