ಆ.09ರಂದು ಆಂಜನೇಯ ಸ್ವಾಮಿಯ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ಇದೇ ಆಗಸ್ಟ್ 09ರಂದು ಶ್ರೀ ಆಂಜನೇಯ ಸ್ವಾಮಿಯ ಪುನರ್ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 8 ರಿಂದ 9 ಗಂಟೆಯವರೆಗೆ ಸಿಂಹ ಲಗ್ನದಲ್ಲಿ ಶ್ರೀ ಸ್ವಾಮಿಯ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಕೊಟ್ಟೂರು ಕಟ್ಟಿಮನೆ ಹಿರೇಮಠದ ಯೋಗಿ ರಾಜೇಂದ್ರ ಶಿವಚಾರ್ಯ ಸ್ವಾಮಿಗಳು ಸಾನಿಧ್ಯವಹಿಸುವರು.ಬೆಳಿಗ್ಗೆ 11 ರಿಂದ 12 ರವರೆಗೆ ತುಲಾ ಲಗ್ನದಲ್ಲಿ ಕಳಸ ಪ್ರತಿಷ್ಠಾಪನೆ ನಡೆಯಲಿದ್ದು, ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದಪುರಿ ಮಹಾಸ್ವಾಮಿಗಳು, ಶಿವಶರಣ ಮಾದಾರ […]

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ: ಜಿಲ್ಲಾ ಮಾದಿಗ ನೌಕರರ ಸಾಂಸ್ಕøತಿಕ ಸಂಘದ ವತಿಯಿಂದ ಇದೇ ಆಗಸ್ಟ್ 31ರಂದು ಭಾನುವಾರ ಚಿತ್ರದುರ್ಗ ನಗರದ ಕೆ.ಇ.ಬಿ ಸಮುದಾಯ ಭವನದಲ್ಲಿ 2024-25ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಪಡೆದ ಜಿಲ್ಲಾ  ಮಾದಿಗ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.ವಿದ್ಯಾರ್ಥಿಗಳು ತಮ್ಮ ಸ್ವ-ವಿವರದೊಂದಿಗೆ  ಅಂಕಪಟ್ಟಿ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್, ಎರಡು ಪಾಸ್‍ಪೋರ್ಟ್ ಸೈಜ್ ಫೋಟೋದೊಂದಿಗೆ ಅರ್ಜಿಯನ್ನು ಚಿತ್ರದುರ್ಗ ನಗರದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಗುರುಪೀಠಕ್ಕೆ […]