ಕಾಂಗ್ರೆಸ್ ಟಿಕೆಟ್ಗೆ ಆರ್. ಮಂಜುನಾಥ್ ಭರವಸೆ: “ನಾಯಕತ್ವ ನನ್ನನ್ನು ಕೈಹಿಡಿಯಲಿದೆ”

ಹಿರಿಯೂರು , ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ತಮಗೇ ದೊರೆಯುವ ವಿಶ್ವಾಸವಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆರ್. ಮಂಜುನಾಥ್ ತಿಳಿಸಿದರು. ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಯಾರೂ ನಿರೀಕ್ಷಿಸದ ರಾಜಕೀಯ ಬೆಳವಣಿಗೆಯಾಗಿದ್ದು, ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ತಾಲೂಕು ಮಟ್ಟದಲ್ಲಿ ಸಂಘಟಿಸಿ ಬಲಪಡಿಸುವ ಕೆಲಸದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಹೇಳಿದರು. 1994ರಲ್ಲಿ ಕಾಂಗ್ರೆಸ್ ಪಕ್ಷ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾಗ […]
ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ: ಜಾಗೃತಿ ಜಾಥಾಕ್ಕೆ ಚಾಲನೆಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು -ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್

ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗಬಾರದು ಎಂದು ಉಪವಿಭಾಗಾಧಿಕಾರಿ ಡಾ. ಕಾಂತರಾಜ್ ಹೇಳಿದರು.ನಗರದ ಜಿಲ್ಲಾಆಸ್ಪತ್ರ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ […]
ಡಾ.ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರಿಗೆ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ನೀಡಲಾಗುವ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳ ಪೈಕಿ ಈ ಭಾರಿ ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಡಾ.ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾಮೀಜಿಗಳ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ, ಪರಿಸರ ಕಾಳಜಿ, ಯುವಜನ ಸಬಲೀಕರಣ, ಸಮಸಮಾಜದ ನಿರ್ಮಾಣ ಹಾಗೂ ರಾಷ್ಟ್ರೀಯತೆಯ ಸೇವಾ ಕಾರ್ಯಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ […]
ಯೋಗ ನಡಿಗೆ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆಯೋಗವನ್ನು ಜೀವನದ ಭಾಗವಾಗಿಸಿಕೊಳ್ಳಿ

ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯೋಗದ ಪಾತ್ರ ದೊಡ್ಡದಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಆಯುಷ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಯೋಗ ನಡಿಗೆ ಜಾಥಾ’ಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯ ನಿರ್ಲಕ್ಷಿಸಿ ಆಸ್ತಿ, ಹಣದ ಬೆನ್ನತ್ತುತ್ತಿದ್ದಾರೆ. ಕೊನೆಗೆ ಅದೇ ಆರೋಗ್ಯ ಕಾಪಾಡಿಕೊಳ್ಳಲು […]
ಸಂಚಾರಿ ನಿಯಮ ಉಲ್ಲಂಘನೆ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ-ಸಾರ್ವಜನಿಕ ಜಾಗೃತಿ ಅಭಿಯಾನಕ್ಕೆ ನ್ಯಾಯಾಧೀಶ ಸುದೀನ್ ಕುಮಾರ್ ಚಾಲನೆಸಂಚಾರ ನಿಯಮಗಳ ಪಾಲನೆ ಸ್ವಯಂ ರಕ್ಷಣೆಗಾಗಿ

ಸಂಚಾರಿ ನಿಯಮಗಳು ಇರುವುದು ಕೇವಲ ಪೊಲೀಸರು, ಆರ್ಟಿಒ ಅಧಿಕಾರಿಗಳಿಗೆ ಹೆದರಿ ಪಾಲಿಸುವುದಕ್ಕಲ್ಲ, ಬದಲಿಗೆ ನಮ್ಮ ಮತ್ತು ನಮ್ಮ ಕುಟುಂಬದ ಸುರಕ್ಷತೆಗಾಗಿ ಎಂಬುದನ್ನು ಪ್ರತಿಯೊಬ್ಬ ವಾಹನ ಸವಾರನೂ ಅರಿತುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುದೀನ್ ಕುಮಾರ್ ತಿಳಿಸಿದರು.ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಸಹಯೋಗದಲ್ಲಿ ಇದೇ ಜೂನ್ 21 ರಿಂದ ಜುಲೈ 10 ರವರೆಗೆ […]
ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪನವರ ನಿಧನಕ್ಕೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಸಂತಾಪ

ಹಿರಿಯ ಸಾಹಿತಿ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪನವರ ನಿಧನಕ್ಕೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ವೀರೇಂದ್ರ ಪಪ್ಪಿರವರು ಶನಿವಾರ ನುಡಿನಮನ ಸಲ್ಲಿಸಿದರು. ನಗರದ ಒನಕೆ ಓಬವ್ವ ವೃತ್ತದಲ್ಲಿ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಜಿ.ಎಸ್.ಉಜ್ಜಿನಪ್ಪನವರ ನುಡಿ ನಮನದಲ್ಲಿ ಪಾಲ್ಗೊಂಡು ಮಾತನಾಡುತ್ತ ಜಿ.ಎಸ್.ಉಜ್ಜಿನಪ್ಪನವರು ಪತ್ರಕರ್ತರಾಗಿ ಇಡಿ ಜೀವನವನ್ನು ಸಮಾಜದಲ್ಲಿನ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸಕ್ಕೆ ಮುಡುಪಾಗಿಟ್ಟಿದ್ದರು. ಅವರ ನಿಧನ ಅಪಾರ ನೋವುಂಟು ಮಾಡಿದೆ. ಅವರ ಬರವಣಿಗೆ ಪತ್ರಿಕೆಯಲ್ಲಿ ಪ್ರಕಟಗೊಂಡಾಗ ನಾವುಗಳು ಎಚ್ಚೆತ್ತುಕೊಂಡು ಸಮಸ್ಯೆಗಳ ಪರಿಹಾರದ ಕಡೆ ಗಮನ ಕೊಡುತ್ತಿದ್ದೇವೆ. ಭಗವಂತ ಅವರ […]
ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಕಡೆಗೆ ಕೊಂಡೊಯ್ಯುವೆ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

ನನ್ನ ಪಾಲಿಗೆ ಬಂದ ಕೆಲಸ ನಾನು ಪ್ರಾಮಾಣಿಕವಾಗಿ ಮಾಡುವೆ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ೧ ಕೋಟಿ ೨೦ ಲಕ್ಷ ವೆಚ್ಚದ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಚಿತ್ರದುರ್ಗ, ಜೂನ್ ೨೦ : ನನ್ನ ಮತ ಕ್ಷೇತ್ರದ ಅಭಿವೃದ್ಧಿಯ ಕಡೆಗೆ ಕೊಂಡೊಯ್ಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದೇನೆ, ನನ್ನ ಪಾಲಿಗೆ ಬಂದ ಕೆಲಸವನ್ನು ಪ್ರಾಮಾಣಿಕವಾಗಿ ಜನರಿಗೆ ಅನುಕೂಲ ವಾಗುವಂತಹ ಅಭಿವೃದ್ಧಿ ಕೆಲಸವನ್ನು ಕ್ಷೇತ್ರದ ವಿವಿಧಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ನಗರದ ಶ್ರೀ ಶನೇಶ್ವರ ದೇವಸ್ಥಾನ ಹಾಗೂ […]
ಉಜ್ಜನಪ್ಪ ನಿಧನ ಜಿಲ್ಲೆಗೆ ದೊಡ್ಡ ನಷ್ಟ

ಶೀಘ್ರದಲ್ಲಿ ನುಡಿನಮನ ಕಾರ್ಯಕ್ರಮ > ಜಿಲ್ಲಾ ನೀರಾವರಿ ಹೋರಾಟ ಸಮಿತಿ ಹೇಳಿಕೆ ಚಿತ್ರದುರ್ಗ, ಜೂ.20: ಹಿರಿಯ ಪತ್ರಕರ್ತ, ಕತೆಗಾರ, ಪ್ರಗತಿಪರ ಕೃಷಿಕ, ನೀರಾವರಿಹೋರಾಟಗಾರ ಜಿ.ಎಸ್.ಉಜ್ಜಿನಪ್ಪ ಅವರ ನಿಧನ ಜಿಲ್ಲೆಗೆ ಅತ್ಯಂತ ನಷ್ಟವನ್ನುಂಟು ಮಾಡಿದೆಎಂದು ಜಿಲ್ಲಾ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಪಿ.ಕೋದಂಡರಾಮಯ್ಯ, ಪ್ರಧಾನ ಸಂಚಾಲಕಡಾ. ಬಂಜಗೆರೆ ಜಯಪ್ರಕಾಶ್ ಸಂತಾಪ ಸೂಚಿಸಿದ್ದಾರೆ.ಪತ್ರಿಕೆ ವಿತರಣೆ ಮೂಲಕ ಪತ್ರಿಕಾ ಕ್ಷೇತ್ರ ಪ್ರವೇಶಿಸಿ ಬಳಿಕ ವರದಿಗಾರರಾಗಿದ್ದಉಜ್ಜನಪ್ಪ ಕೇವಲ ವೃತ್ತಿಗೆ ಸೀಮಿತಗೊಳ್ಳದೆ ಜಿಲ್ಲೆಯ ಪ್ರಗತಿಗೆ ಶ್ರಮಿಸಿದ್ದಾರೆ.ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿ ನಿಂತಿದ್ದರು. […]
ನೀಟ್ ಅಭ್ಯರ್ಥಿಗಳದ್ದು ಆತ್ಮಹತ್ಯೆಯಲ್ಲ; ಸರ್ಕಾರ ನಡೆಸಿದ ನರಮೇಧ”- ಮಹಾಂತೇಶ ಬಿಳೂರ್ ಆಕ್ರೋಶ!*

*ನೀಟ್ ಅವಾಂತರ ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ!* ಚಿತ್ರದುರ್ಗ: ನೀಟ್ ಪರೀಕ್ಷೆಯಲ್ಲಿನ ಅವಾಂತರ ಮತ್ತು ಸರ್ಕಾರದ ಬೇಜವಾಬ್ದಾರಿತನದಿಂದ ನಡೆಯುತ್ತಿರುವ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಖಂಡಿಸಿ ಇಂದು ಎಐಡಿಎಸ್ಓ ನೇತೃತ್ವದ ಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಯಿತು. ನಗರದ ಡಿಸಿ ಸರ್ಕಲ್ ನಲ್ಲಿ ಸೇರಿದ ವಿದ್ಯಾರ್ಥಿಗಳು ಎನ್ ಟಿ ಎ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಂಘಟನೆಯ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ ಬಿಳೂರ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, “ಮೇ 3 ರಂದು […]
ದೆಹಲಿಯಲ್ಲಿ UPSC ಅಭ್ಯರ್ಥಿಗಳಿಗಾಗಿ ವಿದ್ಯಾರ್ಥಿ ವಸತಿ ಕಟ್ಟಡ ನಿರ್ಮಾಣಕ್ಕೆ ಸಂಪುಟ ಸಭೆ ಅನುಮೋದನೆ

ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೊಸ ಅವಕಾಶ ಬೆಂಗಳೂರು, ಜೂನ್ 20: ಕೇಂದ್ರ ನಾಗರಿಕ ಸೇವೆಗಳ (UPSC) ಪರೀಕ್ಷೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಯಶಸ್ಸು ಸಾಧಿಸಲು ಅನುಕೂಲವಾಗುವ ಮಹತ್ವದ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ದೆಹಲಿಯಲ್ಲಿ UPSC ಪರೀಕ್ಷೆಗೆ ತಯಾರಿ ನಡೆಸುವ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ವಿದ್ಯಾರ್ಥಿ ವಸತಿ ಹಾಗೂ ಅಧ್ಯಯನ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಹಸಿರು ನಿಶಾನೆ ತೋರಿದೆ. ರಾಜ್ಯದ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳು UPSC, IAS, IPS, […]