ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನು ಗೆದ್ದವರೇ ನಿಜವಾದ ಸಂತ:ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ

ಅಖಿಲ ಕರ್ನಾಟಕ ಬಂಜಾರ (ಲಂಬಾಣಿ) ಗುರುಪೀಠದ ಶ್ರೀ ನಂದಮಸಂದ್ ಸೇವಲಾಲ್ ಸ್ವಾಮೀಜಿ ಮಾತನಾಡಿ. ಸಂತ ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯಕ್ಕೆ ಜ್ಞಾನ, ಅರಿವು ಮತ್ತು ಆಶ್ರಯ ನೀಡಿದ ಮಹಾನ್ ಗುರುಗಳಾಗಿದ್ದಾರೆ. ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನುಟಿ ಗೆದ್ದವರೇ ನಿಜವಾದ ಸಂತ ಎಂದು ಹೇಳಿದರು.ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ ಜಿಲ್ಲಾಧ್ಯಕ್ಷ ಗಿರೀಶ್ ನಾಯ್ಕ್ ಆರ್ , ವಿಶೇಷ ಉಪನ್ಯಾಸ ನೀಡಿ, ಸಂತ ಸೇವಾಲಾಲ್ ಅವರು ಬುಡಕಟ್ಟು ಜನರಲ್ಲಿ ಧೈರ್ಯ ಸಾಹಸ, […]
ಜೋ ಸೈಮನ್ – ಕನ್ನಡ ಚಿತ್ರರಂಗದ ದಿಗ್ಗಜ

ನಿಧನ: ಫೆಬ್ರವರಿ 13, 2026 ರಂದು ಬೆಂಗಳೂರಿನ ಕರ್ನಾಟಕ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸಭೆಯಲ್ಲಿ ಹೃದಯಾಘಾತದಿಂದ ಅವರು ಕುಸಿದು ಬಿದ್ದರು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾದರೂ, ಸಂಜೆ 4.30ರ ಸುಮಾರಿಗೆ ವೈದ್ಯರು ಅವರನ್ನು ಮೃತರೆಂದು ಘೋಷಿಸಿದರು. ಅವರು 80 ವರ್ಷ ವಯಸ್ಸು ಹೊಂದಿದ್ದರು. ಚಿತ್ರರಂಗದ ಕೊಡುಗೆ: 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಿರ್ದೇಶಕ, ನಟ ಹಾಗೂ ಲೇಖಕರಾಗಿ ಕೆಲಸ ಮಾಡಿದ್ದರು. ಅವರ ಪ್ರಸಿದ್ಧ ಚಿತ್ರಗಳಲ್ಲಿ ಸಾಹಸ ಸಿಂಹ, ಸ್ನೇಹದ ಕಡಲಲ್ಲಿ, ಸಿಂಹ ಜೋಡಿ, ಮಿಸ್ಟರ್ ವಾಸು ಸೇರಿವೆ.
🏆 ಕರ್ನಾಟಕ ಪ್ಯಾರಾ ಥ್ರೋಬಾಲ್ ತಂಡ-ದಕ್ಷಿಣ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ-ಬೆಳ್ಳಿ ಜಯ, ತುಮಕೂರಿನಲ್ಲಿ ಸನ್ಮಾನ

ಪತ್ರಿಕಾ ಪ್ರಕಟಣೆ ಗೆ ಡಿಸೆಂಬರ್ 6 ರಿಂದ 10, 2025 ರಂದು ಶ್ರೀಲಂಕಾ ರತ್ನಾಪುರದಲ್ಲಿ ನಡೆದ ಮೊದಲ ದಕ್ಷಿಣ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಪ್ಯಾರಾ ಥ್ರೋಬಾಲ್ ಆಟಗಾರರು ಪುರುಷರು ಮತ್ತು ಮಹಿಳೆಯರು ಭಾಗವಹಿಸಿದ್ದರು. ಮಹಿಳಾ ತಂಡವು ಚಿನ್ನದ 🥇 ಪದಕವನ್ನು ಗೆದ್ದಿತು. 1. ಮಂಜಮ್ಮ. 2. ಲಕ್ಷ್ಮಿ. 3. ಮಾಲತಿ ಇನಾಮಂತ್. ಪುರುಷರ ತಂಡವು ಬೆಳ್ಳಿ 🥈 ಪದಕವನ್ನು ಗೆದ್ದಿತು 1. ಪ್ರಕಾಶ್. 21.12.2025 ರಂದು ತುಮಕೂರು ಜಿಲ್ಲೆಯಲ್ಲಿ ಕನ್ನಡ ಸೇನೆಯಿಂದ ನಡೆದ ರಾಜೋತ್ಸವ ಹಾಗೂ ಬೆಳ್ಳಿ […]
ರಾಜ್ಯ ಹಾತ್‍ಕರ್ಗಾ ವಿಶೇಷ ಕೈಮಗ್ಗ ಮೇಳಕ್ಕೆ ಶಾಸಕ ಕೆ.ಎಸ್.ನವೀನ್ ಚಾಲನೆ

ಕೈಮಗ್ಗ ಉತ್ಪನ್ನಗಳಿಗೂ ಸಿಗಲಿ “ಎಂಎಸ್‍ಪಿ” ಕೈಮಗ್ಗ ನೇಕಾರರಿಂದ ತಯಾರಿಸಲ್ಪಟ್ಟ ಕೈಮಗ್ಗ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಸಿಗುವಂತಾಗಬೇಕು ಎಂದು ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಪ್ರಾಯಪಟ್ಟರು. ನಗರದ ವಿ.ಪಿ.ಬಡಾವಣೆಯ ಉಮಾಪತಿ ಕಲ್ಯಾಣ ಮಂಟಪದಲ್ಲಿ ಬುಧವಾರ ಸಂಜೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕøತ ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ಕಾರ್ಯಕ್ರಮ ಯೋಜನೆಯಡಿ ಗಾಂಧಿಜಯಂತಿ, ದಸರಾ ಹಬ್ಬದ ಪ್ರಯುಕ್ತ ಏರ್ಪಡಿಸಲಾದ ರಾಜ್ಯ ಹಾತ್‍ಕರ್ಗಾ ವಿಶೇಷ ಕೈಮಗ್ಗ ಮೇಳ-ವಸ್ತ್ರಾಂಜಲಿ- ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ […]
ಭಾರತೀಯ ಜನತಾ ಪಾರ್ಟಿ ಮೊಳಕಾಲ್ಮೂರು ಮಂಡಲ ವತಿಯಿಂದ ಶ್ರೀ ನರೇಂದ್ರ ಮೋದಿ ಜೀ ಯವರ 75ನೇ ಜನ್ಮದಿನ ಆಚರಣೆ

ಭಾರತೀಯ ಜನತಾ ಪಾರ್ಟಿ ಮೊಳಕಾಲ್ಮೂರು ಮಂಡಲ ವತಿಯಿಂದ ಇಂದು ದೇಶದ ಹೆಮ್ಮೆಯ ಧಣಿವರಿಯದ ನಾಯಕ ನಮ್ಮ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಜೀ ಜೀ ಯವರ 75 ನೇ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನ ಯೋಜನೆಯಡಿನಮ್ಮ ಪ್ರಧಾನಿಗಳ ಧೀರ್ಘಾಯುಷ್ಯ ಕೋರಿ ಪೂಜೆಯನ್ನು ಶ್ರೀ ಮಾರ್ಕಂಡೇಯ ಸ್ವಾಮಿ ದೇವಸ್ಥಾನ,ಮೊಳಕಾಲ್ಮುರು* ಮಾಡಲಾಯಿತು. ಮತ್ತುಪಟ್ಟಣದಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು – ಹಂಪಲು ಬ್ರೆಡ್ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ಶ್ರೀರಾಮರೆಡ್ಡಿ ಮತ್ತು ನಿಕಟಪೂರ್ವ ಅಧ್ಯಕ್ಷರಾದ […]
ಜೀ಼ಕನ್ನಡ – ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ,ಕಾಮಿಡಿಕಿಲಾಡಿಗಳು ಮಹಾ ಆಡಿಷನ್ ಚಿತ್ರದುರ್ಗದಲ್ಲಿ ಇದೇ ಶುಕ್ರವಾರದಂದು

ಪ್ರತಿಭೆಗಳನ್ನು ಗುರುತಿಸುವಲ್ಲಿ ನಂ.1 ಚಾನೆಲ್ ಆದ ಜೀ಼ಕನ್ನಡ ವಾಹಿನಿ ಈಗ ಮತ್ತೊಮ್ಮೆ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡುತ್ತಿದೆ.ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯುತ್ತಿದ್ದು, ನೀವು ಮುಂದಿನ ಡ್ಯಾನ್ಸಿಂಗ್ ಅಥವಾ ಕಾಮಿಡಿ ಕಿಂಗ್ ಆಗಬೇಕು ಅಂದ್ರೆ ಇಲ್ಲಿದೆ ನೋಡಿ ಸುವರ್ಣಾವಕಾಶ.ಪ್ರತಿಭೆ ಇದ್ದರೂ ಅವಕಾಶ ಸಿಗದೇ ಇರುವವವರಿಗೆ ಜೀ಼ಕನ್ನಡ ಒಂದು ಅತ್ಯತ್ತಮ ವೇದಿಕೆ ಕಲ್ಪಿಸಿಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಭಾಗವಹಿಸುವವರ ವಯೋಮಿತಿ 6 ರಿಂದ 60 ರವರೆಗೆ ಇರಬೇಕು ಮತ್ತು ನೀವು ಉತ್ತಮವಾಗಿ […]
ನಕಲಿ ವೈದ್ಯರ ಪತ್ತೆಗೆ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿಕೆ

ಪ್ರತಿ ತಾಲ್ಲೂಕಿನಲ್ಲೂ ಜಾರಿ ತಂಡಗಳಿಂದ ಶೋಧನೆ ನಕಲಿ ವೈದ್ಯರ ಪತ್ತೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿನ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆಯಡಿ, ಪ್ರತಿ ತಾಲ್ಲೂಕಿನಲ್ಲಿಯೂ ಪ್ರತ್ಯೇಕ ಜಾರಿ ತಂಡಗಳನ್ನು ರಚಿಸಿ ನಕಲಿ ವೈದ್ಯರ ಪತ್ತೆಗೆ ಶೋಧನೆ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಕೆ.ಪಿ.ಎಂ.ಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ ಅಧಿನಿಯಮ) ಕುರಿತು ಜರುಗಿದ ಜಿಲ್ಲಾ ಮಟ್ಟದ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ […]
ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ, ಕೂಡಲೇ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು, ಸೆಪ್ಟೆಂಬರ್ 16 ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಮಾಡುತ್ತಿರುವುದು ಅಕ್ರಮವಾಗಿದೆ. ಇದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಹೆಸರಲ್ಲಿ ಕಾಂಗ್ರೆಸ್ ಸರ್ಕಾರ ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ 9,600 ಎಕರೆ ಜಮೀನನ್ನು ಸ್ವಾಧೀನ ಮಾಡುತ್ತಿದೆ. ಈ ಪೈಕಿ 6,500 ಎಕರೆ ಕೃಷಿಭೂಮಿ ಇದೆ. ಇಲ್ಲಿ 10 ಲಕ್ಷಕ್ಕೂ ಅಧಿಕ ತೆಂಗು ಹಾಗೂ ಮಾವಿನ ಮರಗಳಿವೆ. ಪ್ರತಿ […]
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣ ಜಲ ವಿವಾದ ನ್ಯಾಯಮಂಡಳಿ (Krishna Water Disputes Tribunal) ಸಂಬಂಧಿಸಿದಂತೆ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದರು. ಈ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು:UKP-III ಯೋಜನೆಗೆ ಬಲ: ಅಲಮಟ್ಟಿ ಜಲಾಶಯದ ಎತ್ತರವನ್ನು 517 ಮೀಟರ್‌ನಿಂದ 524.2 ಮೀಟರ್‌ಗೆ ಹೆಚ್ಚಿಸುವ ಯೋಜನೆಗೆ ಸರ್ಕಾರ ಬದ್ಧವಾಗಿದೆ. ಇದರಿಂದ ಕೃಷ್ಣ ನದಿಯಿಂದ ಹೆಚ್ಚಿನ ನೀರನ್ನು ಸಂಗ್ರಹಿಸಲು ಸಾಧ್ಯವಾಗುತ್ತದೆ. 173 TMC ನೀರಿನ ಹಕ್ಕು: 2010ರಲ್ಲಿ KWDT-II ನೀಡಿದ ತೀರ್ಪಿನಲ್ಲಿ ಕರ್ನಾಟಕಕ್ಕೆ 173 TMC ನೀರು ಹಂಚಿಕೆ ಮಾಡಲಾಗಿದೆ. ಇದನ್ನು ಕೇಂದ್ರ ಸರ್ಕಾರ ಗಜೇಟ್‌ನಲ್ಲಿ ಪ್ರಕಟಿಸಬೇಕೆಂದು ಒತ್ತಾಯಿಸಿದರು. ಭೂಸ್ವಾಧೀನ ಮತ್ತು ಪರಿಹಾರ: ಯೋಜನೆಯ ಭಾಗವಾಗಿ ಸುಮಾರು 1.3 ಲಕ್ಷ ಎಕರೆ ಭೂಮಿ […]
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಇಂದಿನಿಂದ ಪ್ರಾರಂಭ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯನ್ನು ಇಂದಿನಿಂದ ನವೆಂಬರ್ 21 ರವರೆಗೆ ಬೆಳಿಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ. ಜಿ ಅವರು ತಿಳಿಸಿದರು. ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಲಾಗಿದ್ದ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಗಳೂರು ನಗರ ಜಿಲ್ಲಾ […]