ಅಪಾರ್ಟ್‌ಮೆಂಟ್ ಮಾಲೀಕರಿಗೆ ಸಂಪೂರ್ಣ ಆಸ್ತಿ ಹಕ್ಕು; ಜನರ ಧ್ವನಿಯೇ ಸರ್ಕಾರದ ಧ್ವನಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಅಪಾರ್ಟ್‌ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಸಂವಾದ; ಇ-ಖಾತಾ ಕ್ರಾಂತಿ, ಭೂ ಗ್ಯಾರಂಟಿ, ಬೆಂಗಳೂರಿನ ಅಭಿವೃದ್ಧಿ ಕುರಿತು ಮಹತ್ವದ ಘೋಷಣೆಗಳು ಬೆಂಗಳೂರು, ಜು.15 (ಕರ್ನಾಟಕ ವಾರ್ತೆ): ಅಪಾರ್ಟ್‌ಮೆಂಟ್ ಮಾಲೀಕರ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. “ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗೇ ಸೇರಬೇಕು. ಜನರ ಧ್ವನಿಯೇ ಸರ್ಕಾರದ ಧ್ವನಿಯಾಗಬೇಕು” ಎಂದು ಅವರು ಸ್ಪಷ್ಟಪಡಿಸಿದರು. ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ)–2026 ಕರಡು ವಿಧೇಯಕ […]

ರೈತರ ಸಮ್ಮತಿ ಇಲ್ಲದೆ ಒಂದು ಗುಂಟೆ ಜಮೀನೂ ಸ್ವಾಧೀನವಿಲ್ಲ

ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರ ಒಪ್ಪಿಗೆ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ಯೋಜನೆಯ ಸಾಧಕ-ಬಾಧಕಗಳ ಪರಿಶೀಲನೆಗೆ ಸಮಿತಿ ರಚನೆ; ಹಿಂದಿನ ಸರ್ಕಾರಗಳ ಯೋಜನೆಯನ್ನೇ ಮುಂದುವರಿಸುತ್ತಿದ್ದೇವೆ ಎಂದ ಸಿಎಂ ಬೆಂಗಳೂರು, ಜು.15 (ಕರ್ನಾಟಕ ವಾರ್ತೆ): ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸ್ಪಷ್ಟನೆ ನೀಡಿದ್ದು, ರೈತರ ಸಮ್ಮತಿ ಇಲ್ಲದೆ ಒಂದು ಗುಂಟೆ ಜಮೀನನ್ನೂ ಸರ್ಕಾರ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಖಚಿತ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ನಡೆದ […]