ಬರ ಪರಿಹಾರಕ್ಕೆ ವಿಬಿ ಜಿ ರಾಮ್ ಜಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ

ಕರ್ನಾಟಕ ವಾರ್ತೆ(ಚಿತ್ರದುರ್ಗ). ಜು.25: ರಾಜ್ಯದಲ್ಲಿ ಬರಪೀಡಿತ ವಾತಾವರಣವಿರುವುದರಿಂದ ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ಬೇರೆಡೆಗೆ ವಲಸೆ ಹೋಗುವುದನ್ನು ತಡೆಯುವುದು ಸರ್ಕಾರದ ಆದ್ಯತೆಯಾಗಿದೆ. ಇದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಜಾರಿಗೆ ತರಲಾಗಿರುವ ವಿಬಿ ಜಿ ರಾಮ್ ಜಿ (VBG RAM G) ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಕರೆ ನೀಡಿದ್ದಾರೆ. ಚಿತ್ರದುರ್ಗ ನಗರದ ಮರುಘಾಮಠದ ಅನುಭವ ಮಂಟಪದಲ್ಲಿ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ […]

ಹಿರಿಯೂರು ಕ್ಷೇತ್ರ ಅಭಿವೃದ್ಧಿ ಹಾಗೂ ನೀರಾವರಿ ಯೋಜನೆಗೆ ಆದ್ಯತೆ ನೀಡಲು ಎಂಎಲ್‌ಸಿ ಟಿ.ಡಿ.ಶ್ರೀನಿವಾಸ್ ಆಗ್ರಹ

​ಕರ್ನಾಟಕ ವಾರ್ತೆ(ಚಿತ್ರದುರ್ಗ). ಜು.25: ಹಿರಿಯೂರು ಕ್ಷೇತ್ರ ವ್ಯಾಪ್ತಿಯ ವಿವಿಧ ನೀರಾವರಿ, ಕುಡಿಯುವ ನೀರು, ಶಿಕ್ಷಣ ಮತ್ತು ಮೂಲಸೌಕರ್ಯ ಯೋಜನೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಟಿ.ಡಿ. ಶ್ರೀನಿವಾಸ್ ಮುಖ್ಯಮಂತ್ರಿಗಳ ಗಮನ ಸೆಳೆದರು. ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜೋಗಿಹಳ್ಳಿ ಭಾಗದ 17 ಕೆರೆಗಳಿಗೆ ನೀರು: ಹಿರಿಯೂರು ಕ್ಷೇತ್ರದ ಅತಿ ಬರಪೀಡಿತ ಪ್ರದೇಶವಾದ ಜೋಗಿಹಳ್ಳಿ ಭಾಗದ 17 ಕೆರೆಗಳಿಗೆ ನೀರು ತುಂಬಿಸುವ ರೂ.164 ಕೋಟಿ ವೆಚ್ಚದ ಯೋಜನೆಗೆ ಸಂಪುಟ ಅನುಮೋದನೆ ನೀಡಿರುವುದಕ್ಕೆ […]

ಬರದ ಬಿಸಿ ಜನರನ್ನು ತಟ್ಟಲು ಬಿಡೆವು : ಡಿಸಿಎಂ ಡಾ.ಜಿ.ಪರಮೇಶ್ವರ

ಕುಡಿಯುವ ನೀರು, ಮೇವು ಸಮರ್ಪಕ ಪೂರೈಕೆಗೆ ಹಣದ ಕೊರತೆ ಇಲ್ಲ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿಎಂ ಹೇಳಿಕೆ ಚಿತ್ರದುರ್ಗ ಜುಲೈ 25:- ರಾಜ್ಯದಲ್ಲಿ ಬಹುತೇಕ ಜಲಾಶಯಗಳು ತಳಮಟ್ಟಕ್ಕೆ ಬಂದಿದ್ದು, ಶೇ. 80ರಷ್ಟು ಕೆರೆಗಳು ಬತ್ತಿ ಹೋಗಿವೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಇಂದು ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚಿತ್ರದುರ್ಗ ಪ್ರವಾಸ ಕೈಗೊಂಡು, ಹಿರಿಯೂರು ತಾಲೂಕಿನಲ್ಲಿ ಬರ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ, ಬರ […]

ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಪಾರದರ್ಶಕತೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮಎಲ್ಲೆಲ್ಲೂ ಸಿ.ಸಿ. ಕ್ಯಾಮೆರಾ ಅಳವಡಿಕೆಗೆ ಸೂಚನೆ -ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಿತ್ರದುರ್ಗ (ಕರ್ನಾಟಕ ವಾರ್ತೆ) ಜು. 25:ರಾಜ್ಯದ ವಿವಿಧ ಇಲಾಖೆಗಳಲ್ಲಿನ ಸುಮಾರು 72 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಯಾವುದೇ ಪ್ರಕರಣಕ್ಕೆ ಆಸ್ಪದ ನೀಡಬಾರದು. ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲೆಡೆ ಸಿ.ಸಿ. ಕ್ಯಾಮೆರಾ ಅಳವಡಿಕೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ […]