ಪ್ರಕೃತಿ ವಿಕೋಪ ಪರಿಶೀಲನಾ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿಕೆ ಬರ ನಿರ್ವಹಣೆ ಸರ್ಕಾರದಿಂದ ಸಲಕ ಸಿದ್ದತೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಸೂಚನೆ

ರಾಜ್ಯದಲ್ಲಿ ಬರ ಮತ್ತು ಪ್ರಕೃತಿ ವಿಕೋಪ ನಿರ್ವಹಣೆಗೆ ಸರ್ಕಾರವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ತಲಾ 5 ಕೋಟಿ ರೂಪಾಯಿಗಳನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಚಿತ್ರದುರ್ಗ ಜಿಲ್ಲಾ ಪ್ರಕೃತಿ ವಿಕೋಪ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪ್ರಕೃತಿ ವಿಕೋಪ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಿದರು.ಬರ ಮತ್ತು ಪ್ರಕೃತಿ ವಿಕೋಪ ನಿರ್ವಹಣೆಯ ಒಟ್ಟಾರೆ ಜವಾಬ್ದಾರಿ ಜಿಲ್ಲಾಧಿಕಾರಿಗಳು […]
ಎಸ್ಐಆರ್ ಜಾಗೃತಿಗಾಗಿ ಸೈಕಲ್ ರ್ಯಾಲಿ ಹಾಗೂ ವಾಕಥಾನ್: ಜಿ.ಪಂ. ಸಿಇಒ ಡಾ.ಎಸ್.ಆಕಾಶ್ ಚಾಲನೆ ಮನೆಗೆ ಬಂದ ಗಣತಿ ನಮೂನೆ ಭರ್ತಿ ಮಾಡಿ ಬಿಎಲ್ಒಗೆ ನೀಡಿ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್ಐಆರ್-2026) ಅತ್ಯಂತ ಪ್ರಮುಖವಾದ ಪ್ರಕ್ರಿಯೆಯಾಗಿದ್ದು, ಅರ್ಹ ಮತದಾರರೆಲ್ಲರೂ ತಮ್ಮ ಮನೆ ಬಾಗಿಲಿಗೆ ಬಂದಿರುವ ಗಣತಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ, ಮತಗಟ್ಟೆ ಅಧಿಕಾರಿಗಳಿಗೆ (ಬಿಎಲ್ಒ) ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದರು.ಭಾರತ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಸ ಪರಿಷ್ಕರಣೆ ಕುರಿತು ಅರಿವು ಮೂಡಿಸಲು ಶನಿವಾರ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಆಯೋಜಿಸಲಾಗಿದ್ದ ‘ಸೈಕಲ್ ಜಾಥಾ’ ಹಾಗೂ ‘ವಾಕಥಾನ್’ […]
ಕಾಂಗ್ರೆಸ್ ಪಕ್ಷವು ಎಸ್ಐಆರ್ ವಿಚಾರದಲ್ಲಿ ಜನರಲ್ಲಿ ಅನಗತ್ಯ ಮತ್ತು ಅನಪೇಕ್ಷಿತ ಗೊಂದಲಗಳನ್ನು ಸೃಷ್ಟಿ ಮಾಡುತ್ತಿದೆ: ಹನುಮಂತೇಗೌಡ

ಕಾಂಗ್ರೆಸ್ ಪಕ್ಷವು ಎಸ್ಐಆರ್ ವಿಚಾರದಲ್ಲಿ ಜನರಲ್ಲಿ ಅನಗತ್ಯ ಮತ್ತು ಅನಪೇಕ್ಷಿತ ಗೊಂದಲಗಳನ್ನು ಸೃಷ್ಟಿ ಮಾಡುತ್ತಿದೆ. ಚುನಾವಣಾ ಆಯೋಗದ ಮೇಲೆ ಜನರು ಇಟ್ಟಿರುವ ನಂಬಿಕೆ-ವಿಶ್ವಾಸಕ್ಕೆ ಧಕ್ಕೆ ತರುವ ಕಾರ್ಯ ನಡೆದಿದೆ ಎಂದು ಬಿಜೆಪಿ ಮುಖಂಡರಾದ ಹನುಮಂತೇಗೌಡ ಕಾಂಗ್ರೆಸ್ ಪಕ್ಷದ ಮೇಲೆ ಕಿಡಿ ಕಾರಿದ್ದಾರೆ. ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಈ ಹಿಂದೆ 2002ರಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕಾರ್ಯ ನಡೆದಿತ್ತು. ಕಳೆದ 24 ವರ್ಷಗಳಿಂದ ಎಸ್ಐಆರ್ ನಡೆದಿಲ್ಲ. ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಜೂನ್ 30ರಿಂದ […]
ಸಾಂಖ್ಯಿಕ ದಿನಾಚರಣೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಎಂ. ಬಾಬು ಅಭಿಮತಅಂಕಿ-ಅಂಶಗಳಿಲ್ಲದ ಜೀವನ ಊಹಿಸಲು ಸಾಧ್ಯವಿಲ್ಲ

ಅಂಕಿ-ಅಂಶಗಳು ಪ್ರತಿಯೊಂದು ಕ್ಷೇತ್ರದಲ್ಲೂ ಹಾಸುಹೊಕ್ಕಾಗಿವೆ. ಅಂಕಿ-ಅಂಶಗಳಿಲ್ಲದಿದ್ದರೆ ನಾವು ಯಾವುದೇ ಪ್ರಗತಿ ಸಾಧಿಸಲು, ವಿಷಯಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ ಇರುತ್ತಿರಲಿಲ್ಲ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಂ. ಬಾಬು ಅಭಿಪ್ರಾಯಪಟ್ಟರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಂಖ್ಯಿಕ ತಜ್ಞ ಪ್ರೊ.ಪಿ.ಸಿ.ಮಹಾಲನೋಬಿಸ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ನಮ್ಮ ಜೀವನದಲ್ಲಿ ಅಂಕಿಗಳ ಮಹತ್ವ ಅಪಾರ. ಮನುಷ್ಯನ ಜನ್ಮದಿನಾಂಕವೇ ಸಂಖ್ಯೆಗಳಿಂದ ಆರಂಭವಾಗುತ್ತದೆ. ನಮ್ಮ ದಿನನಿತ್ಯದ ಬದುಕಿನಲ್ಲಿ ನಾವು ಬಳಸುವ ಬ್ಯಾಂಕಿಂಗ್ ಕ್ಷೇತ್ರದಿಂದ ಹಿಡಿದು ಕಂದಾಯ ಇಲಾಖೆಯವರೆಗೆ ಸಾಂಖ್ಯಿಕತೆ […]
ಹಿರಿಯೂರಿನ ಶಾಶ್ವತ ನೀರಾವರಿ ಕನಸಿಗೆ ಹೊಸ ಭರವಸೆ

ಜೆ.ಜಿ.ಹಳ್ಳಿ–ಐಮಂಗಲ ಹೋಬಳಿ ಕೆರೆಗಳಿಗೆ ನೀರು ಹರಿಸಲು ₹244 ಕೋಟಿ ಯೋಜನೆಗೆ ಸಚಿವ ಸಂಪುಟ ಅನುಮೋದನೆಗೆ ಸಿದ್ಧತೆ; ರೈತರ ಬೇಡಿಕೆಗೆ ಸರ್ಕಾರ ಸ್ಪಂದನೆ ಹಿರಿಯೂರು, ಜುಲೈ 2:ಹಿರಿಯೂರು ತಾಲೂಕಿನ ಜೆ.ಜಿ.ಹಳ್ಳಿ ಹೋಬಳಿ, ಗಾಯತ್ರಿ ಜಲಾಶಯ ವ್ಯಾಪ್ತಿ, ಕಲ್ವಳ್ಳಿ ಭಾಗ ಹಾಗೂ ಐಮಂಗಲ ಹೋಬಳಿಯ ಕೆರೆಗಳಿಗೆ ನೀರು ಹರಿಸಿ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದ್ದು, ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಅನುಮೋದನೆ ದೊರೆಯುವ ಸಾಧ್ಯತೆ ಹೆಚ್ಚಾಗಿದೆ. ಈ ಸಂಬಂಧ […]
ಬೆಸ್ಕಾಂ ಕಚೇರಿ ಮುಂದೆ ರೈತರ ಪ್ರತಿಭಟನೆ: ಸುಟ್ಟ ಪರಿವರ್ತಕಗಳನ್ನು ಸೋಮವಾರದೊಳಗೆ ವಿತರಿಸುವ ಭರವಸೆ

ಹಿರಿಯೂರು: ರೈತರ ಬೋರ್ವೆಲ್ಗಳಿಗೆ ಅಳವಡಿಸಿರುವ ವಿದ್ಯುತ್ ಪರಿವರ್ತಕಗಳು (ಟ್ರಾನ್ಸ್ಫಾರ್ಮರ್ಗಳು) ಸುಟ್ಟ ನಂತರ ಸರ್ಕಾರದ ಆದೇಶದಂತೆ 72 ಗಂಟೆಗಳೊಳಗೆ ದುರಸ್ತಿಪಡಿಸಿ ಮರು ಅಳವಡಿಸಬೇಕಾದರೂ, ಬೆಸ್ಕಾಂ ಅಧಿಕಾರಿಗಳು ತಿಂಗಳುಗಟ್ಟಲೆ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಗುರುವಾರ ಹಿರಿಯೂರಿನ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ತಾಲೂಕಿನಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ಅಂತರ್ಜಲ ಮಟ್ಟ ಕುಸಿದಿದ್ದು, ಮುಂಗಾರು ಮಳೆಯ ಕೊರತೆಯಿಂದ ತೋಟಗಾರಿಕೆ ಸೇರಿದಂತೆ ವಿವಿಧ ಬೆಳೆಗಳು ಒಣಗುತ್ತಿವೆ. ಇಂತಹ ಸಂಕಷ್ಟದ […]
ಜವನಗೊಂಡನಹಳ್ಳಿ ಹಾಗೂ ಐಮಂಗಲ ಹೋಬಳಿ ಕೆರೆಗಳಿಗೆ ನೀರು: ತಂದೆಯ ಕನಸು ನನಸಾಗಿಸಲು ಸುಹಾಸ್ ಸುಧಾಕರ್ ಪಣ

ಹಿರಿಯೂರು: ಹಿರಿಯೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ದಿವಂಗತ ಡಿ. ಸುಧಾಕರ್ ಆರಂಭಿಸಿದ್ದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿ ತಾಲೂಕಿನ ರೈತರ ಜಮೀನುಗಳಿಗೆ ನೀರು ತಲುಪಿಸುವ ಸಂಕಲ್ಪದೊಂದಿಗೆ ಅವರ ಪುತ್ರ ಸುಹಾಸ್ ಸುಧಾಕರ್ ಮುಂದಾಗಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸುಹಾಸ್ ಸುಧಾಕರ್, ತಮ್ಮ ತಂದೆ ಡಿ. ಸುಧಾಕರ್ ಅವರು ಹಿರಿಯೂರು ತಾಲೂಕಿನ ರೈತರ ಹಿತದೃಷ್ಟಿಯಿಂದ ಭದ್ರಾ ಮೇಲ್ದಂಡೆ ಯೋಜನೆಯಡಿ 64 ಕೆರೆಗಳಿಗೆ ನೀರು ತುಂಬಿಸುವ ಹಾಗೂ 37,131 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ […]
ಬಿ ಎಲ್ ಓ ಗಳು ಬೇಗ ಕೆಲಸ ಮುಗಿಯಲೆಂದು ಅನರ್ಹ ಮತದಾರರನ್ನು ಮತಪಟ್ಟಿಗೆ..ಆರ್ಹ ಮತದಾರನ್ನು ಪಟ್ಟಿಯಿಂದ ಕೈ ಬೀಡುವ ಕೆಲಸ ಮಾಡಿದರೆ ಅದನ್ನು ನಾವು ಮುನ್ನಲೆಗೆ ತರಲಿದ್ದೇವೆ:

ವಿಧಾನ ಪರಿಷತ್ ಸದಸ್ಯರು, ಬಿಜೆಪಿ ರಾಜ್ಯವಕ್ತಾರರಾದ ಕೆ.ಎಸ್.ನವೀನ್ ಆಗ್ರಹಿಸಿದ್ದಾರೆ. ಬಿಎಲ್ಓಗಳ ಮೇಲೆ ಅನವಶ್ಯಕ ಒತ್ತಡ ಏರಿ ದಾಖಲೆಗಳನ್ನು ಸರಿಯಾಗಿ ಪರಿಶೀಲನೆ ಮಾಡದೇ ಮತಪಟ್ಟಿಗೆ ಸೂಚಿಸಿದರೆ ಅಂತಹ ಬಿಎಲ್ಓಗಳನ್ನು ಕಾನೂನು ರೀತ್ಯಾ ಶಿಕ್ಷೆಗೆ ಒಳಪಡಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ.ಈಗ ನಡೆಯುತ್ತಿರುವುದು ಆಗಿರುವ ತಪ್ಪನ್ನು ತಿದ್ದಲು.ಮತ್ತೆ ತಪ್ಪು ಆಗಬಾರದು. ಬಿ ಎಲ್ ಓ ಗಳು ಬೇಗ ಕೆಲಸ ಮುಗಿಯಲೆಂದು ಅನರ್ಹ ಮತದಾರರನ್ನು ಮತಪಟ್ಟಿಗೆ..ಆರ್ಹ ಮತದಾರನ್ನು ಪಟ್ಟಿಯಿಂದ ಕೈ ಬೀಡುವ ಕೆಲಸ ಮಾಡಿದರೆ ಅದನ್ನು ನಾವು ಮುನ್ನಲೆಗೆ ತರಲಿದ್ದೇವೆ ಎಂದು […]
ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯಲ್ಲಿ ಜಿ.ಪಂ.ಸಿಇಓ ಡಾ.ಆಕಾಶ್.ಎಸ್ ಘೋಷಣೆವಿಳಂಬ ಕಾಮಗಾರಿ : ಗುತ್ತಿಗೆದಾದರ ಮೇಲಿನ ದಂಡಕ್ಕೆ ವಿನಾಯತಿ, ಕೆಲಸ ಪೂರ್ಣಗೊಳಿಸಲು ತಾಕಿತು

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜುಲೈ.02:ಜಲಜೀವನ್ ಮಿಷನ್ ಕಾಮಗಾರಿ ವಿಳಂಬಕ್ಕೆ ವಿಧಿಸಲಾಗುವ ಶೇ.10 ರಷ್ಟು ದಂಡಕ್ಕೆ ವಿನಾಯಿತಿ ನೀಡಲಾಗುವುದು. ಪ್ರಾಮಾಣಿಕವಾಗಿ ಕೆಲಸ ಮಾಡುವ ಗುತ್ತಿಗೆದಾರರು ಮುಂದೆ ಬಂದು ಕೆಲಸ ಮುಗಿಸಿಕೊಟ್ಟರೆ, ಕಾಮಗಾರಿ ನಿಗದಿಪಡಿಸಿದ ಪೂರ್ಣ ಹಣವನ್ನು ಅವರಿಗೆ ಪಾವತಿ ಮಾಡಲಾಗುವುದು ಎಂದು ಜಿ.ಪಂ.ಸಿಇಓ ಡಾ.ಎಸ್.ಆಕಾಶ್ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ದಂಡ ವಿನಾಯಿತಿ ನೀಡಿದರೆ ಶೇ.80 ರಷ್ಟು ಗುತ್ತಿಗೆದಾರು ಜಲಜೀವನ್ ಮಿಷನ್ ಕಾಮಗಾರಿಯನ್ನು ಪೂರ್ಣಗೊಳಿಸಲು […]
ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಸದ್ಗುರು ಜಗ್ಗಿ ವಾಸುದೇವ್ ಭೇಟಿ

ಪರಮಪೂಜ್ಯ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರೊಂದಿಗೆ ಸೌಹಾರ್ದಯುತ ಆಧ್ಯಾತ್ಮಿಕ ಸಂವಾದ ಚಿತ್ರದುರ್ಗ, ಜುಲೈ 1: ವಿಶ್ವದಾದ್ಯಂತ ಯೋಗ, ಆಧ್ಯಾತ್ಮಿಕತೆ, ಪರಿಸರ ಸಂರಕ್ಷಣೆ ಮತ್ತು ಮಾನವೀಯ ಮೌಲ್ಯಗಳ ಸಂದೇಶವನ್ನು ಸಾರುತ್ತಿರುವ ಅಂತರರಾಷ್ಟ್ರೀಯ ಖ್ಯಾತಿಯ ಆಧ್ಯಾತ್ಮಿಕ ಚಿಂತಕರು, ಈಶಾ ಫೌಂಡೇಶನ್ ಸಂಸ್ಥಾಪಕರಾದ ಪೂಜ್ಯ ಶ್ರೀ ಸದ್ಗುರು ಜಗ್ಗಿ ವಾಸುದೇವ್ ಅವರು ಬುಧವಾರ ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ, ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ […]