ಡಾ.ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರಿಗೆ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ನೀಡಲಾಗುವ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳ ಪೈಕಿ ಈ ಭಾರಿ ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಡಾ.ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾಮೀಜಿಗಳ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ, ಪರಿಸರ ಕಾಳಜಿ, ಯುವಜನ ಸಬಲೀಕರಣ, ಸಮಸಮಾಜದ ನಿರ್ಮಾಣ ಹಾಗೂ ರಾಷ್ಟ್ರೀಯತೆಯ ಸೇವಾ ಕಾರ್ಯಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ […]

ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಕಡೆಗೆ ಕೊಂಡೊಯ್ಯುವೆ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

ನನ್ನ ಪಾಲಿಗೆ ಬಂದ ಕೆಲಸ ನಾನು ಪ್ರಾಮಾಣಿಕವಾಗಿ ಮಾಡುವೆ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ೧ ಕೋಟಿ ೨೦ ಲಕ್ಷ ವೆಚ್ಚದ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಚಿತ್ರದುರ್ಗ, ಜೂನ್ ೨೦ : ನನ್ನ ಮತ ಕ್ಷೇತ್ರದ ಅಭಿವೃದ್ಧಿಯ ಕಡೆಗೆ ಕೊಂಡೊಯ್ಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದೇನೆ, ನನ್ನ ಪಾಲಿಗೆ ಬಂದ ಕೆಲಸವನ್ನು ಪ್ರಾಮಾಣಿಕವಾಗಿ ಜನರಿಗೆ ಅನುಕೂಲ ವಾಗುವಂತಹ ಅಭಿವೃದ್ಧಿ ಕೆಲಸವನ್ನು ಕ್ಷೇತ್ರದ ವಿವಿಧಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.   ನಗರದ ಶ್ರೀ ಶನೇಶ್ವರ ದೇವಸ್ಥಾನ ಹಾಗೂ […]

ದೆಹಲಿಯಲ್ಲಿ UPSC ಅಭ್ಯರ್ಥಿಗಳಿಗಾಗಿ ವಿದ್ಯಾರ್ಥಿ ವಸತಿ ಕಟ್ಟಡ ನಿರ್ಮಾಣಕ್ಕೆ ಸಂಪುಟ ಸಭೆ ಅನುಮೋದನೆ

ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೊಸ ಅವಕಾಶ ಬೆಂಗಳೂರು, ಜೂನ್ 20: ಕೇಂದ್ರ ನಾಗರಿಕ ಸೇವೆಗಳ (UPSC) ಪರೀಕ್ಷೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಯಶಸ್ಸು ಸಾಧಿಸಲು ಅನುಕೂಲವಾಗುವ ಮಹತ್ವದ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ದೆಹಲಿಯಲ್ಲಿ UPSC ಪರೀಕ್ಷೆಗೆ ತಯಾರಿ ನಡೆಸುವ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ವಿದ್ಯಾರ್ಥಿ ವಸತಿ ಹಾಗೂ ಅಧ್ಯಯನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಹಸಿರು ನಿಶಾನೆ ತೋರಿದೆ. ರಾಜ್ಯದ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳು UPSC, IAS, IPS, […]

ಹಿರಿಯ ಸಾಹಿತಿ, ಪತ್ರಕರ್ತ ಶ್ರೀ ಜಿ.ಎಸ್. ಉಜ್ಜಿನಪ್ಪ ಇನ್ನಿಲ್ಲ…

(ಜನನ : 30-10-1939, ಮರಣ : 20-06-2026.) ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಗೌನಹಳ್ಳಿಯ ತಂದೆ ಗೊಂಚಿಗಾರ ಸಿದ್ದಯ್ಯ, ತಾಯಿ ಲಿಂಗಮ್ಮ ದಂಪತಿಗಳ ಹಿರಿಯ ಮಗನಾಗಿ ದಿ: 30.10.1939 ರಲ್ಲಿ ಜನಿಸಿದರು.ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎ ಪದವಿ (1962), ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ನಿಂದ ಡಿಎಸ್‌ಎಸ್‌ಎ ಸ್ನಾತಕೋತ್ತರ ಡಿಪ್ಲೋಮಾ (1965), ಅಲ್ಪಕಾಲ ಮಧುಗಿರಿ ತಾಲ್ಲೂಕಿನ ದಂಡಿನದಿಬ್ಬ ಗ್ರಾಮದಲ್ಲಿ ಶಿಕ್ಷಕರಾಗಿದ್ದರು (1962), ಬೆಂಗಳೂರಿನ ಗಾಂಧೀನಗರದಲ್ಲಿರುವ ಆರ್ಯ ವಿದ್ಯಾಶಾಲಾ ಪ್ರೌಢಶಾಲೆಯಲ್ಲಿ (1965), ಅಧ್ಯಾಪಕರಾಗಿ ಕೆಲಸ, ದೂರದ ಗುಲ್ಬರ್ಗಾದ ಎಂ.ಎಸ್.ಕೆ […]

ಹಿರಿಯೂರು–ಸಂಗೇನಹಳ್ಳಿ ಹೊಸ ಬಸ್ ಮಾರ್ಗ ಉದ್ಘಾಟನೆ: ಗ್ರಾಮಸ್ಥರಲ್ಲಿ ಹರ್ಷ

ಹಿರಿಯೂರು: ಹಿರಿಯೂರು ಪ್ರದೇಶದ ಜನತೆಗೆ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಹಿರಿಯೂರು–ಮಸ್ಕಲ್–ಕುಡಲಹಳ್ಳಿ–ಈಶ್ವರಗೇರಿ–ಕಂಬತ್ನಹಳ್ಳಿ–ಸಂಗೇನಹಳ್ಳಿ ಮಾರ್ಗದಲ್ಲಿ ಹೊಸ ಬಸ್ ಸೇವೆಯನ್ನು ಇಂದು ಅಧಿಕೃತವಾಗಿ ಪ್ರಾರಂಭಿಸಲಾಯಿತು. ಬಸ್‌ಗೆ ಪರಂಪರೆಯಂತೆ ಬಾಳೆ ಎಲೆ ಅಲಂಕರಿಸಿ, ಗ್ರಾಮಸ್ಥರ ಸಮ್ಮುಖದಲ್ಲಿ ಪೂಜೆ ನೆರವೇರಿಸಲಾಯಿತು. ಈ ಹೊಸ ಮಾರ್ಗದ ಮೂಲಕ ಗ್ರಾಮಗಳ ನಡುವೆ ಸಂಚಾರ ಸುಲಭವಾಗಲಿದ್ದು, ವಿದ್ಯಾರ್ಥಿಗಳು, ರೈತರು ಹಾಗೂ ದೈನಂದಿನ ಪ್ರಯಾಣಿಕರಿಗೆ ಇದು ದೊಡ್ಡ ಅನುಕೂಲವಾಗಲಿದೆ ಎಂದು ಸ್ಥಳೀಯರು ಸಂತೋಷ ವ್ಯಕ್ತಪಡಿಸಿದ್ದಾರೆ. ಬಸ್ ಹಿರಿಯೂರಿನಿಂದ ಪ್ರಾರಂಭವಾಗಿ ಮಸ್ಕಲ್, ಕುಡಲಹಳ್ಳಿ, ಈಶ್ವರಗೇರಿ, ಕಂಬತ್ನಹಳ್ಳಿ, ಸಂಗೇನಹಳ್ಳಿ ಮಾರ್ಗವಾಗಿ ಸಂಚರಿಸಿ, ಮತ್ತೆ […]

ಚನ್ನಯ್ಯನಹಟ್ಟಿ: ಅಂತರ್ಜಾತಿ ವಿವಾಹಿತ ನವಜೋಡಿಗೆ ಅಧಿಕಾರಿಗಳು, ಅಟ್ರಾಸಿಟಿ ಸಮಿತಿ ಸದಸ್ಯರಿಂದ ಧೈರ್ಯ: ಸೌಲಭ್ಯಗಳ ಭರವಸೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್19:ಚಿತ್ರದುರ್ಗ ತಾಲ್ಲೂಕಿನ ಚನ್ನಯ್ಯನಹಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ಅಂತರ್ಜಾತಿ ವಿವಾಹವಾಗಿದ್ದ ನವಜೋಡಿಯನ್ನು ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿಗಳು ಹಾಗೂ ಅಟ್ರಾಸಿಟಿ ಸಮಿತಿ ಸದಸ್ಯರು ಖುದ್ದಾಗಿ ಭೇಟಿ ಮಾಡಿ, ಕಾನೂನು ರಕ್ಷಣೆ ಹಾಗೂ ಇಲಾಖೆಯ ಸೌಲಭ್ಯಗಳ ಭರವಸೆ ನೀಡುವ ಮೂಲಕ ಧೈರ್ಯ ತುಂಬಿದ್ದಾರೆ.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಓ. ಪರಮೇಶ್ವರಪ್ಪ ಅವರು ನವಜೋಡಿಯನ್ನು ಭೇಟಿಯಾಗಿ ಮಾತನಾಡಿ, ಯಾವುದೇ ಕಾರಣಕ್ಕೂ ನಿಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಬಾರದು, ಅದನ್ನು ಮುಂದುವರಿಸಬೇಕು ಎಂದು ಸಲಹೆ ನೀಡಿದರು. ಅಲ್ಲದೆ, ಆದಷ್ಟು ಬೇಗ […]

ಧಾರ್ಮಿಕ ಕಾರ್ಯದಲ್ಲಿ ಇರಲಿ ಸಹಭಾಗಿತ್ವ ಶಿಮುಲ್ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಹೇಳಿಕೆ

ವರದಿ:- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ: ಜೂ.15 :-ಗ್ರಾಮದ ದೇವತಾ ಧಾರ್ಮಿಕ ಕಾರ್ಯದಲ್ಲಿ ಸರ್ವರ ಸಹಭಾಗಿತ್ವ ಇರಬೇಕು ಎಂದು ಶಿಮುಲ್ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಹೇಳಿದರು.ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಗರಂಗೆರೆ ಗ್ರಾಮ ಪಂಚಾಯತಿ ಹಿತರಕ್ಷಣಾ ವೇದಿಕೆ, ಮೂರ್ತಿ ಡೆವಲಪರ್ಸ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬುದ್ದ,ಬಸವ,ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಉದ್ಟಾಟಿಸಿ ಮಾತನಾಡಿದರು. ಗ್ರಾಮದಲ್ಲಿ ಶಿಥಿಲವಾಗಿರುವ ಶ್ರೀ ದುರ್ಗಾಂಭಿಕ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಐದು ಲಕ್ಷ ಧನ ಸಹಾಯ ಮಾಡಲಾಗುವುದು. ಉಳಿದಂತೆ ಶಾಸಕರು ನೀಡಿರುವ ಅನುದಾನ ಬಳಸಿಕೊಂಡು […]

ಸಂಪೂರ್ಣ ಜಿಲ್ಲೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳಲ್ಲಿ ಮನವಿ

ರೈತರೊಂದಿಗಿನ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿಕೆ   ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಯ ಯಾವುದೇ ಭಾಗಗಳು ಬಿಟ್ಟು ಹೋಗದಂತೆ, ಸಂಪೂರ್ಣ ಜಿಲ್ಲೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆ ಅನುಷ್ಠಾನ ಮಾಡುವಂತೆ, ಶನಿವಾರ ಬೆಂಗಳೂರಿನಲ್ಲಿ ನಡೆಯಲ್ಲಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ, ಜಿಲ್ಲೆಯ ರೈತರ ಪರವಾಗಿ ಮನವಿ ಮಾಡುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಗುರುವಾರ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದ ಕುರಿತಂತೆ ಹೊಳಲ್ಕೆರೆ ಭಾಗದ ರೈತರ ಸಮಸ್ಯೆಗಳ ಕುರಿತು ಸಭೆ ನಡೆಸಿ ಅವರು ಮಾತನಾಡಿದರು.ಪ್ರತಿ ತಾಲ್ಲೂಕುವಾರು ಸೂಕ್ಷ್ಮ ಹಾಗೂ […]

ಬಾಲಕಾರ್ಮಿಕ ಮುಕ್ತ ಸಮಾಜದಿಂದ ದೇಶದ ಭವಿಷ್ಯ ಉಜ್ವಲ – ಆರ್. ಶಿವಣ್ಣ

ವರದಿ:- ಅರುಣ್ ಕುಮಾರ್. ಎಸ್(ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ: “ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುವ ವ್ಯವಸ್ಥೆಗೆ ತಿಲಾಂಜಲಿ ಹಾಡಿದಾಗ ಮಾತ್ರ ಅವರ ಭವಿಷ್ಯ ರೂಪಿಸಲು ಸಾಧ್ಯ. ಆ ಮೂಲಕ ಅವರು ದೇಶದ ಅತ್ಯುನ್ನತ ಸೇವೆಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ,” ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಆರ್. ಶಿವಣ್ಣ ತಿಳಿಸಿದರು. ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ […]

ಸಮಾಜ ಮುಖಿ ಕೆಲಸಗಳು ಎಲ್ಲಿರುತ್ತೋ ಅಲ್ಲಿ ಖಂಡಿತ ಜಯ ಸಿಕ್ಕೆ ಸಿಗುತ್ತದೆ: ಟಿ. ರಘುಮೂರ್ತಿ

ಟಿ.ರಘುಮೂರ್ತಿ ಯುವ ಸೇನೆ ಲೋಗೋ ಬಿಡುಗಡೆ ವರದಿ:- ಅರುಣ್ ಕುಮಾರ್. ಎಸ್. (ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ, ಜೂನ್‌. 11 : ಸಮಾಜ ಮುಖಿ ಕೆಲಸಗಳು ಎಲ್ಲಿರುತ್ತೋ ಅಲ್ಲಿ ಖಂಡಿತ ಜಯ ಸಿಕ್ಕೆ ಸಿಗುತ್ತದೆ. ಹಾಗಾಗಿ ನಾನು ಮೂರನೆ ಬಾರಿಗೆ ಚಳ್ಳಕೆರೆ ಶಾಸಕನಾಗಿ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆಂದು ಶಾಸಕ ಟಿ.ರಘುಮೂರ್ತಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.ತಮ್ಮ 63 ನೇ ಜನ್ಮದಿನದ ಅಂಗವಾಗಿ ಬುಧವಾರ ಒನಕೆ ಓಬವ್ವ ವೃತ್ತದಲ್ಲಿ ಟಿ.ರಘುಮೂರ್ತಿ ಯುವ ಸೇನೆ, ಭೂಮಿ ಗೀತಾ ಪ್ರಾಪರ್ಟಿಸ್, ಅಹೋಬಲ ಟಿ.ವಿ.ಎಸ್. ಹಾಗೂ […]