ಯೋಗ ನಡಿಗೆ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆಯೋಗವನ್ನು ಜೀವನದ ಭಾಗವಾಗಿಸಿಕೊಳ್ಳಿ

ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯೋಗದ ಪಾತ್ರ ದೊಡ್ಡದಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಆಯುಷ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಯೋಗ ನಡಿಗೆ ಜಾಥಾ’ಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯ ನಿರ್ಲಕ್ಷಿಸಿ ಆಸ್ತಿ, ಹಣದ ಬೆನ್ನತ್ತುತ್ತಿದ್ದಾರೆ. ಕೊನೆಗೆ ಅದೇ ಆರೋಗ್ಯ ಕಾಪಾಡಿಕೊಳ್ಳಲು […]

ಸಂಚಾರಿ ನಿಯಮ ಉಲ್ಲಂಘನೆ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ-ಸಾರ್ವಜನಿಕ ಜಾಗೃತಿ ಅಭಿಯಾನಕ್ಕೆ ನ್ಯಾಯಾಧೀಶ ಸುದೀನ್ ಕುಮಾರ್ ಚಾಲನೆಸಂಚಾರ ನಿಯಮಗಳ ಪಾಲನೆ ಸ್ವಯಂ ರಕ್ಷಣೆಗಾಗಿ

ಸಂಚಾರಿ ನಿಯಮಗಳು ಇರುವುದು ಕೇವಲ ಪೊಲೀಸರು, ಆರ್‍ಟಿಒ ಅಧಿಕಾರಿಗಳಿಗೆ ಹೆದರಿ ಪಾಲಿಸುವುದಕ್ಕಲ್ಲ, ಬದಲಿಗೆ ನಮ್ಮ ಮತ್ತು ನಮ್ಮ ಕುಟುಂಬದ ಸುರಕ್ಷತೆಗಾಗಿ ಎಂಬುದನ್ನು ಪ್ರತಿಯೊಬ್ಬ ವಾಹನ ಸವಾರನೂ ಅರಿತುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುದೀನ್ ಕುಮಾರ್ ತಿಳಿಸಿದರು.ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಸಹಯೋಗದಲ್ಲಿ ಇದೇ ಜೂನ್ 21 ರಿಂದ ಜುಲೈ 10 ರವರೆಗೆ […]

ನೀಟ್ ಅಭ್ಯರ್ಥಿಗಳದ್ದು ಆತ್ಮಹತ್ಯೆಯಲ್ಲ; ಸರ್ಕಾರ ನಡೆಸಿದ ನರಮೇಧ”- ಮಹಾಂತೇಶ ಬಿಳೂರ್ ಆಕ್ರೋಶ!*

*ನೀಟ್ ಅವಾಂತರ ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ!* ಚಿತ್ರದುರ್ಗ: ನೀಟ್ ಪರೀಕ್ಷೆಯಲ್ಲಿನ ಅವಾಂತರ ಮತ್ತು ಸರ್ಕಾರದ ಬೇಜವಾಬ್ದಾರಿತನದಿಂದ ನಡೆಯುತ್ತಿರುವ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಖಂಡಿಸಿ ಇಂದು ಎಐಡಿಎಸ್ಓ ನೇತೃತ್ವದ ಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಯಿತು. ನಗರದ ಡಿಸಿ ಸರ್ಕಲ್ ನಲ್ಲಿ ಸೇರಿದ ವಿದ್ಯಾರ್ಥಿಗಳು ಎನ್ ಟಿ ಎ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  ಸಂಘಟನೆಯ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ ಬಿಳೂರ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, “ಮೇ 3 ರಂದು […]

ದೆಹಲಿಯಲ್ಲಿ UPSC ಅಭ್ಯರ್ಥಿಗಳಿಗಾಗಿ ವಿದ್ಯಾರ್ಥಿ ವಸತಿ ಕಟ್ಟಡ ನಿರ್ಮಾಣಕ್ಕೆ ಸಂಪುಟ ಸಭೆ ಅನುಮೋದನೆ

ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೊಸ ಅವಕಾಶ ಬೆಂಗಳೂರು, ಜೂನ್ 20: ಕೇಂದ್ರ ನಾಗರಿಕ ಸೇವೆಗಳ (UPSC) ಪರೀಕ್ಷೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಯಶಸ್ಸು ಸಾಧಿಸಲು ಅನುಕೂಲವಾಗುವ ಮಹತ್ವದ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ದೆಹಲಿಯಲ್ಲಿ UPSC ಪರೀಕ್ಷೆಗೆ ತಯಾರಿ ನಡೆಸುವ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ವಿದ್ಯಾರ್ಥಿ ವಸತಿ ಹಾಗೂ ಅಧ್ಯಯನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಹಸಿರು ನಿಶಾನೆ ತೋರಿದೆ. ರಾಜ್ಯದ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳು UPSC, IAS, IPS, […]

ಕರ್ನಾಟಕದಲ್ಲಿ ‘ಪ್ರಜಾ ಸೇವಕ ಇಲಾಖೆ’ ಸ್ಥಾಪನೆ: ಜನರ ಸಮಸ್ಯೆಗಳಿಗೆ ಜಿಲ್ಲಾಮಟ್ಟದಲ್ಲೇ ಪರಿಹಾರ

ಬೆಂಗಳೂರು, ಜೂನ್ 20 ರಾಜ್ಯದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ D. K. Shivakumar ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಪ್ರಜಾ ಸೇವಕ ಇಲಾಖೆ’ (Praja Sevak Department) ಎಂಬ ಹೊಸ ಇಲಾಖೆಯನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಈ ಇಲಾಖೆಗೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಮಾತನಾಡಿ, ರಾಜ್ಯದ ವಿವಿಧ ಭಾಗಗಳಿಂದ ಪ್ರತಿದಿನ ಜನರು ತಮ್ಮ ಸಮಸ್ಯೆಗಳು, ಬೇಡಿಕೆಗಳು […]

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸಭೆ: ಜನಸೇವೆಗೆ ಹೊಸ ದಿಕ್ಕು, ಅಭಿವೃದ್ಧಿಗೆ ವೇಗ

ಬೆಂಗಳೂರು, ಜೂನ್ 20: ಕರ್ನಾಟಕ ಮುಖ್ಯಮಂತ್ರಿ D. K. Shivakumar ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ರಾಜ್ಯದ ಆಡಳಿತ ಸುಧಾರಣೆ, ಜನಸೇವಾ ವ್ಯವಸ್ಥೆಯ ಬಲವರ್ಧನೆ, ಮೂಲಸೌಕರ್ಯ ಅಭಿವೃದ್ಧಿ, ನೀರಾವರಿ ಯೋಜನೆಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ರಾಜ್ಯದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಡಿ.ಕೆ. ಶಿವಕುಮಾರ್ ಹಲವು ಹೊಸ ಯೋಜನೆಗಳನ್ನು ಜಾರಿಗೆ […]

ಹಿರಿಯ ಸಾಹಿತಿ, ಪತ್ರಕರ್ತ ಶ್ರೀ ಜಿ.ಎಸ್. ಉಜ್ಜಿನಪ್ಪ ಇನ್ನಿಲ್ಲ…

(ಜನನ : 30-10-1939, ಮರಣ : 20-06-2026.) ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಗೌನಹಳ್ಳಿಯ ತಂದೆ ಗೊಂಚಿಗಾರ ಸಿದ್ದಯ್ಯ, ತಾಯಿ ಲಿಂಗಮ್ಮ ದಂಪತಿಗಳ ಹಿರಿಯ ಮಗನಾಗಿ ದಿ: 30.10.1939 ರಲ್ಲಿ ಜನಿಸಿದರು.ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎ ಪದವಿ (1962), ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ನಿಂದ ಡಿಎಸ್‌ಎಸ್‌ಎ ಸ್ನಾತಕೋತ್ತರ ಡಿಪ್ಲೋಮಾ (1965), ಅಲ್ಪಕಾಲ ಮಧುಗಿರಿ ತಾಲ್ಲೂಕಿನ ದಂಡಿನದಿಬ್ಬ ಗ್ರಾಮದಲ್ಲಿ ಶಿಕ್ಷಕರಾಗಿದ್ದರು (1962), ಬೆಂಗಳೂರಿನ ಗಾಂಧೀನಗರದಲ್ಲಿರುವ ಆರ್ಯ ವಿದ್ಯಾಶಾಲಾ ಪ್ರೌಢಶಾಲೆಯಲ್ಲಿ (1965), ಅಧ್ಯಾಪಕರಾಗಿ ಕೆಲಸ, ದೂರದ ಗುಲ್ಬರ್ಗಾದ ಎಂ.ಎಸ್.ಕೆ […]

ಪಿಎಂ-ವಿಬಿಆರ್‌ವೈ ಫಲಾನುಭವಿಗಳಿಗೆ ಸೌಲಭ್ಯ ಗೋವಿಂದ ಎಂ ಕಾರಜೋಳ ಹೇಳಿಕೆ ಯುವಜನರ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧ

ಯುವಜನತೆಗೆ ಕೇವಲ ಉದ್ಯೋಗದ ಆಶ್ವಾಸನೆ ನೀಡದೆ, ಅವರ ಕೈಗಳಿಗೆ ನೇರವಾದ ಶಕ್ತಿ ತುಂಬುವುದು ‘ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್‌ಗಾರ್ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಯುವಜನರ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಇಪಿಎಫ್‌ಒ ಪ್ರಾದೇಶಿಕ ಕಚೇರಿ ಬಳ್ಳಾರಿ ವತಿಯಿಂದ, ನಗರದ ಎಸ್‌ಜೆಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಸಿವಿಲ್ ವಿಭಾಗದ ಸರ್.ಎಂ.ವಿ. ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ‘ಪ್ರಧಾನ ಮಂತ್ರಿ ವಿಕಸಿತ ಭಾರತ […]

ಗ್ಯಾರಂಟಿ ಯೋಜನೆಗಳು ದುರುಪಯೋಗವಾಗದಂತೆ ಎಚ್ಚರ ವಹಿಸಿ : ಆರ್.ಶಿವಣ್ಣ ಸೂಚನೆ

ವರದಿ:-ಅರುಣ್ ಕುಮಾರ್. ಎಸ್ ( ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ. ಜೂ.19: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಬೇಕು. ಯಾವುದೇ ಕಾರಣಕ್ಕೂ ಯೋಜನೆಗಳು ದುರುಪಯೋಗವಾಗದಂತೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಕಟ್ಟುನಿಟ್ಟಿನ ಸೂಚನೆ ನೀಡಿದರುನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಶುಕ್ರವಾರ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರುಗೃಹಲಕ್ಷ್ಮಿ ಯೋಜನೆಯಡಿ […]

ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವನ ದೇವಾಲಯದಲ್ಲಿ ಟಿ. ರಘುಮೂರ್ತಿ ಸಚಿವರಾಗಲೆಂದು ವಿಶೇಷ ಪೂಜೆ

ವರದಿ:- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ: ಕೇರಳ ರಾಜ್ಯದ ಪ್ರಸಿದ್ಧ ಕೊಟ್ಟಿಯೂರು ಶಿವನ ದೇವಸ್ಥಾನದಲ್ಲಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಈ ಬಾರಿ ಚಿತ್ರದುರ್ಗ ಜಿಲ್ಲೆಯ ಪ್ರತಿನಿಧಿಯಾಗಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲೆಂದು ಟಿ. ರಘುಮೂರ್ತಿ ಯುವ ಸೇನೆಯ ರಾಜ್ಯಾಧ್ಯಕ್ಷ ಕೆ.ಟಿ.ಶಿವಕುಮಾರ್ ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.ದೇವರ ಅನುಗ್ರಹಕ್ಕಾಗಿ ಕಾರ್ಯಕರ್ತರು ಸುಮಾರು ಮೂರು ಗಂಟೆ 45 ನಿಮಿಷಗಳ ಕಾಲ ನಿರಂತರ ಮಳೆಯ ನಡುವೆಯೂ  ದೇವಸ್ಥಾನದ ಆವರಣದಲ್ಲಿ ನಿಂತು ಭಕ್ತಿಭಾವದಿಂದ ಶಿವನ ದರ್ಶನ ಪಡೆದರು. […]