ಅಂಬೇಡ್ಕರ್ ಜಯಂತಿ, ಪ್ರೊ. ಬಿ. ಕೃಷ್ಣಪ್ಪ ಜಯಂತಿ ಹಾಗೂ ಸಮಿತಿಯ ವಾರ್ಷಿಕೋತ್ಸವ ಆಚರಣೆ
ಹಿರಿಯೂರು, ಜು. 27: ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ (ರಿ) ರಾಜ್ಯ ಸಮಿತಿಯ ವತಿಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ, ಶೋಷಿತರ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಮಹಾನ್ ಮಾನವತಾವಾದಿ ಪ್ರೊ. ಬಿ. ಕೃಷ್ಣಪ್ಪ ಅವರ 88ನೇ ಜಯಂತಿ ಹಾಗೂ ಸಮಿತಿಯ ಪ್ರಥಮ ವಾರ್ಷಿಕೋತ್ಸವ ಅಂಗವಾಗಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದ ಸರ್ವ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಗುರುಭವನದಲ್ಲಿ ವಿಜೃಂಭಣೆಯಿಂದ ನಡೆಸಲಾಯಿತು.
ಕಾರ್ಯಕ್ರಮಕ್ಕೆ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೆ. ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣದ ಮೂಲಕ ಸಮಾಜದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನದ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.
Thank you for reading this post, don't forget to subscribe!ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಆರ್., ಚಲನಚಿತ್ರ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸ, ಚಿಂತಕ ಹಾಗೂ ಅಂಬೇಡ್ಕರ್ವಾದಿ ಸುರೇಶ್ ಗೌತಮ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು ಯುವಜನರಿಗೆ ತಲುಪಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಅವರು ಅಭಿಪ್ರಾಯಪಟ್ಟರು.
ಇದೇ ವೇಳೆ ಹಿರಿಯೂರು ತಾಲೂಕು ದಲಿತ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ತಿಮ್ಮರಾಜ್ ಕೆ., ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಘಾಟ್, ಬಿಡಿಎಸ್ಎಸ್ ರಾಜ್ಯ ಉಪಾಧ್ಯಕ್ಷ ಚಂದ್ರಪ್ಪ ಘಾಟ್, ಮಾ ನಾಯಕ ದಲಿತ ಸೇನೆ ಜಿಲ್ಲಾ ಕಾರ್ಯಾಧ್ಯಕ್ಷ ಕರ್ಣಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮಾರುತಿ ಎನ್., ರಾಜ್ಯ ಕಾನೂನು ಸಲಹೆಗಾರ ಗೋಣೆಪ್ಪ ಸಂಗೊಳ್ಳಿ, ರಾಜ್ಯ ಕಾರ್ಯದರ್ಶಿ ಮಲ್ಲಪ್ಪ ಹಂಚಿನಮನಿ, ಮಧ್ಯ ಕರ್ನಾಟಕ ವಿಭಾಗೀಯ ಅಧ್ಯಕ್ಷ ಬಸವರಾಜ್ ಕುರುಬರಹಳ್ಳಿ ಸೇರಿದಂತೆ ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಪದಾಧಿಕಾರಿಗಳು, ಸಾಮಾಜಿಕ ಹೋರಾಟಗಾರರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲೆ, ತಾಲೂಕು, ನಗರ, ಹೋಬಳಿ ಹಾಗೂ ಗ್ರಾಮ ಶಾಖೆಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ, ಸನ್ಮಾನ ಹಾಗೂ ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು.











