ಕೋಟೆನಾಡಿನ ಕಥೆಗಾರ ಪತ್ತೆ ; ಪತ್ರಕರ್ತ ಓಂಕಾರಮೂರ್ತಿ ರಾಜ್ಯಮಟ್ಟದ ಪ್ರಶಸ್ತಿ ದುರ್ಗದ ಯುವಕನಿಗೆ ಕಥಾ ಗೌರವ
ತರಬೇತಿ ಕಾರ್ಯಾಗಾರದಲ್ಲಿ ಜಿ.ಪಂ ಸಿಇಓ ಡಾ.ಎಸ್.ಆಕಾಶ್ ಹೇಳಿಕೆವಿಬಿಜಿರಾಮ್‍ಜಿ ಯೋಜನೆಯಡಿ ವರ್ಷಕ್ಕೆ 125 ದಿನಗಳ ಉದ್ಯೋಗಾವಕಾಶ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‍ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) (ವಿಬಿಜಿರಾಮ್‍ಜಿ) ಯೋಜನೆಯಡಿ ಅರ್ಹ ಗ್ರಾಮೀಣ ಅಕುಶಲ ಕುಟುಂಬಕ್ಕೆ ವರ್ಷಕ್ಕೆ 125 ದಿನಗಳ ಕಡ್ಡಾಯ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಓ ಡಾ.ಎಸ್.ಆಕಾಶ್ ಹೇಳಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಎಲ್ಲಾ ಅನುಷ್ಠಾನ ಅಧಿಕಾರಿಗಳು, ಪಿಡಿಒಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ಒಂದು ದಿನದ ‘ವಿಬಿಜಿರಾಮ್‍ಜಿ’ ಯೋಜನೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ವಿಬಿಜಿರಾಮ್‍ಜಿ ಯೋಜನೆ ಜುಲೈ 1 […]
ರಕ್ತದಾನ ಶಿಬಿರದಲ್ಲಿ ಐಎಂಎ ಅಧ್ಯಕ್ಷ ಡಾ. ಎಲ್.ಪಾಲಾಕ್ಷಯ್ಯ ಹೇಳಿಕೆಯುವಕರು ರಕ್ತದಾನದ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು

ಚಿತ್ರದುರ್ಗ:ರಕ್ತವನ್ನು ಯಾವುದೇ ಕಾರ್ಖಾನೆಯಲ್ಲಿ ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಅದನ್ನು ಒಬ್ಬರಿಂದ ಮತ್ತೊಬ್ಬರಿಗೆ ದಾನ ಮಾಡಲು ಮಾತ್ರ ಸಾಧ್ಯ. ಯುವಜನತೆ ಹೆಚ್ಚೆಚ್ಚು ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಐಎಂಎ ಜಿಲ್ಲಾ ಅಧ್ಯಕ್ಷರಾದ ಡಾ.ಎಲ್.ಪಾಲಾಕ್ಷಯ್ಯ ಹೇಳಿದರು.ನಗರದ ಐ.ಎಂ.ಎ ಸಭಾಂಗಣದಲ್ಲಿ ಮಂಗಳವಾರ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಹಾಗೂ ಕೋಟೆನಾಡು ವೆಲ್ಫೇರ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ರಕ್ತದಾನ ಶಿಬಿರ’ ಉದ್ಘಾಟಿಸಿ ಅವರು […]
ಸಮಾಜಮುಖಿ ಕಾರ್ಯದೊಂದಿಗೆ ಜನ್ಮದಿನವನ್ನ ಅರ್ಥಪೂರ್ಣಗೊಳಿಸಿ: ಶಾಸಕ ಕೆ.ಸಿ ವೀರೇಂದ್ರ

ಕೆ.ಸಿ.ವಿ ಸಂರಕ್ಷಣಾ ವೇದಿಕೆ ವತಿಯಿಂದ ವಿನೋತನ ಹುಟ್ಟು ಹಬ್ಬ ಆಚರಣೆ ನಗರದ ವಿವಿಧ ಭಾಗಗಳಲ್ಲಿ ಅಭಿಮಾನಿಗಳಿಂದ ಹುಟ್ಟು ಹಬ್ಬ ಆಚರಣೆ ಚಿತ್ರದುರ್ಗ: ಬಣ್ಣ ಬಣ್ಣದ ಕೇಕ್ ಗಳನ್ನ ಕತ್ತರಿಸಿ ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಬದಲು ಸಮಾಜಮುಖಿ ಕಾರ್ಯಗಳೊಂದಿಗೆ ಜನ್ಮದಿನ ಆಚರಿಸಿಕೊಳ್ಳುವುದು ಅರ್ಥಪೂರ್ಣ ಜನ್ಮದಿನವಾಗುತ್ತದೆ. ಪ್ರತಿಯೊಬ್ಬರು ಒಂದೊAದು ಸಸಿ ನೆಟ್ಟು ದೊಡ್ಡ ಮರವನ್ನಾಗಿ ಬೆಳೆಸಿದರೆ ಸಕಲ ಜೀವರಾಶಿಗಳಿಗೆ ಉಸಿರಾಡಲು ಶುದ್ದವಾದ ಗಾಳಿ ಸಿಗಲಿದೆ ಹಾಗೂ ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಕೊಡುಗೆಯಾಗಿ ನೀಡಬಹುದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ […]
ಸಾವಯವ ಕೃಷಿ ಅಳವಡಿಕೆ ಇಂದಿನ ಅನಿವಾರ್ಯ -ಸಹಾಯಕ ಕೃಷಿ ನಿರ್ದೇಶಕ ಆರ್.ರಜನಿಕಾಂತ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್29:ಮುಂದಿನ ಪೀಳಿಗೆಗೆ ಫಲವತ್ತಾದ ಮಣ್ಣು ಮತ್ತು ಆರೋಗ್ಯಕರ ಪರಿಸರ ಉಳಿಸಿಕೊಡಲು ರೈತರು ಸಾವಯವ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಇಂದಿನ ಅನಿವಾರ್ಯತೆಯಾಗಿದೆ ಎಂದು ಬಬ್ಬೂರುಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನಿಕಾಂತ ತಿಳಿಸಿದರು.ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ರಾಜ್ಯ ವಲಯ ಕೃಷಿ ಆಯುಕ್ತಾಲಯ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಆಸಕ್ತ ರೈತರಿಗಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ರೈತರಿಗೆ ಉತ್ತಮ ಪರಿಸರ ಮತ್ತು ಆರೋಗ್ಯಕ್ಕಾಗಿ ಔಷಧಿಯ ಸಸ್ಯಗಳು, […]
ಅಂತರಾಷ್ಟ್ರೀಯ ಎಂಎಸ್‍ಎಂಇ ದಿನಾಚರಣೆ ಅಂಗವಾಗಿ ಭಿತ್ತಿಪತ್ರ ಬಿಡುಗಡೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್29:ಭಾರತೀಯ ರಿಸರ್ವ್ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಲೀಡ್ ಬ್ಯಾಂಕ್ ವತಿಯಿಂದ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈಚೆಗೆ ನಡೆದ ಅಂತರಾಷ್ಟ್ರೀಯ ಎಂಎಸ್‍ಎಂಇ ದಿನಾಚರಣೆ ಅಂಗವಾಗಿ ಆರ್‍ಬಿಐ ವಿನ್ಯಾಸಗೊಳಿಸಿದ ಭಿತ್ತಿಪತ್ರಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಬಿಡುಗಡೆಗೊಳಿಸಿದರು.ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ಪಿ.ಪ್ರವೀಣ್ ಮಾತನಾಡಿ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ದೇಶದ ಆರ್ಥಿಕತೆಯ ಬೆನ್ನೆಲುಬು. ಉದ್ಯಮ್ ನೋಂದಣಿ ಮಾಡಿಕೊಂಡರೆ ಸರ್ಕಾರದ ಎಲ್ಲ ಯೋಜನೆಗಳ ಲಾಭ ಪಡೆಯಬಹುದು ಎಂದು ಮಾಹಿತಿ ನೀಡಿದ ಅವರು, ಈ […]
ಕಾಂಗ್ರೆಸ್ ಟಿಕೆಟ್‌ಗೆ ಆರ್. ಮಂಜುನಾಥ್ ಭರವಸೆ: “ನಾಯಕತ್ವ ನನ್ನನ್ನು ಕೈಹಿಡಿಯಲಿದೆ”

ಹಿರಿಯೂರು , ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ತಮಗೇ ದೊರೆಯುವ ವಿಶ್ವಾಸವಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆರ್. ಮಂಜುನಾಥ್ ತಿಳಿಸಿದರು. ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಯಾರೂ ನಿರೀಕ್ಷಿಸದ ರಾಜಕೀಯ ಬೆಳವಣಿಗೆಯಾಗಿದ್ದು, ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ತಾಲೂಕು ಮಟ್ಟದಲ್ಲಿ ಸಂಘಟಿಸಿ ಬಲಪಡಿಸುವ ಕೆಲಸದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಹೇಳಿದರು. 1994ರಲ್ಲಿ ಕಾಂಗ್ರೆಸ್ ಪಕ್ಷ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾಗ […]
ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ: ಜಾಗೃತಿ ಜಾಥಾಕ್ಕೆ ಚಾಲನೆಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು -ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್

ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗಬಾರದು ಎಂದು ಉಪವಿಭಾಗಾಧಿಕಾರಿ ಡಾ. ಕಾಂತರಾಜ್ ಹೇಳಿದರು.ನಗರದ ಜಿಲ್ಲಾಆಸ್ಪತ್ರ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ […]
ಡಾ.ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರಿಗೆ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ನೀಡಲಾಗುವ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳ ಪೈಕಿ ಈ ಭಾರಿ ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಡಾ.ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾಮೀಜಿಗಳ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ, ಪರಿಸರ ಕಾಳಜಿ, ಯುವಜನ ಸಬಲೀಕರಣ, ಸಮಸಮಾಜದ ನಿರ್ಮಾಣ ಹಾಗೂ ರಾಷ್ಟ್ರೀಯತೆಯ ಸೇವಾ ಕಾರ್ಯಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ […]
ಯೋಗ ನಡಿಗೆ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆಯೋಗವನ್ನು ಜೀವನದ ಭಾಗವಾಗಿಸಿಕೊಳ್ಳಿ

ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯೋಗದ ಪಾತ್ರ ದೊಡ್ಡದಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಆಯುಷ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಯೋಗ ನಡಿಗೆ ಜಾಥಾ’ಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯ ನಿರ್ಲಕ್ಷಿಸಿ ಆಸ್ತಿ, ಹಣದ ಬೆನ್ನತ್ತುತ್ತಿದ್ದಾರೆ. ಕೊನೆಗೆ ಅದೇ ಆರೋಗ್ಯ ಕಾಪಾಡಿಕೊಳ್ಳಲು […]