ತರಬೇತಿ ಕಾರ್ಯಾಗಾರದಲ್ಲಿ ಜಿ.ಪಂ ಸಿಇಓ ಡಾ.ಎಸ್.ಆಕಾಶ್ ಹೇಳಿಕೆವಿಬಿಜಿರಾಮ್‍ಜಿ ಯೋಜನೆಯಡಿ ವರ್ಷಕ್ಕೆ 125 ದಿನಗಳ ಉದ್ಯೋಗಾವಕಾಶ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‍ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) (ವಿಬಿಜಿರಾಮ್‍ಜಿ) ಯೋಜನೆಯಡಿ ಅರ್ಹ ಗ್ರಾಮೀಣ ಅಕುಶಲ ಕುಟುಂಬಕ್ಕೆ ವರ್ಷಕ್ಕೆ 125 ದಿನಗಳ ಕಡ್ಡಾಯ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಓ ಡಾ.ಎಸ್.ಆಕಾಶ್ ಹೇಳಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಎಲ್ಲಾ ಅನುಷ್ಠಾನ ಅಧಿಕಾರಿಗಳು, ಪಿಡಿಒಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ಒಂದು ದಿನದ ‘ವಿಬಿಜಿರಾಮ್‍ಜಿ’ ಯೋಜನೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ವಿಬಿಜಿರಾಮ್‍ಜಿ ಯೋಜನೆ ಜುಲೈ 1 […]

ರಕ್ತದಾನ ಶಿಬಿರದಲ್ಲಿ ಐಎಂಎ ಅಧ್ಯಕ್ಷ ಡಾ. ಎಲ್.ಪಾಲಾಕ್ಷಯ್ಯ ಹೇಳಿಕೆಯುವಕರು ರಕ್ತದಾನದ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು

ಚಿತ್ರದುರ್ಗ:ರಕ್ತವನ್ನು ಯಾವುದೇ ಕಾರ್ಖಾನೆಯಲ್ಲಿ ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಅದನ್ನು ಒಬ್ಬರಿಂದ ಮತ್ತೊಬ್ಬರಿಗೆ ದಾನ ಮಾಡಲು ಮಾತ್ರ ಸಾಧ್ಯ. ಯುವಜನತೆ ಹೆಚ್ಚೆಚ್ಚು ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಐಎಂಎ ಜಿಲ್ಲಾ ಅಧ್ಯಕ್ಷರಾದ ಡಾ.ಎಲ್.ಪಾಲಾಕ್ಷಯ್ಯ ಹೇಳಿದರು.ನಗರದ ಐ.ಎಂ.ಎ ಸಭಾಂಗಣದಲ್ಲಿ ಮಂಗಳವಾರ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಹಾಗೂ ಕೋಟೆನಾಡು ವೆಲ್ಫೇರ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ರಕ್ತದಾನ ಶಿಬಿರ’ ಉದ್ಘಾಟಿಸಿ ಅವರು […]

ಸಮಾಜಮುಖಿ ಕಾರ್ಯದೊಂದಿಗೆ ಜನ್ಮದಿನವನ್ನ ಅರ್ಥಪೂರ್ಣಗೊಳಿಸಿ: ಶಾಸಕ ಕೆ.ಸಿ ವೀರೇಂದ್ರ

ಕೆ.ಸಿ.ವಿ ಸಂರಕ್ಷಣಾ ವೇದಿಕೆ ವತಿಯಿಂದ ವಿನೋತನ ಹುಟ್ಟು ಹಬ್ಬ ಆಚರಣೆ ನಗರದ ವಿವಿಧ ಭಾಗಗಳಲ್ಲಿ ಅಭಿಮಾನಿಗಳಿಂದ ಹುಟ್ಟು ಹಬ್ಬ ಆಚರಣೆ ಚಿತ್ರದುರ್ಗ: ಬಣ್ಣ ಬಣ್ಣದ ಕೇಕ್ ಗಳನ್ನ ಕತ್ತರಿಸಿ ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಬದಲು ಸಮಾಜಮುಖಿ ಕಾರ್ಯಗಳೊಂದಿಗೆ ಜನ್ಮದಿನ ಆಚರಿಸಿಕೊಳ್ಳುವುದು ಅರ್ಥಪೂರ್ಣ ಜನ್ಮದಿನವಾಗುತ್ತದೆ. ಪ್ರತಿಯೊಬ್ಬರು ಒಂದೊAದು ಸಸಿ ನೆಟ್ಟು ದೊಡ್ಡ ಮರವನ್ನಾಗಿ ಬೆಳೆಸಿದರೆ ಸಕಲ ಜೀವರಾಶಿಗಳಿಗೆ ಉಸಿರಾಡಲು ಶುದ್ದವಾದ ಗಾಳಿ ಸಿಗಲಿದೆ ಹಾಗೂ ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಕೊಡುಗೆಯಾಗಿ ನೀಡಬಹುದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ […]

ಸಾವಯವ ಕೃಷಿ ಅಳವಡಿಕೆ ಇಂದಿನ ಅನಿವಾರ್ಯ              -ಸಹಾಯಕ ಕೃಷಿ ನಿರ್ದೇಶಕ ಆರ್.ರಜನಿಕಾಂತ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್29:ಮುಂದಿನ ಪೀಳಿಗೆಗೆ ಫಲವತ್ತಾದ ಮಣ್ಣು ಮತ್ತು ಆರೋಗ್ಯಕರ ಪರಿಸರ ಉಳಿಸಿಕೊಡಲು ರೈತರು ಸಾವಯವ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಇಂದಿನ ಅನಿವಾರ್ಯತೆಯಾಗಿದೆ ಎಂದು ಬಬ್ಬೂರುಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನಿಕಾಂತ ತಿಳಿಸಿದರು.ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ರಾಜ್ಯ ವಲಯ ಕೃಷಿ ಆಯುಕ್ತಾಲಯ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಆಸಕ್ತ ರೈತರಿಗಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ರೈತರಿಗೆ ಉತ್ತಮ ಪರಿಸರ ಮತ್ತು ಆರೋಗ್ಯಕ್ಕಾಗಿ ಔಷಧಿಯ ಸಸ್ಯಗಳು, […]

ಅಂತರಾಷ್ಟ್ರೀಯ ಎಂಎಸ್‍ಎಂಇ ದಿನಾಚರಣೆ ಅಂಗವಾಗಿ ಭಿತ್ತಿಪತ್ರ ಬಿಡುಗಡೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್29:ಭಾರತೀಯ ರಿಸರ್ವ್ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಲೀಡ್ ಬ್ಯಾಂಕ್ ವತಿಯಿಂದ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈಚೆಗೆ ನಡೆದ ಅಂತರಾಷ್ಟ್ರೀಯ ಎಂಎಸ್‍ಎಂಇ ದಿನಾಚರಣೆ ಅಂಗವಾಗಿ ಆರ್‍ಬಿಐ ವಿನ್ಯಾಸಗೊಳಿಸಿದ ಭಿತ್ತಿಪತ್ರಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಬಿಡುಗಡೆಗೊಳಿಸಿದರು.ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ಪಿ.ಪ್ರವೀಣ್ ಮಾತನಾಡಿ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ದೇಶದ ಆರ್ಥಿಕತೆಯ ಬೆನ್ನೆಲುಬು. ಉದ್ಯಮ್ ನೋಂದಣಿ ಮಾಡಿಕೊಂಡರೆ ಸರ್ಕಾರದ ಎಲ್ಲ ಯೋಜನೆಗಳ ಲಾಭ ಪಡೆಯಬಹುದು ಎಂದು ಮಾಹಿತಿ ನೀಡಿದ ಅವರು, ಈ […]

ಕಾಂಗ್ರೆಸ್ ಟಿಕೆಟ್‌ಗೆ ಆರ್. ಮಂಜುನಾಥ್ ಭರವಸೆ: “ನಾಯಕತ್ವ ನನ್ನನ್ನು ಕೈಹಿಡಿಯಲಿದೆ”

ಹಿರಿಯೂರು , ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ತಮಗೇ ದೊರೆಯುವ ವಿಶ್ವಾಸವಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆರ್. ಮಂಜುನಾಥ್ ತಿಳಿಸಿದರು. ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಯಾರೂ ನಿರೀಕ್ಷಿಸದ ರಾಜಕೀಯ ಬೆಳವಣಿಗೆಯಾಗಿದ್ದು, ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ತಾಲೂಕು ಮಟ್ಟದಲ್ಲಿ ಸಂಘಟಿಸಿ ಬಲಪಡಿಸುವ ಕೆಲಸದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಹೇಳಿದರು. 1994ರಲ್ಲಿ ಕಾಂಗ್ರೆಸ್ ಪಕ್ಷ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾಗ […]

ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ: ಜಾಗೃತಿ ಜಾಥಾಕ್ಕೆ ಚಾಲನೆಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು                         -ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್

ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗಬಾರದು ಎಂದು ಉಪವಿಭಾಗಾಧಿಕಾರಿ ಡಾ. ಕಾಂತರಾಜ್ ಹೇಳಿದರು.ನಗರದ ಜಿಲ್ಲಾಆಸ್ಪತ್ರ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ […]

ಪಿಎಂ-ವಿಬಿಆರ್‌ವೈ ಫಲಾನುಭವಿಗಳಿಗೆ ಸೌಲಭ್ಯ ಗೋವಿಂದ ಎಂ ಕಾರಜೋಳ ಹೇಳಿಕೆ ಯುವಜನರ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧ

ಯುವಜನತೆಗೆ ಕೇವಲ ಉದ್ಯೋಗದ ಆಶ್ವಾಸನೆ ನೀಡದೆ, ಅವರ ಕೈಗಳಿಗೆ ನೇರವಾದ ಶಕ್ತಿ ತುಂಬುವುದು ‘ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್‌ಗಾರ್ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಯುವಜನರ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಇಪಿಎಫ್‌ಒ ಪ್ರಾದೇಶಿಕ ಕಚೇರಿ ಬಳ್ಳಾರಿ ವತಿಯಿಂದ, ನಗರದ ಎಸ್‌ಜೆಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಸಿವಿಲ್ ವಿಭಾಗದ ಸರ್.ಎಂ.ವಿ. ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ‘ಪ್ರಧಾನ ಮಂತ್ರಿ ವಿಕಸಿತ ಭಾರತ […]

ಚನ್ನಯ್ಯನಹಟ್ಟಿ: ಅಂತರ್ಜಾತಿ ವಿವಾಹಿತ ನವಜೋಡಿಗೆ ಅಧಿಕಾರಿಗಳು, ಅಟ್ರಾಸಿಟಿ ಸಮಿತಿ ಸದಸ್ಯರಿಂದ ಧೈರ್ಯ: ಸೌಲಭ್ಯಗಳ ಭರವಸೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್19:ಚಿತ್ರದುರ್ಗ ತಾಲ್ಲೂಕಿನ ಚನ್ನಯ್ಯನಹಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ಅಂತರ್ಜಾತಿ ವಿವಾಹವಾಗಿದ್ದ ನವಜೋಡಿಯನ್ನು ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿಗಳು ಹಾಗೂ ಅಟ್ರಾಸಿಟಿ ಸಮಿತಿ ಸದಸ್ಯರು ಖುದ್ದಾಗಿ ಭೇಟಿ ಮಾಡಿ, ಕಾನೂನು ರಕ್ಷಣೆ ಹಾಗೂ ಇಲಾಖೆಯ ಸೌಲಭ್ಯಗಳ ಭರವಸೆ ನೀಡುವ ಮೂಲಕ ಧೈರ್ಯ ತುಂಬಿದ್ದಾರೆ.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಓ. ಪರಮೇಶ್ವರಪ್ಪ ಅವರು ನವಜೋಡಿಯನ್ನು ಭೇಟಿಯಾಗಿ ಮಾತನಾಡಿ, ಯಾವುದೇ ಕಾರಣಕ್ಕೂ ನಿಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಬಾರದು, ಅದನ್ನು ಮುಂದುವರಿಸಬೇಕು ಎಂದು ಸಲಹೆ ನೀಡಿದರು. ಅಲ್ಲದೆ, ಆದಷ್ಟು ಬೇಗ […]

ಯುವತಿಯರು ಅಸ್ತಿತ್ವ ಕಳೆದುಕೊಳ್ಳದೆ ಗುರಿಗಳತ್ತ ಸಾಗಿ: ಕವಿತಾ ರೆಡ್ಡಿ

ಕಾಗಾಜ್ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಚಿತ್ರದುರ್ಗ: ಯುವತಿಯರು ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳದೆ, ಭಾರತದ ಯುವಶಕ್ತಿ ನಾವೇ ಎಂದು  ಪ್ರೇರೇಪಿತರಾಗಿ, ಗುರಿಗಳತ್ತ ಸಾಗಬೇಕೆಂದು ಕಾಗಜ್ ಫೌಂಡೇಶನ್ ಸಂಸ್ಥಾಪಕಿ ಕವಿತಾ ರೆಡ್ಡಿ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು. ನಗರದ ಪತ್ರಿಕೆ ಭವನದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಾವಿತ್ರಿ ಬಾಯಿ ಬಾಪುಲೆ ಮತ್ತು ಫಾತಿಮಾ ಶೇಖ್ ಅವರ ಸ್ಮರಣಾರ್ಥಕವಾಗಿ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ […]