‘ಟಾಕ್ಸಿಕ್’ ಚಿತ್ರದ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದ ದೂರು

ಬೆಂಗಳೂರು, ಜೂನ್ 20: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಟೀಸರ್ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಚಿತ್ರದ ಟೀಸರ್‌ನಲ್ಲಿ ಕ್ರೈಸ್ತ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ದೃಶ್ಯಗಳಿವೆ ಎಂದು ಆರೋಪಿಸಿ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ (National Christian Federation – NCF) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಿದೆ. ಸಂಘಟನೆಯ ಆರೋಪದ ಪ್ರಕಾರ, ಟೀಸರ್‌ನಲ್ಲಿ ಸಮಾಧಿ ಪ್ರದೇಶ […]

ಕರ್ನಾಟಕದಲ್ಲಿ ‘ಪ್ರಜಾ ಸೇವಕ ಇಲಾಖೆ’ ಸ್ಥಾಪನೆ: ಜನರ ಸಮಸ್ಯೆಗಳಿಗೆ ಜಿಲ್ಲಾಮಟ್ಟದಲ್ಲೇ ಪರಿಹಾರ

ಬೆಂಗಳೂರು, ಜೂನ್ 20 ರಾಜ್ಯದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ D. K. Shivakumar ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಪ್ರಜಾ ಸೇವಕ ಇಲಾಖೆ’ (Praja Sevak Department) ಎಂಬ ಹೊಸ ಇಲಾಖೆಯನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಈ ಇಲಾಖೆಗೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಮಾತನಾಡಿ, ರಾಜ್ಯದ ವಿವಿಧ ಭಾಗಗಳಿಂದ ಪ್ರತಿದಿನ ಜನರು ತಮ್ಮ ಸಮಸ್ಯೆಗಳು, ಬೇಡಿಕೆಗಳು […]

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸಭೆ: ಜನಸೇವೆಗೆ ಹೊಸ ದಿಕ್ಕು, ಅಭಿವೃದ್ಧಿಗೆ ವೇಗ

ಬೆಂಗಳೂರು, ಜೂನ್ 20: ಕರ್ನಾಟಕ ಮುಖ್ಯಮಂತ್ರಿ D. K. Shivakumar ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ರಾಜ್ಯದ ಆಡಳಿತ ಸುಧಾರಣೆ, ಜನಸೇವಾ ವ್ಯವಸ್ಥೆಯ ಬಲವರ್ಧನೆ, ಮೂಲಸೌಕರ್ಯ ಅಭಿವೃದ್ಧಿ, ನೀರಾವರಿ ಯೋಜನೆಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ರಾಜ್ಯದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಡಿ.ಕೆ. ಶಿವಕುಮಾರ್ ಹಲವು ಹೊಸ ಯೋಜನೆಗಳನ್ನು ಜಾರಿಗೆ […]

ಹಿರಿಯ ಸಾಹಿತಿ, ಪತ್ರಕರ್ತ ಶ್ರೀ ಜಿ.ಎಸ್. ಉಜ್ಜಿನಪ್ಪ ಇನ್ನಿಲ್ಲ…

(ಜನನ : 30-10-1939, ಮರಣ : 20-06-2026.) ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಗೌನಹಳ್ಳಿಯ ತಂದೆ ಗೊಂಚಿಗಾರ ಸಿದ್ದಯ್ಯ, ತಾಯಿ ಲಿಂಗಮ್ಮ ದಂಪತಿಗಳ ಹಿರಿಯ ಮಗನಾಗಿ ದಿ: 30.10.1939 ರಲ್ಲಿ ಜನಿಸಿದರು.ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎ ಪದವಿ (1962), ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ನಿಂದ ಡಿಎಸ್‌ಎಸ್‌ಎ ಸ್ನಾತಕೋತ್ತರ ಡಿಪ್ಲೋಮಾ (1965), ಅಲ್ಪಕಾಲ ಮಧುಗಿರಿ ತಾಲ್ಲೂಕಿನ ದಂಡಿನದಿಬ್ಬ ಗ್ರಾಮದಲ್ಲಿ ಶಿಕ್ಷಕರಾಗಿದ್ದರು (1962), ಬೆಂಗಳೂರಿನ ಗಾಂಧೀನಗರದಲ್ಲಿರುವ ಆರ್ಯ ವಿದ್ಯಾಶಾಲಾ ಪ್ರೌಢಶಾಲೆಯಲ್ಲಿ (1965), ಅಧ್ಯಾಪಕರಾಗಿ ಕೆಲಸ, ದೂರದ ಗುಲ್ಬರ್ಗಾದ ಎಂ.ಎಸ್.ಕೆ […]

ಹಿರಿಯೂರು–ಸಂಗೇನಹಳ್ಳಿ ಹೊಸ ಬಸ್ ಮಾರ್ಗ ಉದ್ಘಾಟನೆ: ಗ್ರಾಮಸ್ಥರಲ್ಲಿ ಹರ್ಷ

ಹಿರಿಯೂರು: ಹಿರಿಯೂರು ಪ್ರದೇಶದ ಜನತೆಗೆ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಹಿರಿಯೂರು–ಮಸ್ಕಲ್–ಕುಡಲಹಳ್ಳಿ–ಈಶ್ವರಗೇರಿ–ಕಂಬತ್ನಹಳ್ಳಿ–ಸಂಗೇನಹಳ್ಳಿ ಮಾರ್ಗದಲ್ಲಿ ಹೊಸ ಬಸ್ ಸೇವೆಯನ್ನು ಇಂದು ಅಧಿಕೃತವಾಗಿ ಪ್ರಾರಂಭಿಸಲಾಯಿತು. ಬಸ್‌ಗೆ ಪರಂಪರೆಯಂತೆ ಬಾಳೆ ಎಲೆ ಅಲಂಕರಿಸಿ, ಗ್ರಾಮಸ್ಥರ ಸಮ್ಮುಖದಲ್ಲಿ ಪೂಜೆ ನೆರವೇರಿಸಲಾಯಿತು. ಈ ಹೊಸ ಮಾರ್ಗದ ಮೂಲಕ ಗ್ರಾಮಗಳ ನಡುವೆ ಸಂಚಾರ ಸುಲಭವಾಗಲಿದ್ದು, ವಿದ್ಯಾರ್ಥಿಗಳು, ರೈತರು ಹಾಗೂ ದೈನಂದಿನ ಪ್ರಯಾಣಿಕರಿಗೆ ಇದು ದೊಡ್ಡ ಅನುಕೂಲವಾಗಲಿದೆ ಎಂದು ಸ್ಥಳೀಯರು ಸಂತೋಷ ವ್ಯಕ್ತಪಡಿಸಿದ್ದಾರೆ. ಬಸ್ ಹಿರಿಯೂರಿನಿಂದ ಪ್ರಾರಂಭವಾಗಿ ಮಸ್ಕಲ್, ಕುಡಲಹಳ್ಳಿ, ಈಶ್ವರಗೇರಿ, ಕಂಬತ್ನಹಳ್ಳಿ, ಸಂಗೇನಹಳ್ಳಿ ಮಾರ್ಗವಾಗಿ ಸಂಚರಿಸಿ, ಮತ್ತೆ […]

ಪಿಎಂ-ವಿಬಿಆರ್‌ವೈ ಫಲಾನುಭವಿಗಳಿಗೆ ಸೌಲಭ್ಯ ಗೋವಿಂದ ಎಂ ಕಾರಜೋಳ ಹೇಳಿಕೆ ಯುವಜನರ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧ

ಯುವಜನತೆಗೆ ಕೇವಲ ಉದ್ಯೋಗದ ಆಶ್ವಾಸನೆ ನೀಡದೆ, ಅವರ ಕೈಗಳಿಗೆ ನೇರವಾದ ಶಕ್ತಿ ತುಂಬುವುದು ‘ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್‌ಗಾರ್ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಯುವಜನರ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಇಪಿಎಫ್‌ಒ ಪ್ರಾದೇಶಿಕ ಕಚೇರಿ ಬಳ್ಳಾರಿ ವತಿಯಿಂದ, ನಗರದ ಎಸ್‌ಜೆಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಸಿವಿಲ್ ವಿಭಾಗದ ಸರ್.ಎಂ.ವಿ. ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ‘ಪ್ರಧಾನ ಮಂತ್ರಿ ವಿಕಸಿತ ಭಾರತ […]

ಚನ್ನಯ್ಯನಹಟ್ಟಿ: ಅಂತರ್ಜಾತಿ ವಿವಾಹಿತ ನವಜೋಡಿಗೆ ಅಧಿಕಾರಿಗಳು, ಅಟ್ರಾಸಿಟಿ ಸಮಿತಿ ಸದಸ್ಯರಿಂದ ಧೈರ್ಯ: ಸೌಲಭ್ಯಗಳ ಭರವಸೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್19:ಚಿತ್ರದುರ್ಗ ತಾಲ್ಲೂಕಿನ ಚನ್ನಯ್ಯನಹಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ಅಂತರ್ಜಾತಿ ವಿವಾಹವಾಗಿದ್ದ ನವಜೋಡಿಯನ್ನು ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿಗಳು ಹಾಗೂ ಅಟ್ರಾಸಿಟಿ ಸಮಿತಿ ಸದಸ್ಯರು ಖುದ್ದಾಗಿ ಭೇಟಿ ಮಾಡಿ, ಕಾನೂನು ರಕ್ಷಣೆ ಹಾಗೂ ಇಲಾಖೆಯ ಸೌಲಭ್ಯಗಳ ಭರವಸೆ ನೀಡುವ ಮೂಲಕ ಧೈರ್ಯ ತುಂಬಿದ್ದಾರೆ.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಓ. ಪರಮೇಶ್ವರಪ್ಪ ಅವರು ನವಜೋಡಿಯನ್ನು ಭೇಟಿಯಾಗಿ ಮಾತನಾಡಿ, ಯಾವುದೇ ಕಾರಣಕ್ಕೂ ನಿಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಬಾರದು, ಅದನ್ನು ಮುಂದುವರಿಸಬೇಕು ಎಂದು ಸಲಹೆ ನೀಡಿದರು. ಅಲ್ಲದೆ, ಆದಷ್ಟು ಬೇಗ […]

ಯುವತಿಯರು ಅಸ್ತಿತ್ವ ಕಳೆದುಕೊಳ್ಳದೆ ಗುರಿಗಳತ್ತ ಸಾಗಿ: ಕವಿತಾ ರೆಡ್ಡಿ

ಕಾಗಾಜ್ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಚಿತ್ರದುರ್ಗ: ಯುವತಿಯರು ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳದೆ, ಭಾರತದ ಯುವಶಕ್ತಿ ನಾವೇ ಎಂದು  ಪ್ರೇರೇಪಿತರಾಗಿ, ಗುರಿಗಳತ್ತ ಸಾಗಬೇಕೆಂದು ಕಾಗಜ್ ಫೌಂಡೇಶನ್ ಸಂಸ್ಥಾಪಕಿ ಕವಿತಾ ರೆಡ್ಡಿ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು. ನಗರದ ಪತ್ರಿಕೆ ಭವನದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಾವಿತ್ರಿ ಬಾಯಿ ಬಾಪುಲೆ ಮತ್ತು ಫಾತಿಮಾ ಶೇಖ್ ಅವರ ಸ್ಮರಣಾರ್ಥಕವಾಗಿ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ […]

ಜನರ ಧ್ವನಿಯಾಗಿ ಕಾಂಗ್ರೆಸ್ ಮತ್ತಷ್ಟು ಬಲಗೊಳ್ಳಲಿ:ಬಿ.ಕೆ. ಹರಿಪ್ರಸಾದ್ ನಾಯಕತ್ವದ ಮೇಲೆ ವಿಶ್ವಾಸ:- ಪವಿತ್ರ.ಪಿಕೆ

ರಾಹುಲ್ ಗಾಂಧಿಗೆ ಶುಭಾಶಯ, ಹರಿಪ್ರಸಾದ್‌ಗೆ ಬೆಂಬಲ: ಸಂಕಲ್ಪ ಸಮಾವೇಶಕ್ಕೆ ಚಿತ್ರದುರ್ಗದಿಂದ ಭಾರಿ ಸಿದ್ಧತೆ :- ವರದಿ:-ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ :-ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಆದ ರಾಹುಲ್ ಗಾಂಧಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತಾ, ಅವರ ನಾಯಕತ್ವದಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಹಾಗೂ ಯುವ ಜನರ ಆಶೋತ್ತರಗಳು ಮತ್ತಷ್ಟು ಬಲಗೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಪವಿತ್ರ ಪಿಕೆ ಚಿತ್ರದುರ್ಗ ಜಿಲ್ಲಾ ಮಹಿಳಾ ಘಟಕದ […]

ಗ್ಯಾರಂಟಿ ಯೋಜನೆಗಳು ದುರುಪಯೋಗವಾಗದಂತೆ ಎಚ್ಚರ ವಹಿಸಿ : ಆರ್.ಶಿವಣ್ಣ ಸೂಚನೆ

ವರದಿ:-ಅರುಣ್ ಕುಮಾರ್. ಎಸ್ ( ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ. ಜೂ.19: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಬೇಕು. ಯಾವುದೇ ಕಾರಣಕ್ಕೂ ಯೋಜನೆಗಳು ದುರುಪಯೋಗವಾಗದಂತೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಕಟ್ಟುನಿಟ್ಟಿನ ಸೂಚನೆ ನೀಡಿದರುನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಶುಕ್ರವಾರ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರುಗೃಹಲಕ್ಷ್ಮಿ ಯೋಜನೆಯಡಿ […]