ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಪರಿಸರ ಮಾಲಿನ್ಯಕ್ಕೆ ಕಡಿವಾಣ ಹಾಕಿ -ಜಿಲ್ಲಾ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜೂ.05:ಆಧುನಿಕ ಜೀವನಶೈಲಿಗೆ ಒಗ್ಗಿಕೊಂಡಿರುವ ನಾವು ಸ್ವಚ್ಛಂದ ಜೀವನ ನಡೆಸಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು, ಅದರಿಂದ ಪರಿಸರದ ಮೇಲಾಗುತ್ತಿರುವ ಹಾನಿಯ ಬಗ್ಗೆ ಯೋಚಿಸುತ್ತಿಲ್ಲ. ನಮ್ಮ ಸ್ವಾರ್ಥಕ್ಕಾಗಿ ಪರಿಸರ ಹಾಳುಗೆಡವುತ್ತಿರುವುದು ಆತಂಕಕಾರಿ ಸಂಗತಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಡಿ. ಮಹಾವರ್ಕರ್ ಕಳವಳ ವ್ಯಕ್ತಪಡಿಸಿದರು.ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಪರಿಸರ ದಿನಾಚರಣೆ’ ಅಂಗವಾಗಿ ಸಸಿ ನೆಡುವ […]
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ನಿಸರ್ಗ ಚಾರಿಟೇಬಲ್ ಟ್ರಸ್ಟ್” ಹಾಗೂ” ಡಾ. ಬಿಆರ್ ಅಂಬೇಡ್ಕರ್ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಘ ಮತ್ತು ಜೆ ಸಿ ಬೋಸ್ ಇಕೋ ಕ್ಲಬ್ ಇವರ ಸಂಯುತ್ತಾ ಆಶಯದಲ್ಲಿ ಪಾಲವ್ನಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ಪರಿಸರ ಜಾಗೃತಿ ಮತ್ತು ಸಸಿ ನೆಡೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಮುಖ್ಯ ಅತಿಥಿಗಳಾಗಿ ಪಿಡಿಒ ಬಸವರಾಜ್ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಸಾಂಸ್ಕೃತಿಕ ಸಂಘ ಹಾಗೂ ನಿಸರ್ಗ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರು ನಾಗರಾಜ್ ಟಿ ಅಪಾರ ಮುಖ್ಯ ಶಿಕ್ಷಕರಾದ ರಂಗ ದೇವ್, ವೆಂಕಟೇಶ್, M R ರಾಮಚಂದ್ರಪ್ಪ ನಾಗೇಂದ್ರಪ್ಪ ಚಿದಾನಂದ್ ಹಾಗೂ ಊರಿನ ಪ್ರಮುಖ ಮುಖಂಡರು ಉಪಸ್ಥಿತಿ ಇದ್ದರು
ಪರಿಸರವು ಮಾನವನ ಜೀವ ನಾಡಿ – ನವನೀತ (ಪಿ.ಡಿ.ಒ) ಕರೆ

ವರದಿ:- ಅರುಣ್ ಕುಮಾರ್. ಎಸ್ ( ದೊಡ್ಡ ಉಳ್ಳಾರ್ತಿ) ಚಳ್ಳಕೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದೊಡ್ಡ ಉಳ್ಳಾರ್ತಿ ಗ್ರಾಮದ ಸರ್ಕಾರಿ ಕನ್ನಡ ಮತ್ತು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಹಸರೀಕರಣ ಹಾಗೂ ಗಿಡ ನೆಡುವ ಮೂಲಕ ಸಸಿಗೆ ನೀರೆರೆದು ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವನೀತ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಪಿಡಿಒ ನವನೀತ ರವರು, ಪರಿಸರ ಸಂರಕ್ಷಣೆ ಇಂದಿನ ಅತ್ಯಂತ ಪ್ರಮುಖ ಅಗತ್ಯವಾಗಿದ್ದು, ಹಸಿರೀಕರಣದ ಜೊತೆಗೆ ಪ್ಲಾಸ್ಟಿಕ್ ನಿರ್ಮೂಲನೆಗೂ ಸಾರ್ವಜನಿಕರು […]
ಎಸ್‍ಐಆರ್ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಅರ್ಹ ಮತದಾರರು ವಂಚಿತರಾಗದಂತೆ ಎಚ್ಚರ ವಹಿಸಿ ಬೂತ್ ಮಟ್ಟದ ಏಜೆಂಟರು ಜವಾಬ್ದಾರಿಯಿಂದ ಕೆಲಸ ಮಾಡಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜೂ.03:ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಕುರಿತು ಬೂತ್ ಮಟ್ಟದ ಏಜೆಂಟರುಉ (ಬಿಎಲ್‍ಒ) ಸಂಪೂರ್ಣ ಮಾಹಿತಿ ಹೊಂದುವುದು ಅಗತ್ಯವಾಗಿದ್ದು, ತಮಗೆ ನೀಡಿರುವ ಜವಾಬ್ದಾರಿ ಅರಿತು ನಿಷ್ಠೆಯಿಂದ ಕೆಲಸ ಮಾಡಬೇಕು. ಜಿಲ್ಲೆಯಲ್ಲಿ ಯಾವುದೇ ಒಬ್ಬ ಅರ್ಹ ಮತದಾರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಬೂತ್ ಮಟ್ಟದ ಏಜೆಂಟರಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಕುರಿತು ಮಾನ್ಯತಾ ಪಡೆದ ರಾಜಕೀಯ […]
ಹಾಲು ಉತ್ಪಾದಕರೇ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು. ಹಾಲು ಉತ್ಪಾದನೆಯಲ್ಲಿ ರಾಜ್ಯ ದ್ವಿತೀಯ.ಬಿ.ಸಿ ಸಂಜೀವ ಮೂರ್ತಿ

ವರದಿ:- ಅರುಣ್ ಕುಮಾರ್.ಎಸ್ (ದೊಡ್ಡ ಉಳ್ಳಾರ್ತಿ) ಪ್ರತಿನಿತ್ಯ ಒಂದು ಕೋಟಿ ಲೀಟರ್ ಗೂ ಅಧಿಕ ಹಾಲು ಹಾಗೂ ಉತ್ಪಾದಿಸುವ ಕರ್ನಾಟಕ ಕ್ಷೀರ ಉತ್ಪಾದನೆಯಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದೆ ಎಂದು ಶಿಮುಲ್ ನಿರ್ದೇಶಕ ಬಿ.ಸಿ ಸಂಜೀವಮೂರ್ತಿ ಹೇಳಿದರು. ನಗರದ ನಂದಿನಿ ಪಾರ್ಲರ್ ನಲ್ಲಿ ಶಿವಮೊಗ್ಗ ಹಾಲು ಒಕ್ಕೂಟದಿಂದ ಸೋಮವಾರ ಆಯೋಜಿಸಿದ್ದ ವಿಶ್ವ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಜಗತ್ತಿನ ಒಟ್ಟಾರೆ ಉತ್ಪಾದನೆಯಲ್ಲಿ ಶೇ.27ರಷ್ಟು ಹಾಲು ಭಾರತದಲ್ಲಿ ಉತ್ಪಾದನೆಯಾಗುತ್ತದೆ. ದೇಶದಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದು ಕರ್ನಾಟಕ 2ನೇ ಸ್ಥಾನ ಪಡೆದಿದೆ, […]
ಸರ್ಕಾರ ಹಾಗೂ ಶಿಮುಲ್ ವತಿಯಿಂದ ದೊರೆಯುವ ಸೌಲಭ್ಯಗಳನ್ನು ಪ್ರತಿಯೊಬ್ಬ ಹೈನುಗಾರ ರೈತನಿಗೂ ತಲುಪಿಸುವ ಜವಾಬ್ದಾರಿ ಕಾರ್ಯದರ್ಶಿಗಳ ಮೇಲಿದೆ – ಬಿ.ಸಿ ಸಂಜೀವಮೂರ್ತಿ

ವರದಿ :- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ, ಜೂನ್ 2 :- ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೇ ತಿಂಗಳಿನ ಕಾರ್ಯದರ್ಶಿಗಳ ಪ್ರಗತಿಪರಿಶೀಲನಾ ಸಭೆಯು ಚಳ್ಳಕೆರೆಯ ನಂದಿನಿ ಉಪ ಕಚೇರಿಯ ಕುರಿಯನ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಇತ್ತೀಚೆಗೆ ನಿಧನರಾದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿ.ಸಿ. ಸಂಜೀವಮೂರ್ತಿ.ಹಾಲು ಉತ್ಪಾದಕರ ಸಹಕಾರ ಸಂಘಗಳು ಗ್ರಾಮೀಣ ಆರ್ಥಿಕ ವ್ಯವಸ್ಥೆಯ ಬೆನ್ನೆಲುಬಾಗಿದ್ದು, […]
ರೈತರು ದೇಶದ ಆರ್ಥಿಕತೆಯ ಬೆನ್ನೆಲುಬು ಮಾತ್ರವಲ್ಲ, ಅನ್ನ ನೀಡುವ ಅನ್ನದಾತರು. ಅವರ ಶ್ರಮ ಮತ್ತು ಬೆವರಿನ ಫಲದಿಂದಲೇ ಸಮಾಜದ ಬದುಕು : ಕರವೇ (ಕನ್ನಡ ಸೇನೆ)ತಾಲ್ಲೂಕು ಅಧ್ಯಕ್ಷ ಪಿ.ಮುತ್ತಯ್ಯ ಕರೆ.

ವರದಿ:- ಅರುಣ್ ಕುಮಾರ್. ಎಸ್(ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ:- ಮದ್ಯ ಕರ್ನಾಟಕದ ಪ್ರಮುಖ ಪ್ರದೇಶವಾದ ಚಿತ್ರದುರ್ಗ ಜಿಲ್ಲೆ,ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯು ಅತಿ ಕಡಿಮೆ ಮಳೆ ಬೀಳುವ ಪ್ರದೇಶವೆಂದು ಹೆಸರಾಗಿದ್ದು,ಆದರೆ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ಕೃಪೆಯಿಂದ ಉತ್ತಮವಾದ ಮುಂಗಾರು ಮಳೆ ಪ್ರಾರಂಭವಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಪ್ರಾರಂಭವಾಗಿದೆ,ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಯಾವುದೇ ತೊಂದರೆಯಾಗದಂತೆ ಸಕಾಲದಲ್ಲಿ ಗುಣಮಟ್ಟದ ಬೀಜ ಹಾಗೂ ಗೊಬ್ಬರಗಳನ್ನು ಪೂರೈಸುವಂತೆ ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಸೇನೆ) ನಾಯಕನಹಟ್ಟಿ ಹೋಬಳಿ ಘಟಕದ ವತಿಯಿಂದ ಕೃಷಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಕರವೇ […]
ಶಾಲಾ ಪ್ರಾರಂಭೋತ್ಸವದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿಕೆಖಾಸಗಿ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆ ಉಳಿಸಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್ 01:ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಅಳಿವಿನ ಅಂಚಿಗೆ ತಲುಪುತ್ತಿರುವುದು ಕಳವಳಕಾರಿ ಸಂಗತಿ. ಇವುಗಳ ಉಳಿವು ಕೇವಲ ಸರ್ಕಾರದ ಕೈಯಿಂದ ಮಾತ್ರ ಸಾಧ್ಯವಿಲ್ಲ. ಸರ್ಕಾರದ ಜೊತೆಗೆ ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿದಾಗ ಮಾತ್ರ ಸರ್ಕಾರಿ ಶಾಲೆಗಳನ್ನು ಉಳಿಸಲು ಮತ್ತು ಬೆಳೆಸಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು. ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು […]
ಹಿಂದುಳಿದ ಜಿಲ್ಲೆಗೆ ಹೋರಾಟ ಮಾಡಿದ ನಾಯಕನಿಗೆ ಸಚಿವ ಸ್ಥಾನ ಸಿಗಲೇಬೇಕು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ಒತ್ತಾಯ. ಕೆ.ಟಿ ಶಿವುಕುಮಾರ್

ವರದಿ:- ಅರುಣ್ ಕುಮಾರ್.ಎಸ್( ದೊಡ್ಡಉಳ್ಳಾರ್ತಿ) ಚಿತ್ರದುರ್ಗ, ಮೇ. 29 : ಮೂರು ಬಾರಿ ಶಾಸಕರಾಗಿ ಚಳ್ಳಕೆರೆ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯನ್ನಾಗಿ ಅಭಿವೃದ್ದಿಪಡಿಸಿರುವ ಶಾಸಕ ಟಿ.ರಘುಮೂರ್ತಿಗೆ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರುಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್.ನಿಜಲಿಂಗಪ್ಪನವರನ್ನು ಹೊರತುಪಡಿಸಿದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಬೇರೆ ಯಾರಿಗೂ ರಾಜಕೀಯವಾಗಿ ಉನ್ನತ ಸ್ಥಾನಮಾನ ಸಿಕ್ಕಿಲ್ಲ. ಮಧ್ಯ ಕರ್ನಾಟಕದ ಬಯಲು ಸೀಮೆ ಚಿತ್ರದುರ್ಗ ಜಿಲ್ಲೆ ಹಿಂದುಳಿದ ಪ್ರದೇಶ. ಚಳ್ಳಕೆರೆಗೆ ಮಂಜೂರಾಗಿದ್ದ ಡಿಗ್ರಿ ಕಾಲೇಜು […]
ಬ್ಯಾಂಕ್‍ನ ಪ್ರಗತಿ ಹಾಗೂ ರೈತರ ಹಿತರಕ್ಷಣೆಗೆ ಬದ್ಧವಾಗಿ ಕೆಲಸ ಮಾಡುವೆ :- ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ಅವಿರೋಧವಾಗಿ ಆಯ್ಕೆ

ವರದಿ :- ಅರುಣ್ ಕುಮಾರ್ .ಎಸ್(ದೊಡ್ಡಉಳ್ಳಾರ್ತಿ) ಚಿತ್ರದುರ್ಗ. ಮೇ.29: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ (ಡಿಸಿಸಿ) ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಸಚಿವ ಡಿ.ಸುಧಾಕರ್ ಅವರ ಅಕಾಲಿಕ ನಿಧನದ ಹಿನ್ನಲೆಯಲ್ಲಿ, ಸಹಕಾರ ಸಂಘಗಳ ಕಾಯ್ದೆ ಪ್ರಕಾರ ಶುಕ್ರವಾರ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ […]