ಶಿಕ್ಷಣದ ಜೊತೆಗೆ ಸಂಸ್ಕಾರ, ಜ್ಞಾನ ಮತ್ತು ಮಾನವೀಯತೆ ಬೆಳೆಸಿಕೊಳ್ಳಿ- ಶಾಸಕ ಟಿ. ರಘುಮೂರ್ತಿ ಹೇಳಿಕೆ

ವರದಿ:- ಅರುಣ್ ಕುಮಾರ್.ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ:- ನಮ್ಮ ಮಕ್ಕಳು ಕೇವಲ ಉದ್ಯೋಗ ಪಡೆಯುವಷ್ಟು ಶಿಕ್ಷಣ ಪಡೆದರೆ ಸಾಲದು; ಸಮಾಜಕ್ಕೆ ಬೆಳಕು ನೀಡುವ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಸಂಸ್ಕಾರ, ಜ್ಞಾನ ಮತ್ತು ಮಾನವೀಯತೆ ಇರಬೇಕು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.ಶ್ರೀ.ಷ. ಬ್ರ.ಗುರುಶಾಂತೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿನಗರದ ವೀರಶೈವ ಲಿಂಗಾಯತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಗೌರವ ಸಮರ್ಪಣೆ ಸಮಾರಂಭದ ಕಾರ್ಯಕ್ರಮವನ್ನು ಬೆಂಗಳೂರು ರಸ್ತೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ […]
ವಿಷಮುಕ್ತ ಆಹಾರ ಉತ್ಪಾದನೆಗೆ ಸಹಜ ಕೃಷಿ ಅನಿವಾರ್ಯ-ಪ್ರಗತಿಪರ ಕೃಷಿಕ ರಾಘವ

ಜಪಾನಿನ ಸಹಜ ಕೃಷಿಯ ಹರಿಕಾರ ಮಸನೊಬು ಫುಕುವೋಕ ಅವರ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ ಕನಿಷ್ಠ ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟದ ವಿಷಮುಕ್ತ ಆಹಾರ ಉತ್ಪಾದನೆ ಮಾಡಲು ಸಾಧ್ಯ ಎಂದು ದಾವಣಗೆರೆಯ ಐಕಾಂತಿಕ ತೋಟದ ಪ್ರಗತಿಪರ ಸಹಜ ಕೃಷಿಕ ರಾಘವ ಅವರು ಪ್ರತಿಪಾದಿಸಿದರು.ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಐಕಾಂತಿಕ ಜಾಗತಿಕ ಪಂಗಡ ಮತ್ತು ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಟ್ರಸ್ಟ್ ಸಹಯೋಗದಲ್ಲಿ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಹೋಬಳಿಯ ರಂಗಾಪುರದ ಋಷಿ ಗುರುಕುಲಂ ಆಶ್ರಮದಲ್ಲಿ […]
ಕ್ಯಾದಿಗೆರೆ: ಶಾಲಾ ಸಂಸತ್ತು ಚುನಾವಣೆಪ್ರಜಾಪ್ರಭುತ್ವದ ಭದ್ರ ಬುನಾದಿಗೆ ಶಾಲೆಗಳಿಂದಲೇ ಕೊಡುಗೆ

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಚುನಾವಣೆಗಳೇ ಭದ್ರ ಬುನಾದಿ. ಇವು ಪಾರದರ್ಶಕ ಹಾಗೂ ಪ್ರಾಮಾಣಿಕವಾಗಿ ನಡೆದಾಗ ಮಾತ್ರ ಭವ್ಯ ಭಾರತದ ಕನಸು ನನಸಾಗಲು ಸಾಧ್ಯ ಎಂದು ಕ್ಯಾದಿಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮೀನಾಕ್ಷಮ್ಮ ತಿಳಿಸಿದರು.ಚಿತ್ರದುರ್ಗ ತಾಲ್ಲೂಕಿನ ಕ್ಯಾದಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ 2026-27ನೇ ಸಾಲಿನ ಶಾಲಾ ಸಂಸತ್ತಿನ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಶಾಲೆಯ 1 ರಿಂದ 7ನೇ ತರಗತಿಯ ಒಟ್ಟು 101 ವಿದ್ಯಾರ್ಥಿಗಳು ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ […]
ಗರ್ಭ ನಿರೋಧಕ ಇಂಪ್ಲಾಂಟ್ ಒಂದು ಆಧುನಿಕ ಸುರಕ್ಷಿತ ಮತ್ತು ಸುಲಭ ವಿಧಾನ-ಡಾ.ಚಂದ್ರಿಕಾ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್12:ಗರ್ಭನಿರೋಧಕ ಇಂಪ್ಲಾಂಟ್ ಒಂದು ಆಧುನಿಕ ಸುರಕ್ಷಿತ ಮತ್ತು ಸುಲಭ ವಿಧಾನ ಎಂದು ಬೆಂಗಳೂರಿನ ವಿಕಾಸಸೌಧದ ಕುಟುಂಬ ಕಲ್ಯಾಣ ವಿಭಾಗದ ಉಪ ನಿರ್ದೇಶಕರಾದ ಡಾ. ಚಂದ್ರಿಕಾ ತಿಳಿಸಿದರು.ನಗರದ ಜಿಲ್ಲಾ ಆಸ್ಪತ್ರೆ ಆವರಣದ ಬಿ.ಸಿ. ರಾಯ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಹೆರಿಗೆ ಮತ್ತು ಸ್ತ್ರೀ ರೋಗ ತಜ್ಞರಿಗೆ ಆಯೋಜಿಸಿದ್ದ ನೂತನ ‘ಗರ್ಭನಿರೋಧಕ ಇಂಪ್ಲಾಂಟ್’ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭಾರತದಲ್ಲಿ ಕರ್ನಾಟಕ ಸೇರಿದಂತೆ 2023 ರಿಂದಲೇ ಈ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಮೊದಲ ಹಂತದಲ್ಲಿ ರಾಜ್ಯದ 13 ಜಿಲ್ಲೆಗಳಲ್ಲಿ […]
ಸಂಪೂರ್ಣ ಜಿಲ್ಲೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳಲ್ಲಿ ಮನವಿ

ರೈತರೊಂದಿಗಿನ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿಕೆ ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಯ ಯಾವುದೇ ಭಾಗಗಳು ಬಿಟ್ಟು ಹೋಗದಂತೆ, ಸಂಪೂರ್ಣ ಜಿಲ್ಲೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆ ಅನುಷ್ಠಾನ ಮಾಡುವಂತೆ, ಶನಿವಾರ ಬೆಂಗಳೂರಿನಲ್ಲಿ ನಡೆಯಲ್ಲಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ, ಜಿಲ್ಲೆಯ ರೈತರ ಪರವಾಗಿ ಮನವಿ ಮಾಡುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಗುರುವಾರ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದ ಕುರಿತಂತೆ ಹೊಳಲ್ಕೆರೆ ಭಾಗದ ರೈತರ ಸಮಸ್ಯೆಗಳ ಕುರಿತು ಸಭೆ ನಡೆಸಿ ಅವರು ಮಾತನಾಡಿದರು.ಪ್ರತಿ ತಾಲ್ಲೂಕುವಾರು ಸೂಕ್ಷ್ಮ ಹಾಗೂ […]
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಜಾಗೃತಿ ಜಾಥಾಕ್ಕೆ ನ್ಯಾಯಾಧೀಶ ಡಿ.ಜೆ.ಸುದೀನ್ ಕುಮಾರ್ ಚಾಲನೆ ಬಾಲಕಾರ್ಮಿಕ ಪದ್ಧತಿಯನ್ನು ಕೇವಲ ವಿರೋಧಿಸುವುದಲ್ಲ, ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್12:ಬಾಲಕಾರ್ಮಿಕ ಮತ್ತು ಬಾಲ ಕಿಶೋರ ಕಾರ್ಮಿಕ ಪದ್ಧತಿಯನ್ನು ಕೇವಲ ವಿರೋಧಿಸುವುದಲ್ಲ, ಅದನ್ನು ಸಮಾಜದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಿ.ಜೆ.ಸುದೀನ್ ಕುಮಾರ್ ಅವರು ಕರೆ ನೀಡಿದರು.ನಗರದ ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲಾ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ವಕೀಲರ ಸಂಘ, ಜಿಲ್ಲಾ ಬಾಲ […]
ಬಾಲಕಾರ್ಮಿಕ ಮುಕ್ತ ಸಮಾಜದಿಂದ ದೇಶದ ಭವಿಷ್ಯ ಉಜ್ವಲ – ಆರ್. ಶಿವಣ್ಣ

ವರದಿ:- ಅರುಣ್ ಕುಮಾರ್. ಎಸ್(ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ: “ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುವ ವ್ಯವಸ್ಥೆಗೆ ತಿಲಾಂಜಲಿ ಹಾಡಿದಾಗ ಮಾತ್ರ ಅವರ ಭವಿಷ್ಯ ರೂಪಿಸಲು ಸಾಧ್ಯ. ಆ ಮೂಲಕ ಅವರು ದೇಶದ ಅತ್ಯುನ್ನತ ಸೇವೆಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ,” ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಆರ್. ಶಿವಣ್ಣ ತಿಳಿಸಿದರು. ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ […]
ಸಮಾಜ ಮುಖಿ ಕೆಲಸಗಳು ಎಲ್ಲಿರುತ್ತೋ ಅಲ್ಲಿ ಖಂಡಿತ ಜಯ ಸಿಕ್ಕೆ ಸಿಗುತ್ತದೆ: ಟಿ. ರಘುಮೂರ್ತಿ

ಟಿ.ರಘುಮೂರ್ತಿ ಯುವ ಸೇನೆ ಲೋಗೋ ಬಿಡುಗಡೆ ವರದಿ:- ಅರುಣ್ ಕುಮಾರ್. ಎಸ್. (ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ, ಜೂನ್. 11 : ಸಮಾಜ ಮುಖಿ ಕೆಲಸಗಳು ಎಲ್ಲಿರುತ್ತೋ ಅಲ್ಲಿ ಖಂಡಿತ ಜಯ ಸಿಕ್ಕೆ ಸಿಗುತ್ತದೆ. ಹಾಗಾಗಿ ನಾನು ಮೂರನೆ ಬಾರಿಗೆ ಚಳ್ಳಕೆರೆ ಶಾಸಕನಾಗಿ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆಂದು ಶಾಸಕ ಟಿ.ರಘುಮೂರ್ತಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.ತಮ್ಮ 63 ನೇ ಜನ್ಮದಿನದ ಅಂಗವಾಗಿ ಬುಧವಾರ ಒನಕೆ ಓಬವ್ವ ವೃತ್ತದಲ್ಲಿ ಟಿ.ರಘುಮೂರ್ತಿ ಯುವ ಸೇನೆ, ಭೂಮಿ ಗೀತಾ ಪ್ರಾಪರ್ಟಿಸ್, ಅಹೋಬಲ ಟಿ.ವಿ.ಎಸ್. ಹಾಗೂ […]
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಪರಿಸರ ಮಾಲಿನ್ಯಕ್ಕೆ ಕಡಿವಾಣ ಹಾಕಿ -ಜಿಲ್ಲಾ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜೂ.05:ಆಧುನಿಕ ಜೀವನಶೈಲಿಗೆ ಒಗ್ಗಿಕೊಂಡಿರುವ ನಾವು ಸ್ವಚ್ಛಂದ ಜೀವನ ನಡೆಸಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು, ಅದರಿಂದ ಪರಿಸರದ ಮೇಲಾಗುತ್ತಿರುವ ಹಾನಿಯ ಬಗ್ಗೆ ಯೋಚಿಸುತ್ತಿಲ್ಲ. ನಮ್ಮ ಸ್ವಾರ್ಥಕ್ಕಾಗಿ ಪರಿಸರ ಹಾಳುಗೆಡವುತ್ತಿರುವುದು ಆತಂಕಕಾರಿ ಸಂಗತಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಡಿ. ಮಹಾವರ್ಕರ್ ಕಳವಳ ವ್ಯಕ್ತಪಡಿಸಿದರು.ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಪರಿಸರ ದಿನಾಚರಣೆ’ ಅಂಗವಾಗಿ ಸಸಿ ನೆಡುವ […]
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ನಿಸರ್ಗ ಚಾರಿಟೇಬಲ್ ಟ್ರಸ್ಟ್” ಹಾಗೂ” ಡಾ. ಬಿಆರ್ ಅಂಬೇಡ್ಕರ್ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಘ ಮತ್ತು ಜೆ ಸಿ ಬೋಸ್ ಇಕೋ ಕ್ಲಬ್ ಇವರ ಸಂಯುತ್ತಾ ಆಶಯದಲ್ಲಿ ಪಾಲವ್ನಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ಪರಿಸರ ಜಾಗೃತಿ ಮತ್ತು ಸಸಿ ನೆಡೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಮುಖ್ಯ ಅತಿಥಿಗಳಾಗಿ ಪಿಡಿಒ ಬಸವರಾಜ್ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಸಾಂಸ್ಕೃತಿಕ ಸಂಘ ಹಾಗೂ ನಿಸರ್ಗ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರು ನಾಗರಾಜ್ ಟಿ ಅಪಾರ ಮುಖ್ಯ ಶಿಕ್ಷಕರಾದ ರಂಗ ದೇವ್, ವೆಂಕಟೇಶ್, M R ರಾಮಚಂದ್ರಪ್ಪ ನಾಗೇಂದ್ರಪ್ಪ ಚಿದಾನಂದ್ ಹಾಗೂ ಊರಿನ ಪ್ರಮುಖ ಮುಖಂಡರು ಉಪಸ್ಥಿತಿ ಇದ್ದರು