ಜುಲೈ 05ರಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಜಿಲ್ಲಾ ಪ್ರವಾಸ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ04:ರಾಜ್ಯ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿ ಅವರು ಇದೇ ಜುಲೈ 5ರಂದು ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಸಚಿವರ ಪರಿಷ್ಕøತ ಪ್ರವಾಸ ಕಾರ್ಯಕ್ರಮದನ್ವಯ ಜುಲೈ 05ರಂದು ಬೆಳಿಗ್ಗೆ 7ಕ್ಕೆ ಬೆಂಗಳೂರಿನಿಂದ ಹೊರಟು, ಮಧ್ಯಾಹ್ನ 12ಕ್ಕೆ ತರೀಕೆರೆ ಮಾರ್ಗ ಮಧ್ಯೆದಲ್ಲಿ ಭದ್ರಾ ಜಲಾಶಯ ಮತ್ತು ಭದ್ರಾ ಮೇಲ್ದಂಡೆ ಯೋಜನೆ ಇನ್‍ಟೇಕ್ ಕಾಮಗಾರಿ ಪರಿವೀಕ್ಷಣೆ ಮಾಡುವರು. ಮಧ್ಯಾಹ್ನ 1ಕ್ಕೆ ಭದ್ರಾ ಜಲಾಯಶದಿಂದ ಹೊರಟು, ಮಧ್ಯಾಹ್ನ 1.30ಕ್ಕೆ ತರೀಕೆರೆ-ಕಡೂರು ಕೆರೆ ತುಂಬಿಸುವ ಯೋಜನೆಯ ಪಂಪ್ ಹೌಸ್-2 ಕಾಮಗಾರಿ ಪರಿವೀಕ್ಷಣೆ […]
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026: ಮನೆ-ಮನೆ ಭೇಟಿ ಕಾರ್ಯಕ್ಕೆ ವೇಗ

ಚಿತ್ರದುರ್ಗ, ಜುಲೈ 4:ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–2026) ಅಂಗವಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಮನೆ-ಮನೆ ಭೇಟಿ ಕಾರ್ಯವು ಜೂನ್ 30ರಿಂದ ಜುಲೈ 29, 2026ರವರೆಗೆ ನಡೆಯುತ್ತಿದ್ದು, ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಮತದಾರರ ಮನೆಗಳಿಗೆ ಭೇಟಿ ನೀಡಿ ಗಣತಿ ನಮೂನೆಗಳ ವಿತರಣಾ ಕಾರ್ಯವನ್ನು ಆರಂಭಿಸಿದ್ದಾರೆ. ಜುಲೈ 4ರ ವೇಳೆಗೆ ಜಿಲ್ಲೆಯ 1,661 ಮತಗಟ್ಟೆಗಳಲ್ಲಿ ಒಟ್ಟು 14,40,534 ಮತದಾರರ ಪೈಕಿ 11,10,708 ಮತದಾರರಿಗೆ ಗಣತಿ ನಮೂನೆಗಳನ್ನು […]
ಪ್ರಕೃತಿ ವಿಕೋಪ ಪರಿಶೀಲನಾ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿಕೆ ಬರ ನಿರ್ವಹಣೆ ಸರ್ಕಾರದಿಂದ ಸಲಕ ಸಿದ್ದತೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಸೂಚನೆ

ರಾಜ್ಯದಲ್ಲಿ ಬರ ಮತ್ತು ಪ್ರಕೃತಿ ವಿಕೋಪ ನಿರ್ವಹಣೆಗೆ ಸರ್ಕಾರವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ತಲಾ 5 ಕೋಟಿ ರೂಪಾಯಿಗಳನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಚಿತ್ರದುರ್ಗ ಜಿಲ್ಲಾ ಪ್ರಕೃತಿ ವಿಕೋಪ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪ್ರಕೃತಿ ವಿಕೋಪ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಿದರು.ಬರ ಮತ್ತು ಪ್ರಕೃತಿ ವಿಕೋಪ ನಿರ್ವಹಣೆಯ ಒಟ್ಟಾರೆ ಜವಾಬ್ದಾರಿ ಜಿಲ್ಲಾಧಿಕಾರಿಗಳು […]
ಎಸ್‍ಐಆರ್ ಜಾಗೃತಿಗಾಗಿ ಸೈಕಲ್ ರ್ಯಾಲಿ ಹಾಗೂ ವಾಕಥಾನ್: ಜಿ.ಪಂ. ಸಿಇಒ ಡಾ.ಎಸ್.ಆಕಾಶ್ ಚಾಲನೆ ಮನೆಗೆ ಬಂದ ಗಣತಿ ನಮೂನೆ ಭರ್ತಿ ಮಾಡಿ ಬಿಎಲ್‍ಒಗೆ ನೀಡಿ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್‍ಐಆರ್-2026) ಅತ್ಯಂತ ಪ್ರಮುಖವಾದ ಪ್ರಕ್ರಿಯೆಯಾಗಿದ್ದು, ಅರ್ಹ ಮತದಾರರೆಲ್ಲರೂ ತಮ್ಮ ಮನೆ ಬಾಗಿಲಿಗೆ ಬಂದಿರುವ ಗಣತಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ, ಮತಗಟ್ಟೆ ಅಧಿಕಾರಿಗಳಿಗೆ (ಬಿಎಲ್‍ಒ) ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದರು.ಭಾರತ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಸ ಪರಿಷ್ಕರಣೆ ಕುರಿತು ಅರಿವು ಮೂಡಿಸಲು ಶನಿವಾರ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಆಯೋಜಿಸಲಾಗಿದ್ದ ‘ಸೈಕಲ್ ಜಾಥಾ’ ಹಾಗೂ ‘ವಾಕಥಾನ್’ […]
ಕಾಂಗ್ರೆಸ್ ಪಕ್ಷವು ಎಸ್ಐಆರ್ ವಿಚಾರದಲ್ಲಿ ಜನರಲ್ಲಿ ಅನಗತ್ಯ ಮತ್ತು ಅನಪೇಕ್ಷಿತ ಗೊಂದಲಗಳನ್ನು ಸೃಷ್ಟಿ ಮಾಡುತ್ತಿದೆ: ಹನುಮಂತೇಗೌಡ

ಕಾಂಗ್ರೆಸ್ ಪಕ್ಷವು ಎಸ್ಐಆರ್ ವಿಚಾರದಲ್ಲಿ ಜನರಲ್ಲಿ ಅನಗತ್ಯ ಮತ್ತು ಅನಪೇಕ್ಷಿತ ಗೊಂದಲಗಳನ್ನು ಸೃಷ್ಟಿ ಮಾಡುತ್ತಿದೆ. ಚುನಾವಣಾ ಆಯೋಗದ ಮೇಲೆ ಜನರು ಇಟ್ಟಿರುವ ನಂಬಿಕೆ-ವಿಶ್ವಾಸಕ್ಕೆ ಧಕ್ಕೆ ತರುವ ಕಾರ್ಯ ನಡೆದಿದೆ ಎಂದು ಬಿಜೆಪಿ ಮುಖಂಡರಾದ ಹನುಮಂತೇಗೌಡ ಕಾಂಗ್ರೆಸ್ ಪಕ್ಷದ ಮೇಲೆ ಕಿಡಿ ಕಾರಿದ್ದಾರೆ. ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಈ ಹಿಂದೆ 2002ರಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‍ಐಆರ್) ಕಾರ್ಯ ನಡೆದಿತ್ತು. ಕಳೆದ 24 ವರ್ಷಗಳಿಂದ ಎಸ್‍ಐಆರ್ ನಡೆದಿಲ್ಲ. ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಜೂನ್ 30ರಿಂದ […]
ಸಾಂಖ್ಯಿಕ ದಿನಾಚರಣೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಎಂ. ಬಾಬು ಅಭಿಮತಅಂಕಿ-ಅಂಶಗಳಿಲ್ಲದ ಜೀವನ ಊಹಿಸಲು ಸಾಧ್ಯವಿಲ್ಲ

ಅಂಕಿ-ಅಂಶಗಳು ಪ್ರತಿಯೊಂದು ಕ್ಷೇತ್ರದಲ್ಲೂ ಹಾಸುಹೊಕ್ಕಾಗಿವೆ. ಅಂಕಿ-ಅಂಶಗಳಿಲ್ಲದಿದ್ದರೆ ನಾವು ಯಾವುದೇ ಪ್ರಗತಿ ಸಾಧಿಸಲು, ವಿಷಯಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ ಇರುತ್ತಿರಲಿಲ್ಲ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಂ. ಬಾಬು ಅಭಿಪ್ರಾಯಪಟ್ಟರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಂಖ್ಯಿಕ ತಜ್ಞ ಪ್ರೊ.ಪಿ.ಸಿ.ಮಹಾಲನೋಬಿಸ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ನಮ್ಮ ಜೀವನದಲ್ಲಿ ಅಂಕಿಗಳ ಮಹತ್ವ ಅಪಾರ. ಮನುಷ್ಯನ ಜನ್ಮದಿನಾಂಕವೇ ಸಂಖ್ಯೆಗಳಿಂದ ಆರಂಭವಾಗುತ್ತದೆ. ನಮ್ಮ ದಿನನಿತ್ಯದ ಬದುಕಿನಲ್ಲಿ ನಾವು ಬಳಸುವ ಬ್ಯಾಂಕಿಂಗ್ ಕ್ಷೇತ್ರದಿಂದ ಹಿಡಿದು ಕಂದಾಯ ಇಲಾಖೆಯವರೆಗೆ ಸಾಂಖ್ಯಿಕತೆ […]