“ಕಾಂಗ್ರೆಸ್‌ಗೆ ಕಾರ್ಯಕರ್ತರೇ ಶಕ್ತಿ; ಕಡೆಗಣನೆಗೆ ಅವಕಾಶವಿಲ್ಲ – ವಿ.ಎಸ್. ಉಗ್ರಪ್ಪ”

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ • ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಪಾರದರ್ಶಕ ಆಯ್ಕೆ • ಶಿಸ್ತು ಮತ್ತು ಸಂಘಟನೆಗೆ ಕೆಪಿಸಿಸಿ ಒತ್ತು ಚಿತ್ರದುರ್ಗ, ಜು. 27:ಕಾಂಗ್ರೆಸ್ ಪಕ್ಷದ ನೈಜ ಶಕ್ತಿ ಕಾರ್ಯಕರ್ತರೇ ಆಗಿದ್ದು, ಪಕ್ಷದಲ್ಲಿ ಯಾವುದೇ ಕಾರ್ಯಕರ್ತರಿಗೂ ಕಡೆಗಣನೆ ಅಥವಾ ಅನ್ಯಾಯವಾಗುವುದಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಸಂಘಟನ್ ಶ್ರೀಜನ್ ಅಭಿಯಾನದ ಉಸ್ತುವಾರಿ ವಿ.ಎಸ್. ಉಗ್ರಪ್ಪ ಸ್ಪಷ್ಟಪಡಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆ ಬಲಪಡಿಸುವ […]

🔥 ಅಂಬೇಡ್ಕರ್ ಆದರ್ಶಗಳ ಬೆಳಕಿನಲ್ಲಿ ಪ್ರತಿಭೆಗೆ ರಾಜ್ಯಮಟ್ಟದ ಗೌರವ: ಶೇ.80ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಿರಿಯೂರಿನಲ್ಲಿ ಅದ್ದೂರಿ ಸನ್ಮಾನ

ಅಂಬೇಡ್ಕರ್ ಜಯಂತಿ, ಪ್ರೊ. ಬಿ. ಕೃಷ್ಣಪ್ಪ ಜಯಂತಿ ಹಾಗೂ ಸಮಿತಿಯ ವಾರ್ಷಿಕೋತ್ಸವ ಆಚರಣೆ ಹಿರಿಯೂರು, ಜು. 27: ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ (ರಿ) ರಾಜ್ಯ ಸಮಿತಿಯ ವತಿಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ, ಶೋಷಿತರ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಮಹಾನ್ ಮಾನವತಾವಾದಿ ಪ್ರೊ. ಬಿ. ಕೃಷ್ಣಪ್ಪ ಅವರ 88ನೇ ಜಯಂತಿ ಹಾಗೂ ಸಮಿತಿಯ ಪ್ರಥಮ ವಾರ್ಷಿಕೋತ್ಸವ ಅಂಗವಾಗಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು […]

ಮಕ್ಕಳ ಸೃಜನಶೀಲತೆ ಮತ್ತು ಏಕಾಗ್ರತೆಗೆ ಸಂಗೀತ ಸಹಕಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ, ಬಿ,ಎಂ, ಗುರುನಾಥ್ ಅಭಿಮತ,

ಹಿರಿಯೂರು: ಮಕ್ಕಳಲ್ಲಿ ಅಡಗಿರುವ ಸೃಜನಶೀಲತೆ ಹಾಗೂ ಏಕಾಗ್ರತೆ ಹೆಚ್ಚಿಸಲು ಸಾಹಿತ್ಯ ಸಂಗೀತ ರಂಗ ಕಲೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ, ಬಿ.ಎಂ, ಗುರುನಾಥ್, ಹೇಳಿದರು , ಪಟ್ಟಣದ ವೇದಾವತಿ ನಗರದಲ್ಲಿರುವ ಡಾ, ಬಿ,ಆರ್, ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿತ್ರದುರ್ಗ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಿರಿಯೂರು, ಇವರುಗಳ ಸಂಯುಕ್ತಶ್ರಯದಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸುಗಮ […]

ಜಾತಿ ರಾಜಕಾರಣವಲ್ಲ, ನೀತಿ ರಾಜಕಾರಣ ಮಾಡಿ; ಜನಗಳಿಕೆಯೇ ಶಾಶ್ವತ ಸಂಪತ್ತು – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಹಿರಿಯೂರಿನಲ್ಲಿ ದಿ. ಡಿ. ಸುಧಾಕರ್ ನುಡಿ ನಮನ ಕಾರ್ಯಕ್ರಮ; ₹244 ಕೋಟಿ ಕೆರೆ ತುಂಬಿಸುವ ಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ಘೋಷಣೆ ಹಿರಿಯೂರು: “ಜಾತಿ ರಾಜಕಾರಣದಿಂದಲ್ಲ, ನೀತಿ ಮತ್ತು ಮಾನವೀಯತೆಯ ರಾಜಕಾರಣದಿಂದಲೇ ಜನರ ಹೃದಯ ಗೆಲ್ಲಬಹುದು. ಹಣ ಗಳಿಕೆ ಶಾಶ್ವತವಲ್ಲ, ಜನಗಳಿಕೆಯೇ ಶಾಶ್ವತ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಪಟ್ಟಣದ ನೆಹರು ಮೈದಾನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಹಿರಿಯೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ದಿವಂಗತ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ […]

ಬರ ಪರಿಹಾರಕ್ಕೆ ವಿಬಿ ಜಿ ರಾಮ್ ಜಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ

ಕರ್ನಾಟಕ ವಾರ್ತೆ(ಚಿತ್ರದುರ್ಗ). ಜು.25: ರಾಜ್ಯದಲ್ಲಿ ಬರಪೀಡಿತ ವಾತಾವರಣವಿರುವುದರಿಂದ ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ಬೇರೆಡೆಗೆ ವಲಸೆ ಹೋಗುವುದನ್ನು ತಡೆಯುವುದು ಸರ್ಕಾರದ ಆದ್ಯತೆಯಾಗಿದೆ. ಇದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಜಾರಿಗೆ ತರಲಾಗಿರುವ ವಿಬಿ ಜಿ ರಾಮ್ ಜಿ (VBG RAM G) ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಕರೆ ನೀಡಿದ್ದಾರೆ. ಚಿತ್ರದುರ್ಗ ನಗರದ ಮರುಘಾಮಠದ ಅನುಭವ ಮಂಟಪದಲ್ಲಿ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ […]

ಹಿರಿಯೂರು ಕ್ಷೇತ್ರ ಅಭಿವೃದ್ಧಿ ಹಾಗೂ ನೀರಾವರಿ ಯೋಜನೆಗೆ ಆದ್ಯತೆ ನೀಡಲು ಎಂಎಲ್‌ಸಿ ಟಿ.ಡಿ.ಶ್ರೀನಿವಾಸ್ ಆಗ್ರಹ

​ಕರ್ನಾಟಕ ವಾರ್ತೆ(ಚಿತ್ರದುರ್ಗ). ಜು.25: ಹಿರಿಯೂರು ಕ್ಷೇತ್ರ ವ್ಯಾಪ್ತಿಯ ವಿವಿಧ ನೀರಾವರಿ, ಕುಡಿಯುವ ನೀರು, ಶಿಕ್ಷಣ ಮತ್ತು ಮೂಲಸೌಕರ್ಯ ಯೋಜನೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಟಿ.ಡಿ. ಶ್ರೀನಿವಾಸ್ ಮುಖ್ಯಮಂತ್ರಿಗಳ ಗಮನ ಸೆಳೆದರು. ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜೋಗಿಹಳ್ಳಿ ಭಾಗದ 17 ಕೆರೆಗಳಿಗೆ ನೀರು: ಹಿರಿಯೂರು ಕ್ಷೇತ್ರದ ಅತಿ ಬರಪೀಡಿತ ಪ್ರದೇಶವಾದ ಜೋಗಿಹಳ್ಳಿ ಭಾಗದ 17 ಕೆರೆಗಳಿಗೆ ನೀರು ತುಂಬಿಸುವ ರೂ.164 ಕೋಟಿ ವೆಚ್ಚದ ಯೋಜನೆಗೆ ಸಂಪುಟ ಅನುಮೋದನೆ ನೀಡಿರುವುದಕ್ಕೆ […]

ಬರದ ಬಿಸಿ ಜನರನ್ನು ತಟ್ಟಲು ಬಿಡೆವು : ಡಿಸಿಎಂ ಡಾ.ಜಿ.ಪರಮೇಶ್ವರ

ಕುಡಿಯುವ ನೀರು, ಮೇವು ಸಮರ್ಪಕ ಪೂರೈಕೆಗೆ ಹಣದ ಕೊರತೆ ಇಲ್ಲ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿಎಂ ಹೇಳಿಕೆ ಚಿತ್ರದುರ್ಗ ಜುಲೈ 25:- ರಾಜ್ಯದಲ್ಲಿ ಬಹುತೇಕ ಜಲಾಶಯಗಳು ತಳಮಟ್ಟಕ್ಕೆ ಬಂದಿದ್ದು, ಶೇ. 80ರಷ್ಟು ಕೆರೆಗಳು ಬತ್ತಿ ಹೋಗಿವೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಇಂದು ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚಿತ್ರದುರ್ಗ ಪ್ರವಾಸ ಕೈಗೊಂಡು, ಹಿರಿಯೂರು ತಾಲೂಕಿನಲ್ಲಿ ಬರ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ, ಬರ […]

ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಪಾರದರ್ಶಕತೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮಎಲ್ಲೆಲ್ಲೂ ಸಿ.ಸಿ. ಕ್ಯಾಮೆರಾ ಅಳವಡಿಕೆಗೆ ಸೂಚನೆ -ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಿತ್ರದುರ್ಗ (ಕರ್ನಾಟಕ ವಾರ್ತೆ) ಜು. 25:ರಾಜ್ಯದ ವಿವಿಧ ಇಲಾಖೆಗಳಲ್ಲಿನ ಸುಮಾರು 72 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಯಾವುದೇ ಪ್ರಕರಣಕ್ಕೆ ಆಸ್ಪದ ನೀಡಬಾರದು. ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲೆಡೆ ಸಿ.ಸಿ. ಕ್ಯಾಮೆರಾ ಅಳವಡಿಕೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ […]

ಕಾವೇರಿ ವಿವಾದ: ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಜೊತೆ ಮಾತುಕತೆಗೆ ಸಿದ್ಧ – ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರೊಂದಿಗೆ ಮಾತುಕತೆ ನಡೆಸಲು ಕರ್ನಾಟಕ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಿನ ಹಂಚಿಕೆ ಕುರಿತ ಯಾವುದೇ ಸಮಸ್ಯೆಗೆ ಸಂವಾದವೇ ಸೂಕ್ತ ಮಾರ್ಗವಾಗಿದ್ದು, ತಮಿಳುನಾಡು ಸರ್ಕಾರ ಸೇರಿದಂತೆ ಕಾವೇರಿ ಜಲಾನಯನದ ಎಲ್ಲಾ ಪಾಲುದಾರ ರಾಜ್ಯಗಳೊಂದಿಗೆ ಚರ್ಚೆ ನಡೆಸಲು ಕರ್ನಾಟಕ ಸರ್ಕಾರ ಮುಕ್ತವಾಗಿದೆ ಎಂದು ಹೇಳಿದರು. ರಾಜ್ಯಗಳ ನಡುವೆ ಪರಸ್ಪರ ಸಹಕಾರ ಹಾಗೂ […]

“ಹಿರಿಯೂರಿನ ಸಮಗ್ರ ಅಭಿವೃದ್ಧಿಯೇ ಗುರಿ; ಕಾಂಗ್ರೆಸ್ ಅವಕಾಶ ನೀಡಿದರೆ ಜನಸೇವೆಗೆ ಸಮರ್ಪಣೆ” – ನಿವೃತ್ತ ಪಿಡಬ್ಲ್ಯೂಡಿ ಪ್ರಧಾನ ಅಭಿಯಂತರ ಸಣ್ಣ ಚಿತ್ತಯ್ಯ

ನೀರಾವರಿ, ಕೈಗಾರಿಕೆ, ಶಿಕ್ಷಣ, ಉದ್ಯೋಗ ಮತ್ತು ಸ್ವಚ್ಛ ನಗರ ನಿರ್ಮಾಣಕ್ಕೆ ಆದ್ಯತೆ – ಪತ್ರಿಕಾಗೋಷ್ಠಿಯಲ್ಲಿ ಅಭಿವೃದ್ಧಿ ಕನಸು ಅನಾವರಣ ಹಿರಿಯೂರು, ಜು.24: ಹಿರಿಯೂರು ತಾಲೂಕಿನ ಸಮಗ್ರ ಅಭಿವೃದ್ಧಿಯೇ ತಮ್ಮ ಜೀವನದ ಧ್ಯೇಯವಾಗಿದ್ದು, ಕಾಂಗ್ರೆಸ್ ಪಕ್ಷ ಅವಕಾಶ ನೀಡಿದರೆ ಜನಸೇವೆಗೆ ಸಂಪೂರ್ಣವಾಗಿ ಸಮರ್ಪಿತರಾಗಿ ದುಡಿಯುವುದಾಗಿ ನಿವೃತ್ತ ಪಿಡಬ್ಲ್ಯೂಡಿ ಪ್ರಧಾನ ಅಭಿಯಂತರ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣ ಚಿತ್ತಯ್ಯ ಹೇಳಿದರು. ಪಟ್ಟಣದ ಸಂಗೀತ ಕಂಪರ್ಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬುದ್ಧ, ಬಸವಣ್ಣ ಮತ್ತು ಡಾ. ಬಿ.ಆರ್. […]