ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಎಂ. ರವೀಂದ್ರಪ್ಪ ಸಂತಾಪ

ಹಿರಿಯೂರು, ಜು. 18: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ವಿಧಿವಶರಾಗಿರುವುದು ಅತ್ಯಂತ ದುಃಖದ ಸಂಗತಿ ಎಂದು ಜೆಡಿಎಸ್ ಹಿರಿಯ ಮುಖಂಡ ಎಂ. ರವೀಂದ್ರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, “ಚೆನ್ನಮ್ಮ ಅವರು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಮಾರ್ಗದರ್ಶಕರಾಗಿ, ಕುಟುಂಬದ ಶಕ್ತಿ ಮತ್ತು ಆಧಾರಸ್ತಂಭವಾಗಿ ಬದುಕು ನಡೆಸಿದ್ದರು. ಸರಳತೆ, ಸೌಜನ್ಯ ಹಾಗೂ ಕುಟುಂಬದ ಮೌಲ್ಯಗಳನ್ನು ತಮ್ಮ ಜೀವನದುದ್ದಕ್ಕೂ ಪಾಲಿಸಿಕೊಂಡು ಬಂದ ಅವರು ಅನೇಕರಿಗೆ ಆದರ್ಶಪ್ರಾಯರಾಗಿದ್ದರು” […]
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನ; ರಾಜಕೀಯ ಗಣ್ಯರ ಸಂತಾಪ

ಬೆಂಗಳೂರು, ಜು. 18: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಹಿರಿಯ ನಾಯಕ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು ನಿಧನರಾದರು. ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ತಜ್ಞ ವೈದ್ಯರ ತಂಡದ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಆಧಾರಸ್ತಂಭರಾಗಿದ್ದರು. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಸದಸ್ಯರು ಆಸ್ಪತ್ರೆಯಲ್ಲೇ ಇದ್ದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ […]
ಎಸ್‍ಐಆರ್ ಜಾಗೃತಿಗೆ “ಮೊಬೈಲ್ ಪೋನ್ ಟಾರ್ಚ್ ಲೈಟ್” ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆ ಬಿಎಲ್‍ಒಗಳಿಗೆ ಮಾಹಿತಿ ನೀಡಿ ಸಹಕರಿಸಿಜಿಲ್ಲೆಯಲ್ಲಿ ಶೇ.65ರಷ್ಟು ಗಣತಿ ನಮೂನೆಗಳ ಗಣಕೀಕರಣ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ18:ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಸಾರ್ವಜನಿಕರು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಒನಕೆ ಒಬವ್ವ ವೃತ್ತದಲ್ಲಿ ಶುಕ್ರವಾರ ಸಂಜೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ‘ಮೊಬೈಲ್ ಪೋನ್ ಟಾರ್ಚ್ ಲೈಟ್’ ಮೂಲಕ ಎಸ್‍ಐಆರ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಎಸ್‍ಐಆರ್ […]